AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿ ಕಾಲೇಜುಗಳ ತರಗತಿ ಆರಂಭ; ಗಂಡು- ಹೆಣ್ಣು ಮಕ್ಕಳ ನಡುವೆ ಪರದೆ ಹಾಕಿ ಪಾಠ

ಅಫ್ಘಾನಿಸ್ತಾನದ ಸ್ಥಳೀಯ ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿದ್ದು, ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಕ್ಲಾಸ್​ ರೂಂನಲ್ಲಿ ಕುಳಿತುಕೊಂಡಿರುವ ಫೋಟೋಗಳು ವೈರಲ್ ಆಗಿವೆ. ಆ ವಿದ್ಯಾರ್ಥಿಗಳ ನಡುವೆ ಪರದೆಯನ್ನು ಇಳಿಬಿಡಲಾಗಿದೆ.

ಅಫ್ಘಾನಿಸ್ತಾನದಲ್ಲಿ ಕಾಲೇಜುಗಳ ತರಗತಿ ಆರಂಭ; ಗಂಡು- ಹೆಣ್ಣು ಮಕ್ಕಳ ನಡುವೆ ಪರದೆ ಹಾಕಿ ಪಾಠ
ಅಫ್ಘಾನಿಸ್ತಾನದಲ್ಲಿ ತರಗತಿಗಳು
TV9 Web
| Edited By: |

Updated on: Sep 06, 2021 | 6:13 PM

Share

ಕಾಬೂಲ್: ಅಫ್ಘನಿಸ್ತಾನ ತಾಲಿಬಾನ್ ಸಂಘಟನೆಯ ವಶವಾದ ನಂತರ ಅಲ್ಲಿನ ಮಹಿಳೆಯರು ಮತ್ತು ಮಕ್ಕಳ ಪರಿಸ್ಥಿತಿ ಶೋಚನೀಯವಾಗಿದೆ. ಅಫ್ಘಾನ್​ನಲ್ಲಿ ಪತ್ರಿಕೋದ್ಯಮ ಸೇರಿದಂತೆ ಎಲ್ಲ ವಲಯಗಳಲ್ಲೂ ಮಹಿಳೆಯರು ಉದ್ಯೋಗ ಮಾಡದಂತೆ ತಾಲಿಬಾನಿಗರು ಹೆದರಿಸಿದ್ದಾರೆ. ಇದರ ನಡುವೆ ವಿದ್ಯಾರ್ಥಿನಿಯರು ಶಾಲಾ-ಕಾಲೇಜಿಗೆ ಹೋಗಲೂ ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಫ್ಘಾನಿಸ್ತಾನದಲ್ಲಿ ಇಂದಿನಿಂದ ವಿಶ್ವವಿದ್ಯಾಲಯಗಳ ತರಗತಿಗಳು ಶುರುವಾಗಿವೆ. ಆದರೆ, ಗಂಡು ಮಕ್ಕಳು ಹಾಗೂ ಹೆಣ್ಣು ಮಕ್ಕಳ ನಡುವೆ ಪರದೆಯನ್ನು ಹಾಕಿ ಪಾಠ ಮಾಡಲಾಗುತ್ತಿದೆ.

ಈ ಬಗ್ಗೆ ಟ್ವಿಟ್ಟರ್​ನಲ್ಲಿ ಫೋಟೋಗಳು ಹರಿದಾಡುತ್ತಿವೆ. ಅಫ್ಘಾನಿಸ್ತಾನದ ಸ್ಥಳೀಯ ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿದ್ದು, ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಕ್ಲಾಸ್​ ರೂಂನಲ್ಲಿ ಕುಳಿತುಕೊಂಡಿರುವ ಫೋಟೋಗಳು ವೈರಲ್ ಆಗಿವೆ. ಆ ವಿದ್ಯಾರ್ಥಿಗಳ ನಡುವೆ ಪರದೆಯನ್ನು ಇಳಿಬಿಡಲಾಗಿದೆ. ಅಫ್ಘಾನಿಸ್ತಾನದಲ್ಲಿ ಕೋ-ಎಜುಕೇಷನ್​ ನೀಡುವುದಿಲ್ಲ ಎಂದು ಈ ಹಿಂದೆ ತಾಲಿಬಾನ್ ಹೇಳಿತ್ತು. ಈ ಹಿನ್ನೆಲೆಯಲ್ಲಿ ಗಂಡ ಮತ್ತು ಹೆಣ್ಣು ಮಕ್ಕಳನ್ನು ಪ್ರತ್ಯೇಕವಾಗಿ ಕೂರಿಸಿ ಪಾಠ ಹೇಳಿಕೊಡಲಾಗುತ್ತಿದೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಅಧಿಕಾರಕ್ಕೆ ಬರಲು ಎಲ್ಲ ಸಿದ್ಧತೆ ನಡೆಸಿದ್ದಾರೆ. ಸದ್ಯದಲ್ಲೇ ನೂತನ ತಾಲಿಬಾನ್ ಸರ್ಕಾರ ರಚನೆ ಆಗಲಿದೆ. ನಮಗೆ ಹೆಣ್ಣುಮಕ್ಕಳು ವಿದ್ಯಾಭ್ಯಾಸ ಮಾಡಲು ಯಾವುದೇ ಅಡ್ಡಿಯಿಲ್ಲ. ಆದರೆ, ಅವರು ಹಿಜಾಬ್​ನೊಂದಿಗೆ ಶಿಕ್ಷಣ ಪಡೆಯಬೇಕು ಎಂದು ತಾಲಿಬಾನ್ ಘೋಷಿಸಿದೆ. ಕಾಲೇಜುಗಳಿಗೆ ಬರುವ ಯುವತಿಯರು ಬುರ್ಖಾದಿಂದ ತಮ್ಮ ದೇಹವನ್ನು ಸಂಪೂರ್ಣವಾಗಿ ಮುಚ್ಚಿಕೊಳ್ಳಬೇಕು. ಹಾಗೇ, ತರಗತಿಗಳಲ್ಲಿ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಪ್ರತ್ಯೇಕವಾಗಿ ಕುಳಿತುಕೊಂಡು ಪಾಠ ಕೇಳಬೇಕು, ಅವರು ಒಬ್ಬರನ್ನೊಬ್ಬರು ನೋಡಿಕೊಳ್ಳಬಾರದು ಎಂದು ತಾಲಿಬಾನ್ ಸೂಚಿಸಿದೆ.

ಅಫ್ಘನಿಸ್ತಾನದಲ್ಲಿ ಹೆಣ್ಣು ಮಕ್ಕಳು ಶಿಕ್ಷಣ ಪಡೆಯಬೇಕೆಂದರೆ ಮಹಿಳೆಯರೇ ಪಾಠ ಮಾಡಬೇಕು. ಒಂದುವೇಳೆ ಮಹಿಳಾ ಶಿಕ್ಷಕಿಯರು ಇಲ್ಲದಿದ್ದರೆ ವಯಸ್ಸಾದ ಪುರುಷರು ಪಾಠ ಮಾಡಬೇಕು. ಗಂಡುಮಕ್ಕಳಿಗಿಂತಲೂ 5 ನಿಮಿಷ ಮೊದಲೇ ಹೆಣ್ಣುಮಕ್ಕಳು ಕ್ಲಾಸ್​ನಿಂದ ಹೊರಗೆ ಹೋಗಬೇಕು. ಹೊರಗೆ ಗಂಡು ಮಕ್ಕಳ ಜೊತೆ ಹೆಣ್ಣುಮಕ್ಕಳು ಸೇರಬಾರದು ಎಂಬ ಕಾರಣಕ್ಕೆ ಈ ನಿಯಮ ಜಾರಿಗೆ ತರಲಾಗಿದೆ.

ಅಫ್ಘಾನಿಸ್ತಾನದಲ್ಲಿ ಹಿಡಿತ ಸಾಧಿಸಿದ ತಾಲಿಬಾನ್ ಸಂಘಟನೆ ಮಹಿಳಾ ಹಕ್ಕುಗಳನ್ನು ಗೌರವಿಸುತ್ತೇವೆ ಎಂಬ ಮಾತಿಗೆ ವಿರುದ್ಧವಾಗಿ ನಡೆದುಕೊಳ್ಳುವ ಸುಳಿವನ್ನು ನೀಡುತ್ತಿದೆ. 20 ವರ್ಷಗಳ ಹಿಂದಿನ ತನ್ನ ದಬ್ಬಾಳಿಕೆ ವೈಖರಿಯ ಆಡಳಿತವನ್ನೇ ಮುಂದುವರಿಸುವ ಲಕ್ಷಣಗಳು ಎದ್ದು ಕಾಣುತ್ತಿದೆ. ಮಹಿಳೆಯರು ಮನೆಯಲ್ಲಿಯೇ ಇರುವಂತೆ ತಾಲಿಬಾನ್ ಸೂಚನೆ ನೀಡಿದೆ.

ಇದನ್ನೂ ಓದಿ: Afghanistan: ಶಿಕ್ಷಣ ಮತ್ತು ಉದ್ಯೋಗದ ಹಕ್ಕು ಪಡೆಯಲು ಆಫ್ಘನ್ ಮಹಿಳೆಯರಿಂದ ಬೀದಿಗಿಳಿದು ಹೋರಾಟ

Afghanistan Government: ಅಫ್ಘಾನಿಸ್ತಾನದ ನೂತನ ಅಧ್ಯಕ್ಷರಾಗಲಿದ್ದಾರೆ ತಾಲಿಬಾನ್ ಸಹ- ಸಂಸ್ಥಾಪಕ ಮುಲ್ಲಾ ಬರಾದಾರ್

(University classes resume in Afghanistan with a curtain between male and Female Students)

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ