AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan Blast: ಅಫ್ಘಾನಿಸ್ತಾನದ ಮಸೀದಿಯಲ್ಲಿ ಭಾರೀ ಸ್ಫೋಟ; ಮೂವರು ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

ಸ್ಪಿನ್ ಘರ್ ಜಿಲ್ಲೆಯ ಮಸೀದಿಯಲ್ಲಿ ನಮಾಜ್ ವೇಳೆ ನಡೆದ ಸ್ಫೋಟದಿಂದ ಸಾಕಷ್ಟು ಜನರು ಗಾಯಗೊಂಡಿದ್ದಾರೆ. ಇದುವರೆಗೂ ಮೂವರು ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

Afghanistan Blast: ಅಫ್ಘಾನಿಸ್ತಾನದ ಮಸೀದಿಯಲ್ಲಿ ಭಾರೀ ಸ್ಫೋಟ; ಮೂವರು ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ
ಅಫ್ಘಾನಿಸ್ತಾನದ ಮಸೀದಿಯಲ್ಲಿ ಸ್ಫೋಟ
TV9 Web
| Edited By: |

Updated on:Nov 12, 2021 | 4:38 PM

Share

ಜಲಾಲಾಬಾದ್: ಅಫ್ಘಾನಿಸ್ತಾನದ ನಂಗರ್​ಹಾರ್​ ಪ್ರಾಂತ್ಯದಲ್ಲಿರುವ ಸ್ಪಿನ್​ ಘರ್ ಪ್ರದೇಶದಲ್ಲಿರುವ ಮಸೀದಿಯಲ್ಲಿ ಇಂದು ಶುಕ್ರವಾರದ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಭಾರೀ ಸ್ಫೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಸ್ಥಳೀಯ ಮುಲ್ಲಾ ಸೇರಿದಂತೆ ಕನಿಷ್ಠ 15 ಜನರು ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನ 1.30ರ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ ಎಂದು ಆ ಪ್ರದೇಶದ ನಿವಾಸಿ ಅಟಲ್ ಶಿನ್ವಾರಿ ಹೇಳಿದ್ದಾರೆ. ಮಸೀದಿಯ ಒಳಭಾಗದಲ್ಲಿ ಸ್ಫೋಟಕಗಳು ಸ್ಫೋಟಿಸಿದ್ದರಿಂದ ಈ ಘಟನೆ ನಡೆದಿದೆ.

ನವೆಂಬರ್ 2ರಂದು ಅಫ್ಘಾನಿಸ್ತಾನದ ಕಾಬೂಲ್​ನ ಅತಿದೊಡ್ಡ ಮಿಲಿಟರಿ ಆಸ್ಪತ್ರೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ 25ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಅದರ ಬೆನ್ನಲ್ಲೇ ಅಫ್ಘಾನ್​ನಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.

ಆಗಸ್ಟ್​ನಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ರೀತಿಯ ದಾಳಿಗಳು ಹೆಚ್ಚಾಗುತ್ತಿವೆ. ಇಂದು ನಡೆದ ಮಸೀದಿಯ ಸ್ಫೋಟದ ಬಗ್ಗೆ ತಾಲಿಬಾನ್​ ನಾಯಕರು ಕೂಡ ಖಚಿತಪಡಿಸಿದ್ದು, ಸ್ಪಿನ್ ಘರ್ ಜಿಲ್ಲೆಯ ಮಸೀದಿಯಲ್ಲಿ ನಮಾಜ್ ವೇಳೆ ನಡೆದ ಸ್ಫೋಟದಿಂದ ಸಾಕಷ್ಟು ಜನರು ಗಾಯಗೊಂಡಿದ್ದಾರೆ. ಇದುವರೆಗೂ ಮೂವರು ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಎಫ್​ಪಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ವಿದೇಶೀ ಕರೆನ್ಸಿ ಸಂಪೂರ್ಣ ನಿಷೇಧ; ಅಫ್ಘಾನ್​ ​ಕರೆನ್ಸಿಯನ್ನೇ ಬಳಸಲು ತಾಲಿಬಾನ್ ಸೂಚನೆ

ಅಫ್ಘಾನಿಸ್ತಾನ ಉಗ್ರರ ಪಾಲಿನ ಸ್ವರ್ಗವಾಗದಿರಲಿ; ತಾಲಿಬಾನ್​ಗೆ ಭಾರತ, ಅಮೆರಿಕ ಒತ್ತಾಯ

Published On - 4:35 pm, Fri, 12 November 21

Follow Us
TV9 Web
TV9 Web

TV9 Kannada

Read More
ಟಾರ್ಚ್ ಬಾಯ್ ಆಗಿದ್ದ ‘ಪ್ರೇಮದ ಊರಲಿ’ ನಿರ್ದೇಶಕ ಮನೋಜ್ ಕುಮಾರ್
ಟಾರ್ಚ್ ಬಾಯ್ ಆಗಿದ್ದ ‘ಪ್ರೇಮದ ಊರಲಿ’ ನಿರ್ದೇಶಕ ಮನೋಜ್ ಕುಮಾರ್
ಹಸಿ ಕಸದ ಜೊತೆ ಪ್ಲಾಸ್ಟಿಕ್ ಹಾಕಬೇಡಿ ಎಂದಿದ್ದಕ್ಕೆ ನಿವೃತ್ತ ಅಧಿಕಾರಿಯ ದರ್ಪ
ಹಸಿ ಕಸದ ಜೊತೆ ಪ್ಲಾಸ್ಟಿಕ್ ಹಾಕಬೇಡಿ ಎಂದಿದ್ದಕ್ಕೆ ನಿವೃತ್ತ ಅಧಿಕಾರಿಯ ದರ್ಪ
ಬಸ್ ತಂಗುದಾಣ ವಿರೂಪಗೊಳಿಸಿ ಬೇಕರಿ ನಿರ್ಮಾಣ
ಬಸ್ ತಂಗುದಾಣ ವಿರೂಪಗೊಳಿಸಿ ಬೇಕರಿ ನಿರ್ಮಾಣ
ಸ್ಯಾಂಡಿ ಸ್ವಾರ್ಥಿ; ನೇರವಾಗಿ ಹೇಳಿದ ಕಿಚ್ಚ ಸುದೀಪ್
ಸ್ಯಾಂಡಿ ಸ್ವಾರ್ಥಿ; ನೇರವಾಗಿ ಹೇಳಿದ ಕಿಚ್ಚ ಸುದೀಪ್
ಕರ್ನಾಟಕ ಬರಗಾಲ: ತಕ್ಷಣದ ಪರಿಹಾರಕ್ಕೆ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ಕರ್ನಾಟಕ ಬರಗಾಲ: ತಕ್ಷಣದ ಪರಿಹಾರಕ್ಕೆ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ಪೊಲೀಸರ ಮೇಲೆ ಒತ್ತಡ ಹಾಕಿರೋ ಸಿಎಂಗೆ ನಾಚಿಕೆಯಾಗಬೇಕು: ಬಿಎಸ್​ವೈ ವಾಗ್ದಾಳಿ
ಪೊಲೀಸರ ಮೇಲೆ ಒತ್ತಡ ಹಾಕಿರೋ ಸಿಎಂಗೆ ನಾಚಿಕೆಯಾಗಬೇಕು: ಬಿಎಸ್​ವೈ ವಾಗ್ದಾಳಿ
‘ಪ್ರೇಮದ ಊರಲಿ’ ಸಿನಿಮಾ ಕಲೆಕ್ಷನ್ ಬಗ್ಗೆ ನಿರ್ದೇಶಕ ಮನೋಜ್ ಮಾತು
‘ಪ್ರೇಮದ ಊರಲಿ’ ಸಿನಿಮಾ ಕಲೆಕ್ಷನ್ ಬಗ್ಗೆ ನಿರ್ದೇಶಕ ಮನೋಜ್ ಮಾತು
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ