ಅಫ್ಘಾನಿಸ್ತಾನದಲ್ಲಿ ಪ್ರತಿಭಟನೆಗೆ ಅನುಮತಿ ಕಡ್ಡಾಯ, ನಾಯಕರನ್ನು ಬೈಯ್ಯುವಂತಿಲ್ಲ: ತಾಲಿಬಾನ್ ವಕ್ತಾರ ಸುಹೇಲ್ ಶಾಹೀನ್
ಈಗ ನಡೆಯುತ್ತಿರುವಂತೆ ಅಫ್ಘನ್ ನಾಯಕರ ನಿಂದನೆಗೆ ಅವಕಾಶವಿಲ್ಲ. ಯಾರೂ ನಾಯಕರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಕೂಡದು. ಸಂಘರ್ಷದ ವಾತಾವರಣ ಸೃಷ್ಟಿಸಿ ಅದನ್ನು ಚಿತ್ರೀಕರಿಸಿ, ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು. ಯಾವ ಸ್ಥಳದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂಬ ಮಾಹಿತಿಯನ್ನೂ ಮೊದಲೇ ತಿಳಿಸಬೇಕು.
ಅಫ್ಘಾನಿಸ್ತಾನದಲ್ಲಿ ಸರ್ಕಾರ ರಚಿಸಿರುವ ತಾಲಿಬಾನ್ ನಾಯಕರು ತಮ್ಮ ಮೂಗಿನ ನೇರಕ್ಕೆ ನಿಯಮಾವಳಿಗಳನ್ನು ರೂಪಿಸುತ್ತಿದ್ದು ಇದೀಗ ಪ್ರತಿಭಟನೆ ಸಂಬಂಧ ಹೊಸ ಆದೇಶ ಹೊರಡಿಸಿದ್ದಾರೆ. ಆಫ್ಘನ್ನಲ್ಲಿ ಶಾಂತಿಯುತ ಪ್ರತಿಭಟನೆ ಮಾಡಬೇಕು. ಅದನ್ನು ಮಾಡುವುದಕ್ಕೂ ಅಧಿಕಾರಿಗಳಿಂದ ಅನುಮತಿ ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಘರ್ಷದ ವಾತಾವರಣವನ್ನು ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತಿಲ್ಲ ಎಂದು ತಾಲಿಬಾನ್ ವಕ್ತಾರ ಸುಹೇಲ್ ಶಾಹೀನ್ ಹೇಳಿಕೆ ನೀಡಿದ್ದಾರೆ.
ಈಗ ನಡೆಯುತ್ತಿರುವಂತೆ ಅಫ್ಘನ್ ನಾಯಕರ ನಿಂದನೆಗೆ ಅವಕಾಶವಿಲ್ಲ. ಯಾರೂ ನಾಯಕರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಕೂಡದು. ಸಂಘರ್ಷದ ವಾತಾವರಣ ಸೃಷ್ಟಿಸಿ ಅದನ್ನು ಚಿತ್ರೀಕರಿಸಿ, ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು. ಯಾವ ಸ್ಥಳದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂಬ ಮಾಹಿತಿಯನ್ನೂ ಮೊದಲೇ ತಿಳಿಸಬೇಕು. ನಿಯಮ ಮೀರುವುದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂಬ ಎಚ್ಚರಿಕೆ ನೀಡಿದ್ದಾರೆ.
ಪ್ರಧಾನಿ, ಉಪಪ್ರಧಾನಿ, ಸಚಿವರೆಲ್ಲರೂ ವಿಶ್ವಸಂಸ್ಥೆ ಗುರುತಿಸಿದ ಜಾಗತಿಕ ಉಗ್ರರು! ವಿಪರ್ಯಾಸವೆಂದರೆ ಈಗ ಅಫ್ಘಾನಿಸ್ತಾನದಲ್ಲಿ ಪ್ರಧಾನಿ ಪಟ್ಟಕ್ಕೆ ಏರಿದವರಿಂದ ಹಿಡಿದು ಸಚಿವ ಸಂಪುಟದಲ್ಲಿರುವ ಬಹುತೇಕ ಎಲ್ಲರೂ ವಿಶ್ವ ಸಂಸ್ಥೆಯ ಘೋಷಿತ ಭಯೋತ್ಪಾದಕರಾಗಿದ್ದಾರೆ. ಅಂದರೆ ಈ ಹಿಂದೆ ವಿಶ್ವ ಸಂಸ್ಥೆ ಯಾರನ್ನೆಲ್ಲಾ ಭಯೋತ್ಪಾದಕರು ಎಂದು ಘೋಷಣೆ ಮಾಡಿತ್ತೋ ಅವರೇ ಈಗ ಸರ್ಕಾರ ರಚನೆ ಮಾಡಿದ್ದಾರೆ.
ಅಫ್ಘಾನಿಸ್ತಾನದ ನೂತನ ಪ್ರಧಾನಿ ಮುಲ್ಲಾ ಮೊಹಮ್ಮದ್ ಹಸನ್ ಅಕುಂದ್, ಉಪಪ್ರಧಾನಿ ಮುಲ್ಲಾ ಅಬ್ದುಲ್ ಘನಿ ಬರಾದಾರ್, ಒಳಾಡಳಿತ ಸಚಿವ ಸಿರಾಜುದ್ದೀನ್ ಹಕ್ಕಾನಿಯನ್ನು ವಿಶ್ವ ಸಂಸ್ಥೆಯ ಭದ್ರತಾ ಮಂಡಳಿ ಈ ಹಿಂದೆಯೇ ಜಾಗತಿಕ ಭಯೋತ್ಪಾದಕರು ಎಂದು ಘೋಷಣೆ ಮಾಡಿತ್ತು. ಅಲ್ಲದೇ ಇವರುಗಳನ್ನು 1988 ರ ನಿರ್ಬಂಧ ಪಟ್ಟಿಗೆ ಸೇರಿಸಿತ್ತು. ಆದರೆ ಇದೀಗ ಘೋಷಿತ ಭಯೋತ್ಪಾದಕರ ಜತೆಗೇನೇ ವಿಶ್ವ ಸಂಸ್ಥೆ, ಅಮೆರಿಕಾ ರಾಜತಾಂತ್ರಿಕ ವ್ಯವಹಾರಗಳನ್ನು ನಡೆಸಬೇಕಾದ ಪರಿಸ್ಥಿತಿ ಎದುರಾಗಿದೆ.
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಅನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡು ಸುಮಾರು 2 ವಾರಗಳಾಗಿವೆ. ಇದಾದ ಬಳಿಕ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದರು. ಆ. 15ರಂದು ತಾಲಿಬಾನ್ ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ಪಡೆದಿತ್ತು. ಅಫ್ಘಾನಿಸ್ತಾನದಲ್ಲಿ ಮುಂದಿನ ವಾರ ನೂತನ ಸರ್ಕಾರ ರಚನೆಯಾಗಲಿದ್ದು, ತಾಲಿಬಾನ್ ಸಂಘಟನೆಯ ಪ್ರಮುಖ ನಾಯಕರಿಗೆ ಮಹತ್ವದ ಹುದ್ದೆಗಳು ಸಿಗಲಿವೆ. ಈಗಾಗಲೇ ಸಿಕ್ಕಿರುವ ಮಾಹಿತಿಯಂತೆ ಶೇಖ್ ಹೈಬತುಲ್ಲಾ ಅಖುಂಡಜಾದ, ಮುಲ್ಲಾ ಮುಹಮ್ಮದ್ ಒಮರ್ ಅವರ ಮಗನಾದ ಮೌಲವಿ ಮುಹಮ್ಮದ್ ಯಾಕೂಬ್ ಅವರಿಗೆ ಪ್ರಮುಖ ಸ್ಥಾನಗಳನ್ನು ನೀಡಲಾಗುವುದು. ಈ ಮೊದಲು ಮುಲ್ಲಾ ಹಿಬತುಲ್ಲಾ ಅಖುಂಡಜಾದ ಅವರನ್ನೇ ನೂತನ ಅಧ್ಯಕ್ಷರನ್ನಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ಬಳಿಕ ಮುಲ್ಲಾ ಬರಾದಾರ್ ಹೆಸರು ಕೇಳಿಬಂದಿತ್ತು. ಇದೀಗ ಮುಲ್ಲಾ ಮೊಹಮ್ಮದ್ ಹಸನ್ ಅಕುಂದ್ ಅವರನ್ನು ಪ್ರಧಾನಿಯಾಗಿ ಘೋಷಿಸಲಾಗಿದೆ. ಅಫ್ಘಾನ್ ಸರ್ಕಾರ ಈಗಾಗಲೇ ವಿವಿಧ ರಾಜ್ಯಗಳಿಗೆ ರಾಜ್ಯಪಾಲರು, ಪೊಲೀಸ್ ಮುಖ್ಯಸ್ಥರು, ಜಿಲ್ಲಾ ಮಟ್ಟದ ಪ್ರಮುಖ ಅಧಿಕಾರಿಗಳನ್ನು ನೇಮಕ ಮಾಡಿದೆ
(Citizens should get permission before protesting in Afghanistan still no one has the right to scold Taliban leaders)
ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ನೂತನ ತಾಲಿಬಾನ್ ಸರ್ಕಾರದ ಚುಕ್ಕಾಣಿ ಹಿಡಿಯಲಿರುವ ಪ್ರಮುಖ ನಾಯಕರು ಯಾರೆಲ್ಲ?