AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabul Blast: ಕಾಬೂಲ್ ವಿಮಾನ ನಿಲ್ದಾಣದ ಬಳಿ ಪ್ರಬಲ ಬಾಂಬ್​ ಸ್ಫೋಟ

ಬಾಂಬ್ ಸ್ಫೋಟ ನಡೆದ ಸ್ಥಳದಲ್ಲಿ ಅಫ್ಘಾನ್ ನಾಗರಿಕರ ಜೊತೆಗೆ ಅಮೆರಿಕ ನಾಗರಿಕರು ಮತ್ತು ಭದ್ರತಾ ಸಿಬ್ಬಂದಿ ಇದ್ದರು ಎನ್ನಲಾಗಿದೆ.

Kabul Blast: ಕಾಬೂಲ್ ವಿಮಾನ ನಿಲ್ದಾಣದ ಬಳಿ ಪ್ರಬಲ ಬಾಂಬ್​ ಸ್ಫೋಟ
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಸ್ಫೋಟದಲ್ಲಿ ಗಾಯಗೊಂಡವರು
Ghanashyam D M | ಡಿ.ಎಂ.ಘನಶ್ಯಾಮ
|

Updated on:Aug 26, 2021 | 7:48 PM

Share

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​​ನ ಹಮೀದ್ ಕರ್ಜೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಗುರುವಾರ ರಾತ್ರಿ ಪ್ರಬಲ ಬಾಂಬ್​ ಸ್ಫೋಟಿಸಿದೆ. ಬಾಂಬ್ ಸ್ಫೋಟ ನಡೆದ ಸ್ಥಳದಲ್ಲಿ ಅಫ್ಘಾನ್ ನಾಗರಿಕರ ಜೊತೆಗೆ ಅಮೆರಿಕ ನಾಗರಿಕರು ಮತ್ತು ಭದ್ರತಾ ಸಿಬ್ಬಂದಿ ಇದ್ದರು ಎನ್ನಲಾಗಿದೆ. ಸಾವುನೋವು ಹಾಗೂ ಗಾಯಾಳುಗಳ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಾಂಬ್​ ಸ್ಫೋಟಿಸಿರುವುದನ್ನು ಅಮೆರಿಕ ರಾಜಧಾನಿ ವಾಷಿಂಗ್​ಟನ್​ನಲ್ಲಿ ಪೆಂಟಗನ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಅಮೆರಿಕದ ಸುದ್ದಿ ಮಾಧ್ಯಮ ಸಿಎನ್​ಎನ್​ ಪೆಂಟಗನ್ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಪ್ರಕಟಿಸಿದೆ. ಬಾಂಬ್​ ಸ್ಫೋಟದಿಂದ ಗಾಯಗೊಂಡವರನ್ನು ಆಸ್ಪತ್ರೆಗಳಿಗೆ ಕರೆದೊಯ್ಯುತ್ತಿರುವ ಚಿತ್ರಗಳನ್ನು ಟ್ವಿಟರ್​ನಲ್ಲಿಯೂ ಹಲವರು ಹಂಚಿಕೊಂಡಿದ್ದಾರೆ.

ವಿಮಾನ ನಿಲ್ದಾಣದ ಪ್ರವೇಶ ದ್ವಾರದ ಬಳಿ ಸ್ಫೋಟ ಸಂಭವಿಸಿದೆ. ಮೇಲ್ನೋಟಕ್ಕೆ ಇದು ಆತ್ಮಾಹುತಿ ಬಾಂಬ್​ ಎನಿಸುತ್ತದೆ. ಅಫ್ಘಾನ್ ನಾಗರಿಕರು ವಿಮಾನ ನಿಲ್ದಾಣ ಪ್ರವೇಶಿಸಲು ಮುಗಿಬಿದ್ದು, ನೂಕುನುಗ್ಗಲು ಉಂಟಾದ ವೇಳೆಯಲ್ಲಿಯೆ ಬಾಂಬ್ ಸ್ಫೋಟಿಸಿದೆ. ಬಾಂಬ್ ಸ್ಫೋಟಿಸಿದ ಸಂದರ್ಭದಲ್ಲಿ ವಿಮಾನ ನಿಲ್ದಾಣ ಪ್ರವೇಶ ದ್ವಾರದ ಬಳಿ ಅಫ್ಘಾನಿಗಳು ದೊಡ್ಡಸಂಖ್ಯೆಯಲ್ಲಿದ್ದರು ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ.

ಪೆಂಟಗನ್ ವಕ್ತಾರ ಜಾನ್ ಕರ್ಬಿ ಸಹ ಸ್ಫೋಟವನ್ನು ದೃಢಪಡಿಸಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾದ ತಕ್ಷಣ ಹಂಚಿಕೊಳ್ಳುತ್ತೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಈ ಕುರಿತು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರಿಗೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾಬೂಲ್​ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಲಿದೆ ಎಂದು ಅಮೆರಿಕ ಅಧಿಕಾರಿಗಳು ಈ ಮೊದಲು ಎಚ್ಚರಿಸಿದ್ದರು. ಆತ್ಮಾಹುತಿ ಬಾಂಬ್ ದಾಳಿಯೇ ನಡೆಯಬಹುದು ಎಂದು ಖಚಿತವಾಗಿ ನುಡಿದಿದ್ದರು. ‘ಬಾಂಬ್ ಸ್ಫೋಟಿಸಲಿದೆ, ಅದನ್ನು ತಡೆಯುವ ಸ್ಥಿತಿಯಲ್ಲಿ ನಾವಿಲ್ಲ ಎಂಬುದು ನಮಗೆ ಗೊತ್ತಿತ್ತು’ ಎಂದು ಅಮೆರಿಕ ದೂತಾವಾಸದ ಅಧಿಕಾರಿ ರೋಸ್ ವಿಲ್ಸನ್ ಹೇಳಿದ್ದಾರೆ.

(Blast reported near Hamid Karzai international airport in Kabul)

ಇದನ್ನೂ ಓದಿ: Afghanistan Update: ಕಾಬೂಲ್ ವಿಮಾನ ನಿಲ್ದಾಣದಲ್ಲಿ ಆತ್ಮಾಹುತಿ ದಾಳಿ ಭೀತಿ, ಗಡುವಿನೊಳಗೆ ಏರ್‌ಲಿಫ್ಟ್​ ಮುಗಿಸಲು ಸರ್ವಪ್ರಯತ್ನ

ಇದನ್ನೂ ಓದಿ: Afghanistan Crisis: ಅಮೆರಿಕ ಭದ್ರತಾ ಪಡೆಗಳು ಅಫ್ಘಾನಿಸ್ತಾನದಿಂದ ಹಿಂದಿರುಗಿದ ನಂತರ ಅಲ್ಲೇ ಉಳಿದವರ ಕಥೆಯೇನು?

Published On - 7:27 pm, Thu, 26 August 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು