Afghanistan: ಅಫ್ಘಾನಿಸ್ತಾನದಲ್ಲಿ ಭಾರೀ ಸ್ಫೋಟ, 16 ಮಂದಿಗೆ ಗಾಯ

ಅಫ್ಘಾನಿಸ್ತಾನದ ಬಾಗ್ಲಾನ್ ಪ್ರಾಂತ್ಯದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು 16 ಜನರು ಗಾಯಗೊಂಡಿದ್ದಾರೆ.

Afghanistan: ಅಫ್ಘಾನಿಸ್ತಾನದಲ್ಲಿ ಭಾರೀ ಸ್ಫೋಟ, 16 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ

Updated on: May 27, 2023 | 4:43 PM

ಕಾಬೂಲ್: ಅಫ್ಘಾನಿಸ್ತಾನದಲ್ಲಿ (Afghanistan) ಮತ್ತೆ ಬಾಂಬ್​​​ ಸ್ಫೋಟ ನಡೆದಿದೆ. ಬಾಗ್ಲಾನ್ ಪ್ರಾಂತ್ಯದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು 16 ಜನರು ಗಾಯಗೊಂಡಿದ್ದಾರೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ. ವರದಿಯ ಪ್ರಕಾರ ಉತ್ತರ ಅಫ್ಘಾನಿಸ್ತಾನದ ಬಾಗ್ಲಾನ್ ಪ್ರಾಂತ್ಯದ ಪೋಲ್-ಖೋಮ್ರಿ ನಗರದಲ್ಲಿ ಸ್ಫೋಟ ಸಂಭವಿಸಿದೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಫೋಟದ ಬಗ್ಗೆ ತಾಲಿಬಾನ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಮತ್ತು ಯಾವುದೇ ವ್ಯಕ್ತಿ ಅಥವಾ ಗುಂಪು ಹೊಣೆಗಾರಿಕೆಯನ್ನು ಹೊತ್ತುಕೊಂಡಿಲ್ಲ ಎಂದು ಆಫ್ಘನ್ ಪ್ರಕಟಣೆ ತಿಳಿಸಿದೆ.

ಈ ಹಿಂದೆ ದೇಶಾದ್ಯಂತ ಇದೇ ರೀತಿಯ ಘಟನೆಗಳು ಸಂಭವಿಸಿದ್ದು, ಐಸಿಸ್ ಈ ಹಿಂದೆ ಹೊಣೆಗಾರಿಕೆಯನ್ನು ಹೊತ್ತುಕೊಂಡಿತ್ತು. ಆಗಸ್ಟ್ 2021ರಲ್ಲಿ ಅಫ್ಘಾನಿಸ್ತಾನ ತಾಲಿಬಾನ್ ವಶವಾದ ನಂತರ, ಅಫ್ಘಾನಿಸ್ತಾನವು ಭಯೋತ್ಪಾದಕ ದಾಳಿಗಳಿಗೆ ಈಗಾಗಲೇ ನಲುಗಿ ಹೋಗಿದೆ.

ಇದನ್ನೂ ಓದಿ: Afghanistan ತಾಲಿಬಾನ್ ವಿದೇಶಾಂಗ ಸಚಿವಾಲಯದ ಪ್ರವೇಶ ದ್ವಾರದಲ್ಲಿ ಬಾಂಬ್ ಸ್ಫೋಟ; 3 ಸಾವು

ದೇಶವು ಸುರಕ್ಷಿತವಾಗಿದೆ ಎಂದು ವಾಸ್ತವಿಕ ಆಡಳಿತದ ಭರವಸೆಗಳ ಹೊರತಾಗಿಯೂ, ತಾಲಿಬಾನ್ ಭದ್ರತಾ ಸಮಸ್ಯೆಗಳನ್ನು ಎದುರಿಸುತ್ತಲೇ ಇದೆ.

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us