Afghanistan Earthquake: ಅಫ್ಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ, 6.3 ತೀವ್ರತೆ ದಾಖಲು

|

Updated on: Oct 15, 2023 | 11:03 AM

ಅಫ್ಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ. ಭಾನುವಾರ ಬೆಳಗ್ಗೆ ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಮತ್ತೊಮ್ಮೆ ಪ್ರಬಲ ಭೂಕಂಪನದ ಅನುಭವವಾಯಿತು. ಕಳೆದ ಕೆಲವು ವಾರಗಳಿಂದ ಸಂಭವಿಸಿದ ಪ್ರಬಲ ಭೂಕಂಪಗಳ ನಂತರ ಸಾವಿರಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಇಡೀ ಗ್ರಾಮಗಳು ನಾಶವಾಗಿವೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.

Afghanistan Earthquake: ಅಫ್ಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ, 6.3 ತೀವ್ರತೆ ದಾಖಲು
ಭೂಕಂಪ-ಸಾಂದರ್ಭಿಕ ಚಿತ್ರ
Image Credit source: Aljazeera
Follow us on

ಅಫ್ಘಾನಿಸ್ತಾನ(Afghanistan)ದಲ್ಲಿ ಮತ್ತೆ ಪ್ರಬಲ ಭೂಕಂಪ(Earthquake) ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ. ಭಾನುವಾರ ಬೆಳಗ್ಗೆ ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಮತ್ತೊಮ್ಮೆ ಪ್ರಬಲ ಭೂಕಂಪನದ ಅನುಭವವಾಯಿತು. ಕಳೆದ ಕೆಲವು ವಾರಗಳಿಂದ ಸಂಭವಿಸಿದ ಪ್ರಬಲ ಭೂಕಂಪಗಳ ನಂತರ ಸಾವಿರಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಇಡೀ ಗ್ರಾಮಗಳು ನಾಶವಾಗಿವೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.

ಪ್ರಬಲ ಭೂಕಂಪನದ ಅನುಭವವಾದ ತಕ್ಷಣ, ಜನರು ತಮ್ಮ ಮನೆ ಮತ್ತು ಕಚೇರಿಗಳಿಂದ ಹೊರಬಂದರು. ವಾಸ್ತವವಾಗಿ, ಕಳೆದ ಒಂದು ವಾರದಲ್ಲಿ ಭೂಕಂಪದಿಂದ ಉಂಟಾದ ವಿನಾಶದ ನಂತರ, ಜನರು ಇನ್ನೂ ಭಯದಲ್ಲಿದ್ದಾರೆ. ಆದರೆ, ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಅಫ್ಘಾನಿಸ್ತಾನದ ಜನರು ಒಂದರ ನಂತರ ಒಂದರಂತೆ ಭೂಕಂಪನದ ಪ್ರಬಲ ಕಂಪನವನ್ನು ಅನುಭವಿಸುತ್ತಿದ್ದಾರೆ. ಇದುವರೆಗೆ 4 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸಿರಿಯಾ ಮತ್ತು ಟರ್ಕಿಯಲ್ಲಿ ಸಂಭವಿಸಿದ ಭೂಕಂಪಕ್ಕಿಂತ ಅಫ್ಘಾನಿಸ್ತಾನದ ಭೂಕಂಪವು ಹೆಚ್ಚು ಭಯಾನಕವಾಗಿದೆ ಎಂದು ನಂಬಲಾಗಿದೆ.

ಮತ್ತಷ್ಟು ಓದಿ:Afghanistan Earthquake: ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ, 4.6 ತೀವ್ರತೆ ದಾಖಲು

ವಿಶ್ವಸಂಸ್ಥೆಯ ಮಾನವೀಯ ಕಚೇರಿಯು ಭೂಕಂಪಕ್ಕೆ ಸ್ಪಂದಿಸಲು 5 ಮಿಲಿಯನ್ ಡಾಲರ್​ ನೆರವು ಘೋಷಿಸಿದೆ. ಈ ದುರಂತದಲ್ಲಿ ಬದುಕುಳಿದವರಿಗೆ ಆಶ್ರಯ, ಆಹಾರ ಮತ್ತು ವೈದ್ಯಕೀಯ ಸೌಲಭ್ಯಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ