ಇಸ್ಲಮಾಬಾದ್: ಅಫ್ಘಾನಿಸ್ತಾನದಿಂದ ಅಮೆರಿಕ ಸೈನ್ಯ ಸಂಪೂರ್ಣವಾಗಿ ಹೊರಹೋಗಿದ್ದೇ ಹೋಗಿದ್ದು, ತಾಲಿಬಾನಿಗಳಂತೂ ಸಿಕ್ಕಾಪಟೆ ಸಂಭ್ರಮಿಸುತ್ತಿದ್ದಾರೆ. ಈ ಮಧ್ಯೆ ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವ ಶಾ ಮೊಹಮ್ಮದ್ ಖುರೇಷಿ ಮಾಧ್ಯಮಗಳೊಂದಿಗೆ ಮಾತನಾಡಿ, ಅಫ್ಘಾನಿಸ್ತಾನದಲ್ಲಿ ಇನ್ನೊಂದು ದಿನದಲ್ಲಿ ಸರ್ಕಾರ ರಚನೆಯಾಗುತ್ತದೆ. ಅಲ್ಲಿ ಅತಿ ಶೀಘ್ರದಲ್ಲೇ ಒಮ್ಮತದ ಸರ್ಕಾರ ರಚನೆಯಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದ್ದಾರೆ.
ಆಗಸ್ಟ್ 15ರಂದು ತಾಲಿಬಾನ್ ಅಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿದೆ. ಆದರೆ ನಾಗರಿಕರ ಸ್ಥಳಾಂತರ ಪ್ರಕ್ರಿಯೆ ಹಿನ್ನೆಲೆಯಲ್ಲಿ ಕಾಬೂಲ್ ಏರ್ಪೋರ್ಟ್ ಅಮೆರಿಕ ಸೇನೆಯ ವಶದಲ್ಲೇ ಇತ್ತು. ಆದರೆ ನಿನ್ನೆಗೆ ಅದೂ ಮುಕ್ತಾಯಗೊಂಡು, ನಿನ್ನೆ ರಾತ್ರಿಯೇ ಅಮೆರಿಕ ಯೋಧರು ಸ್ವದೇಶಕ್ಕೆ ಮರಳಿದ್ದಾರೆ. ಕಾಬೂಲ್ ಏರ್ಪೋರ್ಟ್ ಕೂಡ ತಮ್ಮ ವಶವಾಗುತ್ತಿದ್ದಂತೆ ತಾಲಿಬಾನಿಗಳು ಗಾಳಿಯಲ್ಲಿ ಗುಂಡು ಹಾರಿಸಿ, ಸಿಕ್ಕಾಪಟೆ ಸಂಭ್ರಮ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನ ತಾಲಿಬಾನ್ ಗೆಲುವನ್ನು ಸಂಭ್ರಮಿಸುತ್ತಿರುವುದು ಇದೇ ಮೊದಲಲ್ಲ. ಅವರು ಅಫ್ಘಾನಿಸ್ತಾನದಲ್ಲಿ ಅಧಿಕಾರ ಹಿಡಿದಾಗಿನಿಂದಲೂ ಪಾಕ್ ಅವರ ಪರವಾಗಿಯೇ ಮಾತನಾಡುತ್ತಿದೆ. ಪಾಕ್ ಪ್ರಧಾನಿ ಇಮ್ರಾನ್ ಖಾನ್ರಿಂದ ಹಿಡಿದು ಪ್ರತಿಯೊಬ್ಬರೂ ತಾಲಿಬಾನಿಗಳ ಆಡಳಿತದ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಇತ್ತ ತಾಲಿಬಾನ್ ಕೂಡ ಪಾಕಿಸ್ತಾನ ತಮಗೆ ಎರಡನೇ ಮನೆಯಂತೆ ಎಂದು ಹೇಳಿಕೊಂಡಿತ್ತು. ಈಗ ಮತ್ತ ಖುರೇಷಿ ಅಫ್ಘಾನಿಸ್ತಾನದಲ್ಲಿ ಸರ್ಕಾರ ರಚನೆಯಾಗುವ ಬಗ್ಗೆ ಮಾತನಾಡಿದ್ದಾರೆ ಮತ್ತು ಅಲ್ಲಿ ತಾಲಿಬಾನಿಗಳ ಸರ್ಕಾರ ರಚನೆಯಾಗುವದಕ್ಕೇ ತಾವು ಕಾಯುತ್ತಿರುವುದಾಗಿಯೂ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ಹೃತಿಕ್ ರೋಶನ್, ಕತ್ರಿನಾ ಕೈಫ್ ಇದ್ದ ಜೊಮೆಟೊ ಜಾಹೀರಾತಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪ: ಸಮರ್ಥಿಸಿಕೊಂಡ ಕಂಪನಿ
West Bengal ಪಶ್ಚಿಮ ಬಂಗಾಳದಲ್ಲಿ ತನ್ಮಯ್ ಘೋಷ್ ನಂತರ ಟಿಎಂಸಿ ಸೇರಿದ ಬಿಜೆಪಿ ಶಾಸಕ ಬಿಸ್ವಜಿತ್ ದಾಸ್