Afghanistan: ತಾಲಿಬಾನಿಗಳಿಗೆ ತಲೆಬಾಗಲ್ಲ; ಈಗ ನಾನೇ ನಿಮ್ಮ ಅಧ್ಯಕ್ಷ: ಆಫ್ಘನ್ ಮೊದಲ ಉಪಾಧ್ಯಕ್ಷ ಅಮ್ರುಲ್ಲಾ ಸಲೇಹ್ ಘೋಷಣೆ
ತಾಲಿಬಾನ್ ಕಾಬೂಲ್ ನಗರವನ್ನು ಸಂಪೂರ್ಣ ವಶಪಡಿಸಿಕೊಂಡರೂ ಸಹ ತಾವು ಮಾತ್ರ ಶರಣಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕಾಬೂಲ್: ಅಫ್ಘಾನಿಸ್ತಾನ ಸಂಪೂರ್ಣವಾಗಿ ತಾಲಿಬಾನ್ ಕೈವಶವಾಗಿದ್ದರೂ ಸಹ ಅಫ್ಘಾನಿಸ್ತಾನದ ಮೊದಲ ಉಪಾಧ್ಯಕ್ಷರಾಗಿದ್ದ ಅಮ್ರುಲ್ಲಾ ಸಲೇಹ್, ನಾನೀಗ ಉಸ್ತುವಾರಿ ಅಧ್ಯಕ್ಷನಾಗಿ ಕೆಲಸ ನಿರ್ವಹಿಸುತ್ತೇನೆ ಎಂದು ಘೋಷಿಸಿದ್ದಾರೆ. ಅಫ್ಘಾನಿಸ್ತಾನದ ಸಂವಿಧಾನದ ಪ್ರಕಾರ ಅಧ್ಯಕ್ಷರು ರಾಜೀನಾಮೆ ನೀಡಿದಲ್ಲಿ ಅಥವಾ ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷರೇ ಅಧ್ಯಕ್ಷರ ಎಲ್ಲ ಜವಾಬ್ಧಾರಿ ಮತ್ತು ಅಧಿಕಾರವನ್ನು ನಿಭಾಯಿಸಬಹುದಾಗಿದೆ. ಈಗಾಗಲೇ ಅಫ್ಘಾನಿಸ್ತಾನದ ಅಧ್ಯಕ್ಷರಾಗಿದ್ದ ಅಶ್ರಫ್ ಘನಿ ವಿದೇಶಕ್ಕೆ ಬೃಹತ್ ಮೊತ್ತದೊಂದಿಗೆ ಪಲಾಯನಗೈದಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಅಫ್ಘಾನಿಸ್ತಾನದ ಪ್ರಜೆಗಳ ಹಿತ ಕಾಯಲು ನಾನು ಬದ್ಧನಾಗಿದ್ದೇನೆ ಎಂದು ಅಮ್ರುಲ್ಲಾ ಸಲೇಜ್ ತಿಳಿಸಿದ್ದಾರೆ.
ತಾವು ಅಘ್ಘಾನಿಸ್ತಾನದ ಉಸ್ತುವಾರಿ ಅಧ್ಯಕ್ಷರಾಗಿ ಜವಾಬ್ಧಾರಿ ನಿರ್ವಹಿಸುವ ಕುರಿತು ಅಧಿಕೃತ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಅಮ್ರುಲ್ಲಾ ಸಲೇಹ್, ದೇಶದ ರಾಜಕೀಯ ನಾಯಕರನ್ನು ಸಂಪರ್ಕಿಸಿ ಎಲ್ಲರ ವಿಶ್ವಾಸ ಪಡೆಯಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ. ಇನ್ನೊಂದು ಟ್ವೀಟ್ ಒಂದರಲ್ಲಿ ತಾಲಿಬಾನ್ ಕಾಬೂಲ್ ನಗರವನ್ನು ಸಂಪೂರ್ಣ ವಶಪಡಿಸಿಕೊಂಡರೂ ಸಹ ತಾವು ಮಾತ್ರ ಶರಣಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Clarity: As per d constitution of Afg, in absence, escape, resignation or death of the President the FVP becomes the caretaker President. I am currently inside my country & am the legitimate care taker President. Am reaching out to all leaders to secure their support & consensus.
— Amrullah Saleh (@AmrullahSaleh2) August 17, 2021
I will never, ever & under no circumstances bow to d Talib terrorists. I will never betray d soul & legacy of my hero Ahmad Shah Masoud, the commander, the legend & the guide. I won’t dis-appoint millions who listened to me. I will never be under one ceiling with Taliban. NEVER.
— Amrullah Saleh (@AmrullahSaleh2) August 15, 2021
ಅಫ್ಘಾನಿಸ್ತಾನದಿಂದ ಯಾವುದೇ ದೇಶಕ್ಕೆ ಬೆದರಿಕೆಯಿಲ್ಲ: ಮೊದಲ ಸುದ್ದಿಗೋಷ್ಠಿಯಲ್ಲಿ ತಾಲಿಬಾನ್ ಅಭಯ ಅಫ್ಘಾನಿಸ್ತಾನದಿಂದ ಯಾವುದೇ ದೇಶಕ್ಕೆ ಬೆದರಿಕೆಯಿಲ್ಲ ಎಂದು ತಾಲಿಬಾನ್ ಸ್ಪಷ್ಟಪಡಿಸಿದೆ. ದೇಶವನ್ನು ಸಂಪೂರ್ಣವಾಗಿ ತನ್ನ ಸುಪರ್ದಿಗೆ ತೆಗೆದುಕೊಂಡಿರುವ ತಾಲಿಬಾನ್ ವಕ್ತಾರ ಮಂಗಳವಾರ (ಆಗಸ್ಟ್ 17) ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ, ನಮ್ಮಿಂದ ಯಾವುದೇ ದೇಶದ ಭದ್ರತೆಗೆ ಆತಂಕ ಬೇಡ ಎಂದು ಹೇಳಿದ್ದಾರೆ.
ವಿವಿಧ ದೇಶಗಳ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ತಾಲಿಬಾನ್ ವಕ್ತಾರ ಝಬಿವುಲ್ಲಾ ಮುಜಾಹಿದ್, ಅಫ್ಘಾನಿಸ್ತಾನದಲ್ಲಿ ಶೀಘ್ರ ಇಸ್ಲಾಮಿಕ್ ಸರ್ಕಾರ ಸ್ಥಾಪಿಸಲಾಗುವುದು ಎಂದು ಘೋಷಿಸಿದರು. ನಮಗೆ ಯಾವುದೇ ಆಂತರಿಕ ಅಥವಾ ಬಾಹ್ಯ ಶತ್ರುಗಳು ಬೇಕಿಲ್ಲ. ನಾವು ಯಾರೊಬ್ಬರನ್ನೂ ದ್ವೇಷಿಸುತ್ತಿಲ್ಲ. ನಮ್ಮ ನಾಯಕರ ಆದೇಶದಂತೆ ಎಲ್ಲರನ್ನೂ ನಾವು ಕ್ಷಮಿಸಿದ್ದೇವೆ ಎಂದು ಹೇಳಿದರು.
ಈ ಹಿಂದೆ ಅಫ್ಘಾನ್ ಸರ್ಕಾರಿ ಸೇನೆ ಮತ್ತು ವಿದೇಶಿ ಭದ್ರತಾ ಪಡೆಗಳಲ್ಲಿ ಕೆಲಸ ಮಾಡುತ್ತಿದ್ದವರೂ ಸೇರಿದಂತೆ ಯಾರೊಬ್ಬರ ವಿರುದ್ಧವೂ ನಾವು ಕ್ರಮ ಜರುಗಿಸುವುದಿಲ್ಲ. ಅವರ ಮನೆಗಳನ್ನು ಯಾರೊಬ್ಬರೂ ತಪಾಸಣೆಗೆ ಒಳಪಡಿಸುವುದಿಲ್ಲ ಎಂದು ಧೈರ್ಯ ತುಂಬಿದರು.
ಇದನ್ನೂ ಓದಿ:
TV9 Kannada Digital Live: ಅಮೆರಿಕವೆಂಬ ವಿದೇಶಿ ಶಕ್ತಿಯನ್ನು ಓಡಿಸಿದ ತಾಲಿಬಾನಿಗಳದ್ದು ನಿಜವಾದ ದೇಶಭಕ್ತಿ; ಸುಧೀಂದ್ರ ಕುಲಕರ್ಣಿ (Afghanistan ex Vice President Amrullah Saleh declares he is the caretaker president afterwards)
Published On - 10:49 pm, Tue, 17 August 21