ನೇಲ್ ಪಾಲಿಶ್ ಹಚ್ಚಿದರೆ ಅಫ್ಘಾನಿಸ್ತಾನದ ಮಹಿಳೆಯರ ಬೆರಳೇ ಕಟ್!; ತಾಲಿಬಾನ್ ಹೊಸ ನಿಯಮ

Women in Afghanistan: ಅಫ್ಘಾನಿಸ್ತಾನದಲ್ಲಿರುವ ಮಹಿಳೆಯರು ಉಗುರಿಗೆ ನೇಲ್ ಪಾಲಿಶ್ ಹಚ್ಚಿಕೊಂಡರೆ ಅವರ ಕೈ ಬೆರಳನ್ನೇ ಕಟ್ ಮಾಡುವುದಾಗಿ ತಾಲಿಬಾನ್ ಎಚ್ಚರಿಕೆ ನೀಡಿದೆ. ಮಹಿಳೆಯರು ಜೀನ್ಸ್ ಧರಿಸುವಂತಿಲ್ಲ, ಮೈ ತುಂಬ ಬುರ್ಖಾ ಧರಿಸದೆ ಹೊರಗೆ ಓಡಾಡುವಂತಿಲ್ಲ.

ನೇಲ್ ಪಾಲಿಶ್ ಹಚ್ಚಿದರೆ ಅಫ್ಘಾನಿಸ್ತಾನದ ಮಹಿಳೆಯರ ಬೆರಳೇ ಕಟ್!; ತಾಲಿಬಾನ್ ಹೊಸ ನಿಯಮ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 24, 2021 | 6:29 PM

ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸದಿಂದ ಮಹಿಳೆಯರು ಪ್ರಾಣ ಭೀತಿ ಎದುರಿಸುತ್ತಿದ್ದಾರೆ. ತಾಲಿಬಾನ್ ವಶವಾಗಿರುವ ಅಫ್ಘಾನಿಸ್ತಾನದಲ್ಲಿ ಶಾಂತಿ ನೆಲೆಸುವಂತೆ ಮಾಡುವುದಾಗಿ ತಾಲಿಬಾನ್ ಸಂಘಟನೆ ಭರವಸೆ ನೀಡಿತ್ತು. ಆದರೆ, ಉಗ್ರರ ಆಡಳಿತದಿಂದ ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ನರಕ ದರ್ಶನವಾಗುತ್ತಿದೆ. ಅಫ್ಘಾನಿಸ್ತಾನದ 12ರಿಂದ 45 ವರ್ಷದೊಳಗಿನ ಮಹಿಳೆಯರನ್ನು ಮದುವೆಯಾಗಿ, ಲೈಂಗಿಕ ದಾಸಿಯರನ್ನಾಗಿ ಮಾಡಿಕೊಳ್ಳುತ್ತಿರುವ ತಾಲಿಬಾನ್ ಉಗ್ರರು ಮಹಿಳೆಯರ ಮೇಲೆ ಸಾಕಷ್ಟು ನಿರ್ಬಂಧಗಳನ್ನು ಹೇರಿದ್ದಾರೆ. ಮಹಿಳಾ ಪರ್ತಕರ್ತೆಯರು, ಆ್ಯಂಕರ್​ಗಳನ್ನು ವಾಪಾಸ್ ಮನೆಗೆ ಕಳುಹಿಸಲಾಗಿದ್ದು, ಮಹಿಳೆಯರು ಜೀನ್ಸ್ ಧರಿಸುವುದಕ್ಕೆ ನಿಷೇಧ ಹೇರಲಾಗಿದೆ.

ಅಫ್ಘಾನಿಸ್ತಾನದಲ್ಲಿರುವ ಮಹಿಳೆಯರು ಉಗುರಿಗೆ ನೇಲ್ ಪಾಲಿಶ್ ಹಚ್ಚಿಕೊಂಡರೆ ಅವರ ಕೈ ಬೆರಳನ್ನೇ ಕಟ್ ಮಾಡುವುದಾಗಿ ತಾಲಿಬಾನ್ ಎಚ್ಚರಿಕೆ ನೀಡಿದೆ. ಮಹಿಳೆಯರು ಜೀನ್ಸ್ ಧರಿಸುವಂತಿಲ್ಲ, ಮೈ ತುಂಬ ಬುರ್ಖಾ ಧರಿಸದೆ ಹೊರಗೆ ಓಡಾಡುವಂತಿಲ್ಲ. ಒಂದುವೇಳೆ ಈ ನಿಯಮಗಳನ್ನು ಮೀರಿದರೆ ಆ ಮಹಿಳೆಯರಿಗೆ ಕಠಿಣ ಶಿಕ್ಷೆ ನೀಡಲಾಗುವುದು. ಇತ್ತೀಚೆಗೆ ಜೀನ್ಸ್ ಧರಿಸಿದ ಮಹಿಳೆಯರಿಗೆ ತಾಲಿಬಾನ್ ಉಗ್ರರು ಥಳಿಸಿದ ಘಟನೆಯೂ ನಡೆದಿತ್ತು. ಜೀನ್ಸ್ ಇಸ್ಲಾಂ ಧರ್ಮಕ್ಕೆ ವಿರುದ್ಧವಾಗಿದ್ದು, ಅದನ್ನು ಧರಿಸುವಂತಿಲ್ಲ ಎಂದು ಬಂದೂಕು ತೋರಿಸಿ, ಬೆದರಿಕೆಯೊಡ್ಡಿದ್ದರು.

ಕಂದಹಾರ್​ನಲ್ಲಿ ಮಹಿಳೆಯರು ಹಾಗೂ ಯುವತಿಯರಿಗೆ ಫತ್ವಾ ಹೊರಡಿಸಲಾಗಿದ್ದು, ನೇಲ್ ಪಾಲಿಶ್ ಹಚ್ಚಿಕೊಂಡರೆ ಬೆರಳನ್ನೇ ಕತ್ತರಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಹಾಗೇ, ಮಹಿಳೆಯರು ಹೈ ಹೀಲ್ಡ್​ ಚಪ್ಪಲಿಗಳನ್ನು ಕೂಡ ಧರಿಸುವಂತಿಲ್ಲ ಎಂದು ನಿರ್ಬಂಧ ವಿಧಿಸಲಾಗಿದೆ. ಈ ನಿರ್ಬಂಧಗಳಿಂದ ಅಫ್ಘಾನ್​ ಮಹಿಳೆಯರ ಪರಿಸ್ಥಿತಿ ಶೋಚನೀಯವಾಗಿದೆ.

ಅಫ್ಘಾನಿಸ್ತಾನ ಮಹಿಳೆಯರ ಪಾಲಿಗೆ ಮತ್ತೆ ಅತ್ಯಂತ ಭಯಾನಕ ಸ್ಥಳವಾಗಲಿದೆ ಎಂದು ತಜ್ಞರು ಮತ್ತು ಕಾರ್ಯಕರ್ತರು ಹೇಳಿದ್ದಾರೆ. ಕಳೆದ ಕೆಲವು ವಾರಗಳಿಂದಲೇ ಅಲ್ಲಿ ಹಲವಾರು ಸಾವುನೋವುಗಳು ಹಾಗೂ ಹಿಂಸಾಚಾರ ನಡೆದಿರುವ ಬಗ್ಗೆ ವರದಿಯಾಗಿದೆ. ಇದೇ ಸಂದರ್ಭದಲ್ಲಿ, ಸಾವಿರಾರು ಮಂದಿ ತಮ್ಮ ಮನೆಗಳನ್ನು ಬಿಟ್ಟು ಓಡಿಹೋಗಿದ್ದಾರೆ. ಮಹಿಳೆಯರು ಸಂಪೂರ್ಣವಾಗಿ ತಮ್ಮ ಮುಖ ಮುಚ್ಚಿಕೊಳ್ಳದೆ ಮತ್ತು ಪುರುಷ ಸಂಬಂಧಿ ಜೊತೆಗಿಲ್ಲದೆ ಮನೆಯಿಂದ ಹೊರಗೆ ಕಾಲಿಟ್ಟರೆ, ಅವರನ್ನು ತಾಲಿಬಾನಿ ಧಾರ್ಮಿಕ ಪೊಲೀಸರು ಸಾರ್ವಜನಿಕವಾಗಿ ಥಳಿಸುತ್ತಿದ್ದರು. ತಾಲಿಬಾನ್ ಹೆಂಗಸರ ಹಕ್ಕುಗಳನ್ನು ಗೌರವಿಸುವುದಾಗಿ ಹೇಳಿಕೊಂಡಿದ್ದರೂ, ಅಫ್ಘಾನಿಸ್ತಾನ ಮಹಿಳೆಯರಿಗೆ ನೀಡಿರುವ ಸ್ವಾತಂತ್ರ್ಯವನ್ನು ತಾಲಿಬಾನ್ ಖಂಡಿತವಾಗಿಯೂ ಕಿತ್ತುಕೊಳ್ಳಲಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಕಟ್ಟರ್ ಷರಿಯಾ ಕಾನೂನು ಜಾರಿ ಸಾಧ್ಯತೆ, ಮನೆಯಿಂದ ಹೊರ ಬರಲು ಹೆದರುತ್ತಿರುವ ಮಹಿಳೆಯರು

ನರಕವಾಗಿದೆ ಅಫ್ಘಾನಿಸ್ತಾನ; ಆಟವಾಡುವ ಮಕ್ಕಳೂ ಇಲ್ಲಿ ತಾಲಿಬಾನ್ ಉಗ್ರರ ಲೈಂಗಿಕ ಕ್ರಿಯೆಗೆ ಮೀಸಲು!

(afghanistan crisis: Taliban to cut off fingers of women for applying nail polish High Heels Slipper Banned)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ