ಆ. 31ರೊಳಗೆ ಅಫ್ಘಾನ್​ನಿಂದ ಸೇನೆ ಹಿಂಪಡೆಯದಿದ್ದರೆ ಅಪಾಯ ಎದುರಿಸಬೇಕಾದೀತು; ಅಮೆರಿಕಕ್ಕೆ ತಾಲಿಬಾನ್ ಎಚ್ಚರಿಕೆ

ಅಫ್ಘಾನಿಸ್ತಾನದಲ್ಲಿರುವ ಅಮೆರಿಕ ಸೇನೆಯನ್ನು ಆ. 31ರೊಳಗೆ ವಾಪಾಸ್ ಕರೆಸಿಕೊಳ್ಳದಿದ್ದರೆ ಅರದ ಪರಿಣಾಮವನ್ನು ಎದುರಿಸಬೇಕಾದೀತು ಎಂದು ತಾಲಿಬಾನ್ ಅಮೆರಿಕಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಆ. 31ರೊಳಗೆ ಅಫ್ಘಾನ್​ನಿಂದ ಸೇನೆ ಹಿಂಪಡೆಯದಿದ್ದರೆ ಅಪಾಯ ಎದುರಿಸಬೇಕಾದೀತು; ಅಮೆರಿಕಕ್ಕೆ ತಾಲಿಬಾನ್ ಎಚ್ಚರಿಕೆ
ಮಗುವನ್ನು ಉಳಿಸಲು ಅಮೆರಿಕ ಪಡೆಗೆ ನೀಡಿದ ಪೋಷಕರು
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 23, 2021 | 7:30 PM

ಕಾಬೂಲ್: ತಾಲಿಬಾನ್ ವಶದಲ್ಲಿರುವ ಅಫ್ಘಾನಿಸ್ತಾನದಲ್ಲಿ (Afghanistan) ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಅಮೆರಿಕ, ಭಾರತ, ರಷ್ಯಾ ಸೇರಿದಂತೆ ಹಲವು ದೇಶಗಳು ಮಿಲಿಟರಿ ವಿಮಾನಗಳ ಮೂಲಕ ಅಫ್ಘಾನ್​ನಲ್ಲಿ ನೆಲೆಸಿರುವ ತಮ್ಮ ಪ್ರಜೆಗಳನ್ನು ವಾಪಾಸ್ ಕರೆತಂದಿದ್ದಾರೆ. ಇನ್ನೂ ಅಫ್ಘಾನಿಸ್ತಾನದಲ್ಲಿರುವ ಅಮೆರಿಕ ಸೇನೆಯನ್ನು ಆ. 31ರೊಳಗೆ ವಾಪಾಸ್ ಕರೆಸಿಕೊಳ್ಳದಿದ್ದರೆ ಅರದ ಪರಿಣಾಮವನ್ನು ಎದುರಿಸಬೇಕಾದೀತು ಎಂದು ತಾಲಿಬಾನ್ (Taliban) ಅಮೆರಿಕಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಅಮೆರಿಕದ ಅಧ್ಯಕ್ಷ ಜೋ ಬಿಡೆನ್, ತಾಲಿಬಾನ್ ಮೇಲಿನ ನಿರ್ಬಂಧ ಸಡಿಲಿಕೆ ಸಾಧ್ಯವಿಲ್ಲ. ನಮ್ಮ ಮುಂದಿನ ನಿರ್ಧಾರ ತಾಲಿಬಾನ್​ ಸಂಘಟನೆಯ ನಡೆಯನ್ನು ಆಧರಿಸಿದೆ ಎಂದು ಹೇಳಿದ್ದರು. ಅಲ್ಲದೆ, ಅಫ್ಘಾನಿಸ್ತಾನವನ್ನು ತಾಲಿಬಾನ್‌ ವಶಪಡಿಸಿಕೊಂಡ ಮಾತ್ರಕ್ಕೆ ಈಗಾಗಲೇ ಅಫ್ಘಾನ್ ವಿರುದ್ಧ ಅಮೆರಿಕ ವಿಧಿಸಿರುವ ಕಠಿಣ ನಿರ್ಬಂಧಗಳನ್ನು ಕೈ ಬಿಡಲು ಸಾಧ್ಯವಿಲ್ಲ. ನಿರ್ಬಂಧ ಸಡಿಲಿಕೆ ತಾಲಿಬಾನ್‌ ನಡವಳಿಕೆಯನ್ನು ಅವಲಂಬಿಸಿರುತ್ತದೆ. ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಲೂ ಭದ್ರತಾ ವಲಯವನ್ನು ಇನ್ನಷ್ಟು ವಿಸ್ತರಿಸಲಾಗುವುದು. ಆಗಸ್ಟ್‌ 31ರೊಳಗೆ ಪೂರ್ಣಗೊಳ್ಳಲಿರುವ, ಸೇನಾ ಪಡೆಗಳ ವಾಪಾಸಾತಿ ಅವಧಿ ವಿಸ್ತರಿಸುವ ಸಾಧ್ಯತೆಗಳ ಬಗ್ಗೆ ಅಮೆರಿಕಾ ಭದ್ರತಾ ಪಡೆಗಳೊಂದಿಗೆ ಚರ್ಚಿಸುತ್ತೇವೆ ಎಂದು ಕೂಡ ಜೋ ಬಿಡೆನ್ ಮಾಧ್ಯಮಗಳಿಗೆ ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಎಚ್ಚರಿಕೆ ಸಂದೇಶವನ್ನು ರವಾನಿಸಿರುವ ತಾಲಿಬಾನ್ಆ . 31ರೊಳಗೆ ಅಫ್ಘಾನಿಸ್ತಾನದಿಂದ ಅಮೆರಿಕ ತನ್ನ ಸೇನೆಯನ್ನು ವಾಪಾಸ್ ಕರೆಸಿಕೊಳ್ಳದೆ ಅದರಿಂದಾಗುವ ಪರಿಣಾಮಗಳಿಗೆ ನಾವು ಹೊಣೆಯಲ್ಲ. ಇದು ರೆಡ್ ಲೈನ್ ಆಗಿದ್ದು, ಈ ಗಡುವನ್ನು ಮೀರಿ ಅಮೆರಿಕ ಸೇನೆಗೆ ಸಮಯಾವಕಾಶ ನೀಡಲು ಸಾಧ್ಯವಿಲ್ಲ ಎಂದಿದೆ. ಈ ಬಗ್ಗೆ ತಾಲಿಬಾನ್ ವಕ್ತಾರ ಸುಹೇಲ್ ಶಹೀನ್ ಮಾಹಿತಿ ನೀಡಿದ್ದಾರೆ.

ಒಂದುವೇಳೆ ಅಫ್ಘಾನಿಸ್ತಾನದಿಂದ ತಮ್ಮ ಸೇನೆಯನ್ನು ಹಿಂಪಡೆಯಲು ಅಮೆರಿಕ ಹಾಗೂ ಇಂಗ್ಲೆಂಡ್ ಆ. 31ರ ನಂತರವೂ ಗಡುವು ವಿಸ್ತಾರ ಮಾಡಬೇಕೆಂಬ ಮನವಿಯನ್ನು ಇಟ್ಟರೆ ನಾವು ಅದಕ್ಕೆ ಒಪ್ಪುವ ಮಾತೇ ಇಲ್ಲ. ಒಂದುವೇಳೆ ರೆಡ್ ಲೈನ್ ಮೀರಿ ಅವರ ಸೈನ್ ಅಫ್ಘಾನ್​ನಲ್ಲೇ ಉಳಿದರೆ ಅದರ ಪರಿಣಾಮ ಕೆಟ್ಟದಾಗಿರುತ್ತದೆ ಎಂದು ಸುಹೇಲ್ ಹೇಳಿದ್ದಾರೆ.

ಅಫ್ಘಾನಿಸ್ತಾನದಿಂದ ಜಾಗ ಖಾಲಿ ಮಾಡಲು ಅಮೆರಿಕ, ಇಂಗ್ಲೆಂಡ್ ಸೇರಿದಂತೆ ಹಲವು ವಿದೇಶೀಯ ಸೇನೆಗಳಿಗೆ ಆ. 31ರವರೆಗೆ ತಾಲಿಬಾನ್ ಸಮಯಾವಕಾಶ ನೀಡಿದೆ. ತಾಲಿಬಾನ್ ಅಟ್ಟಹಾಸದಿಂದ ಈಗಾಗಲೇ ಸಾವಿರಾರು ವಿದೇಶೀಯರು ಅಫ್ಘಾನಿಸ್ತಾದಿಂದ ಬೇರೆ ಬೇರೆ ದೇಶಗಳಿಗೆ ವಲಸೆ ಹೋಗಿದ್ದಾರೆ. ಈ ವೇಳೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಗಲಾಟೆಯಲ್ಲಿ 20 ಜನರು ಸಾವನ್ನಪ್ಪಿದ್ದಾರೆ.

ಅಫ್ಘಾನಿಸ್ತಾನಕ್ಕೆ ಅಮೆರಿಕ ಪೂರೈಸಿದ್ದ ಯುದ್ಧೋಪಕರಣಗಳು ತಾಲಿಬಾನ್ ಕೈ ಸೇರಿದೆ ಎಂದು ಅಮೆರಿಕದ ರಕ್ಷಣಾ ಅಧಿಕಾರಿ ಖಚಿತಪಡಿಸಿದ್ದಾರೆ. ಅಮೆರಿಕದ ಮಿಲಿಟರಿ ಪಡೆಗಳಿಂದ ಪೂರೈಸಲಾಗಿದ್ದ ವಾಹನಗಳು, ಯುದ್ದೋಪಕರಣಗಳನ್ನು ಅಫ್ಘಾನ್ ಸರ್ಕಾರ ತಾಲಿಬಾನ್ ವಶಕ್ಕೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Afghanistan Photos: ಅಫ್ಘಾನಿಸ್ತಾನದಲ್ಲಿ ಹೆತ್ತವರಿಗೂ ಭಾರವಾದ ಮಕ್ಕಳು; ಬಂದೂಕಿನ ಸದ್ದಿನಲ್ಲಿ ಮಕ್ಕಳ ಆಕ್ರಂದನ ಕೇಳುವವರಾರು?

ಅಫ್ಘಾನಿಸ್ತಾನ ತಾಲಿಬಾನ್ ವಶವಾಗಿದ್ದಕ್ಕೆ ಪಾಕಿಸ್ತಾನದಲ್ಲಿ ಜೈಕಾರ; ಮಹಿಳಾ ಮದರಸಾಗಳ ಮೇಲೆ ತಾಲಿಬಾನ್ ಬಾವುಟ!

(Afghanistan Crisis: Taliban warn of consequences if deadline for withdrawal of United States troops is extended)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ