AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್​​ನಲ್ಲಿ ಇನ್ನೊಂದು ದಿನದಲ್ಲಿ ಸರ್ಕಾರ ರಚನೆಯಾಗುತ್ತದೆ ಎಂದ ಪಾಕ್​ ಸಚಿವ

ಆಗಸ್ಟ್​ 15ರಂದು ತಾಲಿಬಾನ್​​ ಅಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿದೆ. ಆದರೆ ನಾಗರಿಕರ ಸ್ಥಳಾಂತರ ಪ್ರಕ್ರಿಯೆ ಹಿನ್ನೆಲೆಯಲ್ಲಿ ಕಾಬೂಲ್​ ಏರ್​ಪೋರ್ಟ್ ಅಮೆರಿಕ ಸೇನೆಯ ವಶದಲ್ಲೇ ಇತ್ತು. ನಿನ್ನೆ ಆ ಏರ್​ಪೋರ್ಟ್ ಕೂಡ ತಾಲಿಬಾನಿಗಳ ಕೈ ಸೇರಿದೆ.

ಅಫ್ಘಾನ್​​ನಲ್ಲಿ ಇನ್ನೊಂದು ದಿನದಲ್ಲಿ ಸರ್ಕಾರ ರಚನೆಯಾಗುತ್ತದೆ ಎಂದ ಪಾಕ್​ ಸಚಿವ
ಶಾ ಮೊಹಮ್ಮದ್​ ಖುರೇಷಿ
TV9 Web
| Edited By: |

Updated on: Aug 31, 2021 | 4:27 PM

Share

ಇಸ್ಲಮಾಬಾದ್​: ಅಫ್ಘಾನಿಸ್ತಾನದಿಂದ ಅಮೆರಿಕ ಸೈನ್ಯ ಸಂಪೂರ್ಣವಾಗಿ ಹೊರಹೋಗಿದ್ದೇ ಹೋಗಿದ್ದು, ತಾಲಿಬಾನಿಗಳಂತೂ ಸಿಕ್ಕಾಪಟೆ ಸಂಭ್ರಮಿಸುತ್ತಿದ್ದಾರೆ. ಈ ಮಧ್ಯೆ ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವ ಶಾ ಮೊಹಮ್ಮದ್​ ಖುರೇಷಿ ಮಾಧ್ಯಮಗಳೊಂದಿಗೆ ಮಾತನಾಡಿ, ಅಫ್ಘಾನಿಸ್ತಾನದಲ್ಲಿ ಇನ್ನೊಂದು ದಿನದಲ್ಲಿ ಸರ್ಕಾರ ರಚನೆಯಾಗುತ್ತದೆ. ಅಲ್ಲಿ ಅತಿ ಶೀಘ್ರದಲ್ಲೇ ಒಮ್ಮತದ ಸರ್ಕಾರ ರಚನೆಯಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದ್ದಾರೆ.

ಆಗಸ್ಟ್​ 15ರಂದು ತಾಲಿಬಾನ್​​ ಅಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿದೆ. ಆದರೆ ನಾಗರಿಕರ ಸ್ಥಳಾಂತರ ಪ್ರಕ್ರಿಯೆ ಹಿನ್ನೆಲೆಯಲ್ಲಿ ಕಾಬೂಲ್​ ಏರ್​ಪೋರ್ಟ್ ಅಮೆರಿಕ ಸೇನೆಯ ವಶದಲ್ಲೇ ಇತ್ತು. ಆದರೆ ನಿನ್ನೆಗೆ ಅದೂ ಮುಕ್ತಾಯಗೊಂಡು, ನಿನ್ನೆ ರಾತ್ರಿಯೇ ಅಮೆರಿಕ ಯೋಧರು ಸ್ವದೇಶಕ್ಕೆ ಮರಳಿದ್ದಾರೆ. ಕಾಬೂಲ್​ ಏರ್​ಪೋರ್ಟ್ ಕೂಡ ತಮ್ಮ ವಶವಾಗುತ್ತಿದ್ದಂತೆ ತಾಲಿಬಾನಿಗಳು ಗಾಳಿಯಲ್ಲಿ ಗುಂಡು ಹಾರಿಸಿ, ಸಿಕ್ಕಾಪಟೆ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನ ತಾಲಿಬಾನ್​ ಗೆಲುವನ್ನು ಸಂಭ್ರಮಿಸುತ್ತಿರುವುದು ಇದೇ ಮೊದಲಲ್ಲ. ಅವರು ಅಫ್ಘಾನಿಸ್ತಾನದಲ್ಲಿ ಅಧಿಕಾರ ಹಿಡಿದಾಗಿನಿಂದಲೂ ಪಾಕ್​ ಅವರ ಪರವಾಗಿಯೇ ಮಾತನಾಡುತ್ತಿದೆ. ಪಾಕ್ ಪ್ರಧಾನಿ ಇಮ್ರಾನ್ ಖಾನ್​ರಿಂದ ಹಿಡಿದು ಪ್ರತಿಯೊಬ್ಬರೂ ತಾಲಿಬಾನಿಗಳ ಆಡಳಿತದ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಇತ್ತ ತಾಲಿಬಾನ್​ ಕೂಡ ಪಾಕಿಸ್ತಾನ ತಮಗೆ ಎರಡನೇ ಮನೆಯಂತೆ ಎಂದು ಹೇಳಿಕೊಂಡಿತ್ತು. ಈಗ ಮತ್ತ ಖುರೇಷಿ ಅಫ್ಘಾನಿಸ್ತಾನದಲ್ಲಿ ಸರ್ಕಾರ ರಚನೆಯಾಗುವ ಬಗ್ಗೆ ಮಾತನಾಡಿದ್ದಾರೆ ಮತ್ತು ಅಲ್ಲಿ ತಾಲಿಬಾನಿಗಳ ಸರ್ಕಾರ ರಚನೆಯಾಗುವದಕ್ಕೇ ತಾವು ಕಾಯುತ್ತಿರುವುದಾಗಿಯೂ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಹೃತಿಕ್ ರೋಶನ್, ಕತ್ರಿನಾ ಕೈಫ್ ಇದ್ದ ಜೊಮೆಟೊ ಜಾಹೀರಾತಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪ: ಸಮರ್ಥಿಸಿಕೊಂಡ ಕಂಪನಿ

West Bengal ಪಶ್ಚಿಮ ಬಂಗಾಳದಲ್ಲಿ ತನ್ಮಯ್ ಘೋಷ್ ನಂತರ ಟಿಎಂಸಿ ಸೇರಿದ ಬಿಜೆಪಿ ಶಾಸಕ ಬಿಸ್ವಜಿತ್ ದಾಸ್

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ