ಅಫ್ಘಾನಿಸ್ತಾನದಲ್ಲಿ ನೂತನ ಸರ್ಕಾರ ರಚನೆ ಮುಂದೂಡಿಕೆ; ನಾಳೆ ತಾಲಿಬಾನ್ ನೇತೃತ್ವದ ಸಚಿವ ಸಂಪುಟ ಘೋಷಣೆ
Afghanistan Government | ಅಫ್ಘಾನಿಸ್ತಾನದಲ್ಲಿ ಸೆ. 4ರಂದು ತಾಲಿಬಾನ್ ನೇತೃತ್ವದ ಹೊಸ ಸರ್ಕಾರ ರಚನೆಯಾಗಲಿದೆ ಎಂದು ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಮಾಹಿತಿ ನೀಡಿದ್ದಾರೆ.
ಕಾಬೂಲ್: ಅಫ್ಘಾನಿಸ್ತಾನದಲ್ಲಿ ಇಂದೇ ನೂತನ ತಾಲಿಬಾನ್ ಸರ್ಕಾರ ರಚನೆಯಾಗಲಿದೆ ಎನ್ನಲಾಗಿತ್ತು. ಆದರೆ, ಹೊಸ ಸರ್ಕಾರ ರಚನೆಯ ಕಾರ್ಯಕ್ರಮವನ್ನು ನಾಳೆಗೆ ಮುಂದೂಡಲಾಗಿದೆ. ಅಫ್ಘಾನಿಸ್ತಾನದಲ್ಲಿ ಸೆ. 4ರಂದು ತಾಲಿಬಾನ್ ನೇತೃತ್ವದ ಹೊಸ ಸರ್ಕಾರ ರಚನೆಯಾಗಲಿದೆ ಎಂದು ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಮಾಹಿತಿ ನೀಡಿದ್ದಾರೆ. ತಾಲಿಬಾನ್ ಸಂಘಟನೆಯ ಸಹ-ಸಂಸ್ಥಾಪಕ ಮುಲ್ಲಾ ಅಬ್ದುಲ್ ಘನಿ ಬರಾದಾರ್ ತಾಲಿಬಾನ್ ಸರ್ಕಾರದ ಅಧ್ಯಕ್ಷರಾಗಿ ನಾಳೆ ಅಧಿಕಾರಕ್ಕೇರುವ ಸಾಧ್ಯತೆಯಿದೆ. ಈ ಮೊದಲು ಅಫ್ಘಾನಿಸ್ತಾನದ ಅಧ್ಯಕ್ಷರ ಸ್ಥಾನಕ್ಕೆ ತಾಲಿಬಾನ್ನ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದವು. ಆದರೆ, ಮುಲ್ಲಾ ಅಬ್ದುಲ್ ಘನಿ ಬರಾದಾರ್ ಹೆಸರನ್ನು ಅಂತಿಮಗೊಳಿಸಲಾಗಿದೆ.
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಅನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡು ಸುಮಾರು 2 ವಾರಗಳಾಗಿವೆ. ಇದಾದ ಬಳಿಕ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದರು. ಶನಿವಾರ ಅಫ್ಘಾನಿಸ್ತಾನದಲ್ಲಿ ನೂತನ ತಾಲಿಬಾನ್ ಸರ್ಕಾರ ರಚನೆಯಾಗಲಿದ್ದು, ತಾಲಿಬಾನ್ ಸಹ-ಸಂಸ್ಥಾಪಕ ಮುಲ್ಲಾ ಅಬ್ದುಲ್ ಘನಿ ಬರಾದಾರ್ ಹೊಸ ಸರ್ಕಾರದ ನೇತೃತ್ವವನ್ನು ವಹಿಸುವುದು ಬಹುತೇಕ ಖಚಿತವಾಗಿದೆ. ಇಂದು ನಡೆಯಬೇಕಿದ್ದ ಸಚಿವ ಸಂಪುಟ ರಚನೆ ಮುಂದೂಡಿಕೆಯಾಗಲು ಕಾರಣವೇನೆಂದು ಇನ್ನೂ ಬಯಲಾಗಿಲ್ಲ.
Women hold protest in Taliban-controlled Kabul for decision-making roles in Afghanistan
Read @ANI Story | https://t.co/OO9RoxMxHW#Afghanistan #Taliban pic.twitter.com/nq8NXPS9IF
— ANI Digital (@ani_digital) September 3, 2021
ಅಫ್ಘಾನಿಸ್ತಾನದ ಇಸ್ಲಾಮಿಸ್ಟ್ ಗ್ರೂಪ್ ನೀಡಿರುವ ಮಾಹಿತಿ ಪ್ರಕಾರ, ತಾಲಿಬಾನ್ ಸಹ ಸಂಸ್ಥಾಪಕ ಮುಲ್ಲಾ ಅಬ್ದುಲ್ ಘನಿ ಬರಾದಾರ್ ಹೊಸ ಸರ್ಕಾರದ ನಾಯಕನಾಗಲಿದ್ದಾರೆ. ತಾಲಿಬಾನ್ ರಾಜಕೀಯ ಕಚೇರಿಯ ನೇತೃತ್ವ ವಹಿಸಿಕೊಳ್ಳಲಿರುವ ಮುಲ್ಲಾ ಬರಾದಾರ್ ನೇತೃತ್ವದಲ್ಲಿ ಇರಾನ್ ಮಾದರಿಯ ಸರ್ಕಾರ ರಚನೆಯಾಗಲಿದೆ. ಉಳಿದಂತೆ ತಾಲಿಬಾನ್ ಸಂಸ್ಥಾಪಕ ಮುಲ್ಲಾ ಓಮರ್ ಅವರ ಮಗ ಮುಲ್ಲಾ ಮೊಹಮ್ಮದ್ ಯಾಕೂಬ್, ಶೇರ್ ಅಮೊಹಮ್ಮದ್ ಅಬ್ಬಾಸ್ ಸ್ಟಾನೆಕ್ಜೈ ಅಫ್ಘಾನಿಸ್ತಾನದ ನೂತನ ಸರ್ಕಾರದ ಪ್ರಮುಖ ಹುದ್ದೆಗಳನ್ನು ಅಲಂಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆ. 15ರಂದು ತಾಲಿಬಾನ್ ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ಪಡೆದಿತ್ತು. ಅಫ್ಘಾನಿಸ್ತಾನದಲ್ಲಿ ಇಂದು ನೂತನ ಸರ್ಕಾರ ರಚನೆಯಾಗಲಿದ್ದು, ತಾಲಿಬಾನ್ ಸಂಘಟನೆಯ ಪ್ರಮುಖ ನಾಯಕರಿಗೆ ಮಹತ್ವದ ಹುದ್ದೆಗಳು ಸಿಗಲಿವೆ. ಈಗಾಗಲೇ ಸಿಕ್ಕಿರುವ ಮಾಹಿತಿಯಂತೆ ಶೇಖ್ ಹೈಬತುಲ್ಲಾ ಅಖುಂಡಜಾದ, ಮುಲ್ಲಾ ಮುಹಮ್ಮದ್ ಒಮರ್ ಅವರ ಮಗನಾದ ಮೌಲವಿ ಮುಹಮ್ಮದ್ ಯಾಕೂಬ್ ಅವರಿಗೆ ಪ್ರಮುಖ ಸ್ಥಾನಗಳನ್ನು ನೀಡಲಾಗುವುದು. ಈ ಮೊದಲು ಮುಲ್ಲಾ ಹಿಬತುಲ್ಲಾ ಅಖುಂಡಜಾದ ಅವರನ್ನೇ ನೂತನ ಅಧ್ಯಕ್ಷರನ್ನಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ಕೊನೆ ಘಳಿಗೆಯಲ್ಲಿ ಮುಲ್ಲಾ ಬರಾದಾರ್ ಹೆಸರು ಕೇಳಿಬಂದಿದೆ. ಆಫ್ಘಾನ್ ಸರ್ಕಾರ ಈಗಾಗಲೇ ವಿವಿಧ ರಾಜ್ಯಗಳಿಗೆ ರಾಜ್ಯಪಾಲರು, ಪೊಲೀಸ್ ಮುಖ್ಯಸ್ಥರು, ಜಿಲ್ಲಾ ಮಟ್ಟದ ಪ್ರಮುಖ ಅಧಿಕಾರಿಗಳನ್ನು ನೇಮಕ ಮಾಡಿದೆ.
ಇದನ್ನೂ ಓದಿ: ಅಫ್ಘಾನಿಸ್ತಾನ ತ್ಯಜಿಸಲು ಸಹಾಯವಾಗುತ್ತದೆಂಬ ಕಾರಣಕ್ಕೆ ಶಿಬಿರದಲ್ಲಿದ್ದ ಯುವತಿಯರು ಅನಿವಾರ್ಯವಾಗಿ ಮದುವೆಯಾಗಬೇಕಾಯಿತು!
ಅಫ್ಘಾನಿಸ್ತಾನದಲ್ಲಿ ನಾಳೆ ನೂತನ ಸರ್ಕಾರ ರಚನೆ ಸಾಧ್ಯತೆ; ತಾಲಿಬಾನ್- ಹಕ್ಕಾನಿ ನೆಟ್ವರ್ಕ್ ನಡುವೆ ಪೈಪೋಟಿ
(Afghanistan Government formation Postponed Taliban Cabinet to be announced Tomorrow Mulla Abdul Ghani Baradar)