ಜಲಾಲಾಬಾದ್: ಅಫ್ಘಾನಿಸ್ತಾನದ ನಂಗರ್ಹಾರ್ ಪ್ರಾಂತ್ಯದಲ್ಲಿರುವ ಸ್ಪಿನ್ ಘರ್ ಪ್ರದೇಶದಲ್ಲಿರುವ ಮಸೀದಿಯಲ್ಲಿ ಇಂದು ಶುಕ್ರವಾರದ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಭಾರೀ ಸ್ಫೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಸ್ಥಳೀಯ ಮುಲ್ಲಾ ಸೇರಿದಂತೆ ಕನಿಷ್ಠ 15 ಜನರು ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನ 1.30ರ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ ಎಂದು ಆ ಪ್ರದೇಶದ ನಿವಾಸಿ ಅಟಲ್ ಶಿನ್ವಾರಿ ಹೇಳಿದ್ದಾರೆ. ಮಸೀದಿಯ ಒಳಭಾಗದಲ್ಲಿ ಸ್ಫೋಟಕಗಳು ಸ್ಫೋಟಿಸಿದ್ದರಿಂದ ಈ ಘಟನೆ ನಡೆದಿದೆ.
ನವೆಂಬರ್ 2ರಂದು ಅಫ್ಘಾನಿಸ್ತಾನದ ಕಾಬೂಲ್ನ ಅತಿದೊಡ್ಡ ಮಿಲಿಟರಿ ಆಸ್ಪತ್ರೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ 25ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಅದರ ಬೆನ್ನಲ್ಲೇ ಅಫ್ಘಾನ್ನಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.
A blast targeted a mosque this afternoon in Achin district of #Nangarhar province.#Afghanistan pic.twitter.com/BK9UgbN3et
— Nooragha Habibi ?️ (@nooragha444) November 12, 2021
ಆಗಸ್ಟ್ನಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ರೀತಿಯ ದಾಳಿಗಳು ಹೆಚ್ಚಾಗುತ್ತಿವೆ. ಇಂದು ನಡೆದ ಮಸೀದಿಯ ಸ್ಫೋಟದ ಬಗ್ಗೆ ತಾಲಿಬಾನ್ ನಾಯಕರು ಕೂಡ ಖಚಿತಪಡಿಸಿದ್ದು, ಸ್ಪಿನ್ ಘರ್ ಜಿಲ್ಲೆಯ ಮಸೀದಿಯಲ್ಲಿ ನಮಾಜ್ ವೇಳೆ ನಡೆದ ಸ್ಫೋಟದಿಂದ ಸಾಕಷ್ಟು ಜನರು ಗಾಯಗೊಂಡಿದ್ದಾರೆ. ಇದುವರೆಗೂ ಮೂವರು ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಎಫ್ಪಿಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ವಿದೇಶೀ ಕರೆನ್ಸಿ ಸಂಪೂರ್ಣ ನಿಷೇಧ; ಅಫ್ಘಾನ್ ಕರೆನ್ಸಿಯನ್ನೇ ಬಳಸಲು ತಾಲಿಬಾನ್ ಸೂಚನೆ
ಅಫ್ಘಾನಿಸ್ತಾನ ಉಗ್ರರ ಪಾಲಿನ ಸ್ವರ್ಗವಾಗದಿರಲಿ; ತಾಲಿಬಾನ್ಗೆ ಭಾರತ, ಅಮೆರಿಕ ಒತ್ತಾಯ
Published On - 4:35 pm, Fri, 12 November 21