ಕಾಬೂಲ್ ನಗರದ ಮಹಿಳಾ ಉದ್ಯೋಗಿಗಳಿಗೆ ಮನೆಯಲ್ಲೇ ಇರಿ ಎಂದು ಆದೇಶಿಸಿದ ತಾಲಿಬಾನ್

Taliban: ಕಾಬೂಲ್ ಪುರಸಭೆಯ ಇಲಾಖೆಗಳಲ್ಲಿ ಮಹಿಳಾ ಉದ್ಯೋಗಿಗಳ ಬಗ್ಗೆ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ ಮತ್ತು ಈ ಮಧ್ಯೆ ಅವರು ತಮ್ಮ ಸಂಬಳವನ್ನು ತೆಗೆದುಕೊಳ್ಳುತ್ತಾರೆ ಎಂದು ಮೇಯರ್ ಹೇಳಿರುವುದಾಗಿ ಅಸೋಸಿಯೇಟ್ ಪ್ರೆಸ್ ವರದಿ ಮಾಡಿದೆ.

ಕಾಬೂಲ್ ನಗರದ ಮಹಿಳಾ ಉದ್ಯೋಗಿಗಳಿಗೆ ಮನೆಯಲ್ಲೇ ಇರಿ ಎಂದು ಆದೇಶಿಸಿದ ತಾಲಿಬಾನ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 19, 2021 | 6:13 PM

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿಯ ಹಂಗಾಮಿ ಮೇಯರ್ ಹೇಳುವಂತೆ ಅನೇಕ ಮಹಿಳಾ ನಗರ ಉದ್ಯೋಗಿಗಳಿಗೆ ದೇಶದ ಹೊಸ ತಾಲಿಬಾನ್ ಆಡಳಿತಗಾರರು ಮನೆಯಲ್ಲೇ ಇರುವಂತೆ ಆದೇಶಿಸಲಾಗಿದೆ. ಪುರುಷರಿಂದ ಮಾಡಲು ಸಾಧ್ಯವಾಗದೇ ಇರುವ ಅಥವಾ ಮಹಿಳೆಯರಿಂದ ಮಾತ್ರ ಸಾಧ್ಯ ಎಂದು ಹೇಳುವ ಕೆಲಸಕ್ಕೆ ಮಾತ್ರ ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಲಾಗಿದೆ ಎಂದು ಹಮ್ದುಲ್ಲಾ ನಮೋನಿ (Hamdullah Namony) ಭಾನುವಾರ ಸುದ್ದಿಗಾರರಿಗೆ ತಿಳಿಸಿದರು. ಇದು ವಿನ್ಯಾಸ ಮತ್ತು ಎಂಜಿನಿಯರಿಂಗ್ ವಿಭಾಗಗಳಲ್ಲಿ ನುರಿತ ಕೆಲಸಗಾರರು ಹಾಗೂ ಮಹಿಳೆಯರಿಗಾಗಿ ಸಾರ್ವಜನಿಕ ಶೌಚಾಲಯಗಳ ಮಹಿಳಾ ಪರಿಚಾರಕರನ್ನು ಒಳಗೊಂಡಿದೆ ಎಂದು ಅವರು ಹೇಳುತ್ತಾರೆ. ಸಹಿಷ್ಣುತೆ ಮತ್ತು ಸೇರ್ಪಡೆಯ ಆರಂಭಿಕ ಭರವಸೆಗಳ ಹೊರತಾಗಿಯೂ, ತಾಲಿಬಾನ್‌ಗಳು ಇಸ್ಲಾಂನ ಕಠಿಣ ವ್ಯಾಖ್ಯಾನವನ್ನು ಜಾರಿಗೊಳಿಸುತ್ತಿವೆ ಎಂಬುದಕ್ಕೆ ನಮೋನಿಯ ಈ ಹೇಳಿಕೆಗಳೇ ಸಾಕ್ಷಿ. ಸಾರ್ವಜನಿಕ ಜೀವನದಲ್ಲಿ ಮಹಿಳೆಯರಿಗೆ ನಿರ್ಬಂಧಗಳನ್ನು ವಿಧಿಸಿರುವುದಕ್ಕೆ ಇದು ಮತ್ತೊಂದು ಸಂಕೇತವಾಗಿದೆ. 1990 ರ ದಶಕದಲ್ಲಿ ಅವರ ಹಿಂದಿನ ಆಡಳಿತದಲ್ಲಿ, ತಾಲಿಬಾನ್ ಹುಡುಗಿಯರು ಮತ್ತು ಮಹಿಳೆಯರನ್ನು ಶಾಲೆಗಳು ಮತ್ತು ಉದ್ಯೋಗಗಳಿಂದ ನಿರ್ಬಂಧಿಸಿತ್ತು.

ಕಾಬೂಲ್ ಪುರಸಭೆಯ ಇಲಾಖೆಗಳಲ್ಲಿ ಮಹಿಳಾ ಉದ್ಯೋಗಿಗಳ ಬಗ್ಗೆ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ ಮತ್ತು ಈ ಮಧ್ಯೆ ಅವರು ತಮ್ಮ ಸಂಬಳವನ್ನು ತೆಗೆದುಕೊಳ್ಳುತ್ತಾರೆ ಎಂದು ಮೇಯರ್ ಹೇಳಿರುವುದಾಗಿ ಅಸೋಸಿಯೇಟ್ ಪ್ರೆಸ್ ವರದಿ ಮಾಡಿದೆ.

ಕಳೆದ ತಿಂಗಳು ಅಫ್ಘಾನಿಸ್ತಾನವನ್ನು ತಾಲಿಬಾನ್ ಸ್ವಾಧೀನಪಡಿಸಿಕೊಳ್ಳುವ ಮೊದಲು, 3,000 ನಗರ ಉದ್ಯೋಗಿಗಳ ಪೈಕಿ ಕೇವಲ ಮೂರನೇ ಒಂದು ಭಾಗದಷ್ಟು ಮಹಿಳೆಯರು ಎಲ್ಲಾ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದರು ಎಂದು ನಮೋನಿ ಹೇಳಿದ್ದಾರೆ.

ಇದನ್ನೂ ಓದಿ: ‘ಕಾಬೂಲ್​ ಏರ್​ಪೋರ್ಟ್​​ ಮೇಲೆ ನಾವು ಡ್ರೋನ್​ ದಾಳಿ ಮಾಡಿದ್ದು ತಪ್ಪಾಯ್ತು’-ಕ್ಷಮೆ ಕೇಳಿದ ಯುಎಸ್​

ಇದನ್ನೂ ಓದಿ: Punjab CM: ಚರಣ್‌ಜಿತ್ ಸಿಂಗ್ ಛನ್ನಿ ಪಂಜಾಬ್‌ನ ನೂತನ ಮುಖ್ಯಮಂತ್ರಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ