ISIS vs Taliban: ಕಾಬೂಲ್ ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸ್ಫೋಟ, ಐಸಿಸ್ ಕೃತ್ಯದ ಶಂಕೆ

ಅಫ್ಘಾನಿಸ್ತಾನದಲ್ಲಿ ಮೇಲುಗೈ ಸಾಧಿಸಿರುವ ತಾಲಿಬಾನ್​ಗೆ ಪಾಠ ಕಲಿಸಬೇಕೆಂದು ಐಸಿಸ್​ ಬಯಸುತ್ತಿದೆ. ಈ ಎರಡೂ ಉಗ್ರಗಾಮಿ ಸಂಘಟನೆಗಳಲ್ಲಿ ಅಧಿಕಾರದ ಮೇಲಾಟ ಮೊದಲಿನಿಂದಲೂ ಇತ್ತು ಎಂದು ವಿಶ್ಲೇಷಿಸಲಾಗುತ್ತಿದೆ.

ISIS vs Taliban: ಕಾಬೂಲ್ ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸ್ಫೋಟ, ಐಸಿಸ್ ಕೃತ್ಯದ ಶಂಕೆ
ಕಾಬೂಲ್ ವಿಮಾನ ನಿಲ್ದಾಣದಲ್ಲಿ ಸ್ಫೋಟ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 26, 2021 | 9:33 PM

ಕಾಬೂಲ್: ಕಾಬೂಲ್​ನ ಹಮೀದ್ ಕರ್ಜೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ಎರಡು ಬಾಂಬ್​ಗಳು ಸ್ಫೋಟಿಸಿವೆ. ಮೊದಲ ಬಾಂಬ್ ಸ್ಫೋಟಿಸಿದ ಕೆಲವೇ ನಿಮಿಷಗಳಲ್ಲಿ ಮತ್ತೊಂದು ಬಾಂಬ್ ಸ್ಫೋಟಿಸಿದ್ದು, ಸತ್ತವರ ನಿಖರ ಸಂಖ್ಯೆ ತಿಳಿದುಬಂದಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್​ಗಳೂ ಸ್ಥಳಕ್ಕೆ ಬರಲು ಅಗದ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ಕೈಗಾಡಿಗಳಲ್ಲಿ ಗಾಯಾಳುಗಳನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯುತ್ತಿದ್ದಾರೆ.

ಕಾಬೂಲ್​ ವಿಮಾನ ನಿಲ್ದಾಣ ಸುತ್ತಮುತ್ತ ಮತ್ತಷ್ಟು ಆತ್ಮಾಹುತಿ ಬಾಂಬರ್​ಗಳು ನೆರೆದಿರಬಹುದು ಎಂದು ಅಮೆರಿಕದ ಭದ್ರತಾ ಸಂಸ್ಥೆಗಳು ಶಂಕಿಸಿದ್ದು, ತಮ್ಮ ಪ್ರಜೆಗಳಿಗೆ ತಕ್ಷಣ ವಿಮಾನ ನಿಲ್ದಾಣದಿಂದ ಸಾಧ್ಯವಾದಷ್ಟೂ ದೂರ ತೆರಳುವಂತೆ ಸೂಚಿಸಿವೆ. ಒಂದು ವೇಳೆ ವಿಮಾನ ನಿಲ್ದಾಣದಲ್ಲಿ ಇದ್ದರೂ, ಪ್ರವೇಶ ದ್ವಾರದಿಂದ ಬೇರೆಡೆ ತೆರಳಬೇಕು ಎಂದು ಮನವಿ ಮಾಡಿವೆ.

ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಕ್ಕೂ ಮುನ್ನ ಅಮೆರಿಕ ಮತ್ತು ಬ್ರಿಟನ್ ಸೈನಿಕರ ಮೇಲೆ ಗುಂಡು ಹಾರಾಟ ನಡೆಯಿತು. ಈ ವೇಳೆ ಸೈನಿಕರು ಪ್ರತಿಯಾಗಿ ಗುಂಡು ಹಾರಿಸಿದರು ಎಂದು ಹಲವು ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಸ್ಫೋಟದಲ್ಲಿ ಅಮೆರಿಕದ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಫಾಕ್ಸ್​ ನ್ಯೂಸ್ ವರದಿ ಮಾಡಿದೆ.

ಕಾಬೂಲ್​ನಲ್ಲಿ ಗುರುವಾರ ರಾತ್ರಿ ಸಂಭವಿಸಿದ ಎರಡೂ ಪ್ರಬಲ ಬಾಂಬ್​ ಸ್ಫೋಟಕ್ಕೆ ಐಸಿಸ್ (ISIS) ಕಾರಣ ಎಂದು ಹಲವು ದೇಶಗಳ ಭದ್ರತಾ ಸಂಸ್ಥೆಗಳ ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೆ ವರದಿ ಮಾಡಿದೆ. ಪ್ರಸ್ತುತ ಅಫ್ಘಾನಿಸ್ತಾನದಲ್ಲಿ ಮೇಲುಗೈ ಸಾಧಿಸಿರುವ ತಾಲಿಬಾನ್​ಗೆ ಪಾಠ ಕಲಿಸಬೇಕೆಂದು ಐಸಿಸ್​ ಬಯಸುತ್ತಿದೆ. ಈ ಎರಡೂ ಉಗ್ರಗಾಮಿ ಸಂಘಟನೆಗಳಲ್ಲಿ ಅಧಿಕಾರದ ಮೇಲಾಟ ಮೊದಲಿನಿಂದಲೂ ಇತ್ತು. ಮುಂದಿನ ದಿನಗಳಲ್ಲಿ ಅಫ್ಘಾನಿಸ್ತಾನದಲ್ಲಿ ಅಂತರ್ಯುದ್ಧದ ಪರಿಸ್ಥಿತಿ ಬಿಗಡಾಯಿಸಬಹುದು ಎನ್ನುವುದಕ್ಕೆ ಈ ಬಾಂಬ್ ಸ್ಫೋಟ ಮುನ್ನುಡಿ ಎಂದು ಹೇಳಲಾಗಿದೆ.

ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಬಾಂಬ್ ಸ್ಫೋಟದ ವಿಡಿಯೊ ಇಲ್ಲಿದೆ.

(Afghanistan Blast Two Bomb Blasts at Kabul International Airport ISIS may be behind this act)

ಇದನ್ನೂ ಓದಿ: Kabul Blast: ಕಾಬೂಲ್ ವಿಮಾನ ನಿಲ್ದಾಣದ ಬಳಿ ಪ್ರಬಲ ಬಾಂಬ್​ ಸ್ಫೋಟ

ಇದನ್ನೂ ಓದಿ: Afghanistan Update: ಕಾಬೂಲ್ ವಿಮಾನ ನಿಲ್ದಾಣದಲ್ಲಿ ಆತ್ಮಾಹುತಿ ದಾಳಿ ಭೀತಿ, ಗಡುವಿನೊಳಗೆ ಏರ್‌ಲಿಫ್ಟ್​ ಮುಗಿಸಲು ಸರ್ವಪ್ರಯತ್ನ

Published On - 8:35 pm, Thu, 26 August 21

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?