Afghanistan Protests: ಓದುವ ಅವಕಾಶಕ್ಕಾಗಿ ಬೀದಿಗಿಳಿದು ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಜಲಫಿರಂಗಿ ಪ್ರಯೋಗಿಸಿದ ತಾಲೀಬಾನ್

ಅಫ್ಘಾನಿಸ್ತಾನದ ಮಹಿಳೆಯರಿಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಎನ್​ಜಿಒಗಳಲ್ಲಿ ಕೆಲಸ ಮಾಡಲು ಅವಕಾಶ ನಿರಾಕರಿಸಲಾಗಿದೆ.

Afghanistan Protests: ಓದುವ ಅವಕಾಶಕ್ಕಾಗಿ ಬೀದಿಗಿಳಿದು ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಜಲಫಿರಂಗಿ ಪ್ರಯೋಗಿಸಿದ ತಾಲೀಬಾನ್
ಅಫ್ಘಾನಿಸ್ತಾನದಲ್ಲಿ ಮಹಿಳೆಯರ ಪ್ರತಿಭಟನೆ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 25, 2022 | 9:54 AM

ಕಾಬೂಲ್: ಅಫ್ಘಾನಿಸ್ತಾನದ ವಿಶ್ವವಿದ್ಯಾಲಯಗಳಲ್ಲಿ (Afghanistan University) ಕಲಿಯುವ ಅವಕಾಶವನ್ನು ಕಿತ್ತುಕೊಂಡ ತಾಲೀಬಾನ್ ಆಡಳಿತದ ವಿರುದ್ಧ ವಿದ್ಯಾರ್ಥಿನಿಯರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಪ್ರತಿಭಟನಾನಿರತ ಮಹಿಳೆಯರನ್ನು (Women Protest) ಚದುರಿಸಲು ಅಫ್ಘಾನಿಸ್ತಾನದ ಭದ್ರತಾ ಸಿಬ್ಬಂದಿ ಜಲಫಿರಂಗಿಗಳನ್ನು ಬಳಸಿದ್ದಾರೆ. ಈ ವಿದ್ಯಮಾನ ಇದೀಗ ವಿಶ್ವದ ಗಮನ ಸೆಳೆದಿದೆ. ಹೇರಾತ್ ಪಟ್ಟಣದಲ್ಲಿ ನಡೆದ ಪ್ರತಿಭಟನೆ ಹತ್ತಿಕ್ಕಲು ಜಲಫಿರಂಗಿ ಪ್ರಯೋಗಿಸಿದಾಗ ಯುವತಿಯರು ರಕ್ಷಣೆ ಪಡೆಯಲು ಪರದಾಡಿದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಶಿಕ್ಷಣಕ್ಕೆ ಅವಕಾಶ ಬೇಕೆಂದು ಹೋರಾಡುತ್ತಿದ್ದ ಮಹಿಳೆಯರು ತಾಲೀಬಾನ್ ಆಡಳಿತ ನಿರ್ಧಾರ ವಿರೋಧಿಸಿ ಪ್ರತಿಭಟನಾ ಜಾಥಾ ನಡೆಸುತ್ತಿದ್ದರು. ಈ ವೇಳೆ ‘ಶಿಕ್ಷಣ ನಮ್ಮ ಹಕ್ಕು’ ಎಂಬ ಘೋಷಣೆಗಳು ಮೊಳಗುತ್ತಿದ್ದವು. ‘ತಾಲಿಬಾನಿಗಳು ಹೇಡಿಗಳು’ ಎಂದು ಕೆಲವರು ಘೋಷಣೆಗಳನ್ನು ಕೂಗಿದರು.

ಅಫ್ಘಾನಿಸ್ತಾನದ ಮಹಿಳೆಯರಿಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಎನ್​ಜಿಒಗಳಲ್ಲಿ ಕೆಲಸ ಮಾಡಲು ಅವಕಾಶ ನಿರಾಕರಿಸಲಾಗಿದೆ. ಈ ವಿಚಾರವನ್ನು ಅಫ್ಘಾನಿಸ್ತಾನದ ಆರ್ಥಿಕ ವಿದ್ಯಮಾನಗಳ ಸಚಿವ ಅಬ್ದುಲ್ ರೆಹಮಾನ್ ಹಬೀಬ್ ದೃಢಪಡಿಸಿದ್ದಾರೆ ಎಂದು ‘ಬಿಬಿಸಿ’ ವರದಿ ಮಾಡಿದೆ. ‘ಮುಂದಿನ ಸೂಚನೆಯವರೆಗೆ ಮಹಿಳೆಯರಿಗೆ ಕೆಲಸ ಮಾಡಲು ಅವಕಾಶ ನೀಡಬಾರದು’ ಎಂದು ಸರ್ಕಾರದ ಪತ್ರವು ತಿಳಿಸಿದೆ. ‘ಮಹಿಳೆಯರು ಷರಿಯಾ ಕಾನೂನು ಗೌರವಿಸುತ್ತಿಲ್ಲ. ಹಿಜಾಬ್ ಧರಿಸಲು ನಿರಾಕರಿಸುತ್ತಿದ್ದಾರೆ. ಹೀಗಾಗಿ ಇಂಥ ನಿರ್ಬಂಧ ಹೇರುವುದು ಅನಿವಾರ್ಯವಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಮಹಿಳೆಯರಿಗೆ ಪ್ರವೇಶ ನಿರ್ಬಂಧಿಸುವ ಕುರಿತು ಈ ವಾರದ ಆರಂಭದಲ್ಲಿ ಅಫ್ಘಾನಿಸ್ತಾನವು ಹೊರಡಿಸಿದ ಆದೇಶವು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಕ್ರೋಶ ಹುಟ್ಟುಹಾಕಿತ್ತು. ‘ಪುರುಷರೊಂದಿಗೆ ಹೆಜ್ಜೆ ಹಾಕುವಾಗ, ಮಾತನಾಡುವಾಗ ಮಹಿಳೆಯರು ಷರಿಯಾ ಕಾನೂನು ಅನುಸರಿಸುತ್ತಿಲ್ಲ. ಹೀಗಾಗಿ ವಿಶ್ವವಿದ್ಯಾಲಯಗಳಿಗೆ ಮಹಿಳೆಯರ ಪ್ರವೇಶವನ್ನು ನಿರ್ಬಂಧಿಸುವುದು ಅನಿವಾರ್ಯವಾಗಿದೆ’ ಎಂದು ಅಫ್ಘಾನಿಸ್ತಾನ ತನ್ನ ನಿರ್ಧಾರವನ್ನು ಸಮರ್ಥಿಸಿತ್ತು.

‘ಕಾಲೇಜುಗಳಿಗೆ ಬರುವ ವಿದ್ಯಾರ್ಥಿನಿಯರು ಮದುವೆಗಳಿಗೆ ಹೋಗುವಂತೆ ಅಲಂಕರಿಸಿಕೊಳ್ಳುತ್ತಿದ್ದಾರೆ. ಇದನ್ನು ಸಹಿಸಿಕೊಳ್ಳುವುದು ಹೇಗೆ’ ಎಂದು ಉನ್ನತ ಶಿಕ್ಷಣ ಸಚಿ ನೆದಾ ಮೊಹಮದ್ ಪ್ರಶ್ನಿಸಿದ್ದರು. ನಂತರದ ದಿನಗಳಲ್ಲಿ ಅಫ್ಘಾನಿಸ್ತಾನದ ವಿವಿಧೆಡೆ ಪ್ರತಿಭಟನೆ ನಡೆದಿತ್ತು. ಈ ವೇಳೆ ಹಲವು ವಿದ್ಯಾರ್ಥಿನಿಯರು ಹಾಗೂ ಪತ್ರಕರ್ತರನ್ನು ಬಂಧಿಸಲಾಗಿದೆ. ಆಗಸ್ಟ್​ 2021ರಲ್ಲಿ ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡ ನಂತರ ಹೆಣ್ಣುಮಕ್ಕಳಿಗೆ ವಿದ್ಯಾಭ್ಯಾಸವನ್ನು ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕೆಲಸ ಮಾಡುವ, ಸರ್ಕಾರಿ ಉದ್ಯೋಗದ ಅವಕಾಶಗಳನ್ನೂ ಮಹಿಳೆಯರಿಂದ ಕಿತ್ತುಕೊಳ್ಳಲಾಗಿದೆ.

ಅಫ್ಘಾನಿಸ್ತಾನ ವಿದ್ಯಮಾನಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Published On - 9:52 am, Sun, 25 December 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್