AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದ ಬಗ್ಗೆ ಮಹತ್ವದ ಸಂವಾದ ನಡೆಸಲು ಮುಂದಾದ ಭಾರತ, ಚೀನಾ-ಪಾಕಿಸ್ತಾನಕ್ಕೂ ಆಹ್ವಾನ

ಈ ವರ್ಷ ನವೆಂಬರ್ 10ರಂದು ಸಮಾವೇಶಕ್ಕೆ ದಿನಾಂಕ ನಿಗದಿಯಾಗಿದೆ. ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೊಬಾಲ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಅಫ್ಘಾನಿಸ್ತಾನದ ಬಗ್ಗೆ ಮಹತ್ವದ ಸಂವಾದ ನಡೆಸಲು ಮುಂದಾದ ಭಾರತ, ಚೀನಾ-ಪಾಕಿಸ್ತಾನಕ್ಕೂ ಆಹ್ವಾನ
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಹೋರಾಟಗಾರರು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Nov 05, 2021 | 9:24 PM

Share

ದೆಹಲಿ: ಅಫ್ಘಾನಿಸ್ತಾನವನ್ನು ತಾಲಿಬಾನ್ ಹೋರಾಟಗಾರರು ತಮ್ಮ ಸುಪರ್ದಿಗೆ ತೆಗೆದುಕೊಂಡ ನಂತರದ ಬೆಳವಣಿಗೆಗಳನ್ನು ಚರ್ಚಿಸಲೆಂದು ಭಾರತವು ಉನ್ನತ ಮಟ್ಟದ ಭದ್ರತಾ ಮಾತುಕತೆಗೆ ವೇದಿಕೆ ಸಿದ್ಧಪಡಿಸಿದೆ. ದೆಹಲಿ ಪ್ರಾದೇಶಿಕ ಭದ್ರತಾ ಮಾತುಕತೆ (Delhi Regional Security Dialogue) ಹೆಸರಿನ ಈ ಸಂವಾದವು ಸೆಪ್ಟೆಂಬರ್ 2018 ಮತ್ತು ಡಿಸೆಂಬರ್ 2019ರಂದು ನಡೆದಿತ್ತು. ಆದರೆ ಕಳೆದ ವರ್ಷ ಕೊರೊನಾ ಪಿಡುಗಿನ ಕಾರಣ ಈ ಸಮಾವೇಶವು ನಡೆಯಲಿಲ್ಲ. ಈ ವರ್ಷ ನವೆಂಬರ್ 10ರಂದು ಸಮಾವೇಶಕ್ಕೆ ದಿನಾಂಕ ನಿಗದಿಯಾಗಿದೆ. ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೊಬಾಲ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಭಾರತದ ಆಮಂತ್ರಣಕ್ಕೆ ವಿಶ್ವದ ಹಲವು ದೇಶಗಳಿಂದ ಉತ್ಸಾಹದ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಷ್ಯಾ ಮತ್ತು ಇರಾನ್ ಸೇರಿದಂತೆ ಹಲವು ಮಧ್ಯ ಏಷ್ಯಾದ ದೇಶಗಳು ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿವೆ. ಅಫ್ಘಾನಿಸ್ತಾನದೊಂದಿಗೆ ಭೂಗಡಿ ಹಂಚಿಕೊಂಡಿರುವ ದೇಶಗಳು ಮಾತ್ರವಲ್ಲದೆ, ಮಧ್ಯ ಏಷ್ಯಾದ ಎಲ್ಲ ದೇಶಗಳೂ ಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷ. ಇಂಥ ಸಭೆ ನಡೆಯುತ್ತಿರುವುದು ಇದೇ ಮೊದಲು.

ಭಾರತದ ಈ ಪ್ರಯತ್ನಕ್ಕೆ ವಿವಿಧ ದೇಶಗಳಲ್ಲಿ ಸಿಕ್ಕಿರುವ ಸ್ವಾಗತಾರ್ಹ ಪ್ರತಿಕ್ರಿಯೆಯು ಅಫ್ಘಾನಿಸ್ತಾನದಲ್ಲಿ ಶಾಂತಿ ಮತ್ತು ಭದ್ರತೆಗೆ ನೆಲೆಗೊಳ್ಳುವ ಪ್ರಕ್ರಿಯೆಯಲ್ಲಿ ಭಾರತಕ್ಕೆ ಇರುವ ಮಹತ್ವವನ್ನು ಸಾರಿ ಹೇಳುತ್ತದೆ. ಚೀನಾ ಮತ್ತು ಪಾಕಿಸ್ತಾನಗಳಿಗೂ ಭಾರತ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿದೆ. ಈ ದೇಶಗಳು ಇನ್ನೂ ಅಧಿಕೃತವಾಗಿ ಪ್ರತಿಕ್ರಿಯಿಸಿಲ್ಲ. ತಾನು ಈ ಸಂವಾದದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪಾಕಿಸ್ತಾನವು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದೆ.

‘ಪಾಕಿಸ್ತಾನದ ಪ್ರತಿಕ್ರಿಯೆಯು ಅನಪೇಕ್ಷಿತವಾದುದು. ಆದರೆ ಅಚ್ಚರಿಯನ್ನೇನೂ ತಂದಿಲ್ಲ. ಅಫ್ಘಾನಿಸ್ತಾನವನ್ನು ತನ್ನ ಕೈಗೊಂಬೆಯಾಗಿ ನೋಡುವ ದೃಷ್ಟಿಕೋನವನ್ನು ಪಾಕಿಸ್ತಾನ ಹೊಂದಿದೆ. ಅಫ್ಘಾನಿಸ್ತಾನದಲ್ಲಿ ಭಾರತಕ್ಕೆ ಯಾವುದೇ ಪಾತ್ರವಿಲ್ಲ ಎಂದು ಅಲ್ಲಿನ ಮಾಧ್ಯಮಗಳು ಟೀಕಿಸುತ್ತಿವೆ. ಭಾರತದ ಪ್ರಯತ್ನಕ್ಕೆ ಅಡ್ಡಿಯುಂಟುಮಾಡುವ ಈ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ಭಾರತ ಸರ್ಕಾರದ ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಭಾರತವು ಆಯೋಜಿಸಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲು ಹಲವು ದೇಶಗಳು ಉತ್ಸಾಹ ತೋರಿರುವುದು ಮಹತ್ವದ ಬೆಳವಣಿಗೆ. ಅಫ್ಘಾನಿಸ್ತಾನದ ಆಗುಹೋಗುಗಳಲ್ಲಿ ವಿವಿಧ ದೇಶಗಳ ಸಹಯೋಗದಿಂದ ಕೆಲಸ ಮಾಡಲು ಮುಂದಾಗಿರುವುದನ್ನು ಈ ಅಂಶವು ಸಾರಿಹೇಳುತ್ತದೆ. ಈ ಪ್ರಕ್ರಿಯೆಯಲ್ಲಿ ಭಾರತಕ್ಕೆ ಅತ್ಯಂತ ಪ್ರಮುಖ ಪಾತ್ರವಿದೆ ಎಂದು ಮೂಲಗಳು ಹೇಳಿವೆ. ಅಮೆರಿಕ ಸೇನೆಯು ಹಿಂದಿರುಗುವ ಮೊದಲೇ ಅಫ್ಘಾನಿಸ್ತಾನವು ತಾಲಿಬಾನ್ ಹೋರಾಟಗಾರರು ಸುಪರ್ದಿಗೆ ಬಂದಿತ್ತು. 20 ವರ್ಷಗಳ ನಿರಂತರ ಸಂಘರ್ಷದಿಂದ ನಲುಗಿದ್ದ ಅಫ್ಘಾನಿಸ್ತಾನದ ಈಗಿನ ಸ್ಥಿತಿಯು ಭಾರತದ ಮೇಲೆ ಹಲವು ರೀತಿಯ ಪರಿಣಾಮಗಳನ್ನು ಬೀರಬಲ್ಲದು ಎಂದು ವಿಶ್ಲೇಷಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಮೇಲೆ ದಾಳಿ ನಡೆಸಲು ಪಾಕಿಸ್ತಾನವು ಅಫ್ಘಾನಿಸ್ತಾನವನ್ನು ಬಳಸಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ವಿದೇಶೀ ಕರೆನ್ಸಿ ಸಂಪೂರ್ಣ ನಿಷೇಧ; ಅಫ್ಘಾನ್​ ​ಕರೆನ್ಸಿಯನ್ನೇ ಬಳಸಲು ತಾಲಿಬಾನ್ ಸೂಚನೆ ಇದನ್ನೂ ಓದಿ: ಅಫ್ಘಾನಿಸ್ತಾನ ಉಗ್ರರ ಪಾಲಿನ ಸ್ವರ್ಗವಾಗದಿರಲಿ; ತಾಲಿಬಾನ್​ಗೆ ಭಾರತ, ಅಮೆರಿಕ ಒತ್ತಾಯ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ