ಪಂಜ್​ಶೀರ್​ ವಶಪಡಿಸಿಕೊಂಡಿದ್ದಾಗಿ ತಾಲಿಬಾನ್ ಘೋಷಣೆ; ರಸ್ತೆ ಮಾತ್ರ ನಿಮ್ಮ ವಶದಲ್ಲಿದೆ ಎಂದು ತಿರುಗೇಟು ಕೊಟ್ಟ ರೆಸಿಸ್ಟೆನ್ಸ್ ಫ್ರಂಟ್‌

ಇದಕ್ಕೆ ತಿರುಗೇಟು ನೀಡಿರುವ ರೆಸಿಸ್ಟೆನ್ಸ್ ಫ್ರಂಟ್‌, ಪಂಜ್‌ಶೀರ್‌ ಕಣಿವೆ ಮೇಲೆ ಇನ್ನೂ ನಮ್ಮ ಹಿಡಿತವಿದೆ. ತಾಲಿಬಾನ್ ಕೇವಲ ಪಂಜ್‌ಶೀರ್‌ ರಸ್ತೆಯನ್ನು ವಶಕ್ಕೆ ಪಡೆದಿದೆ. ಪಂಜ್​ಶೀರ್ ಪ್ರಾಂತ್ಯ ಅವರ ಹಿಡಿತಕ್ಕೆ ಸಿಲುಕಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಪಂಜ್​ಶೀರ್​ ವಶಪಡಿಸಿಕೊಂಡಿದ್ದಾಗಿ ತಾಲಿಬಾನ್ ಘೋಷಣೆ; ರಸ್ತೆ ಮಾತ್ರ ನಿಮ್ಮ ವಶದಲ್ಲಿದೆ ಎಂದು ತಿರುಗೇಟು ಕೊಟ್ಟ ರೆಸಿಸ್ಟೆನ್ಸ್ ಫ್ರಂಟ್‌
ಸಾಂಕೇತಿಕ ಚಿತ್ರ
Follow us
TV9 Web
| Updated By: Skanda

Updated on: Sep 06, 2021 | 8:05 AM

ಅಫ್ಘಾನಿಸ್ತಾನದ ಬಹುಭಾಗವನ್ನು ಆಕ್ರಮಿಸಿಕೊಂಡಿರುವ ತಾಲಿಬಾನ್​ ಉಗ್ರರು ಇದೀಗ ಪಂಜ್​ಶೀರ್​ ಪ್ರಾಂತ್ಯವನ್ನೂ ತಮ್ಮ ತೆಕ್ಕೆಗೆ ತೆಗೆದುಕೊಂಡಿರುವುದಾಗಿ ಘೋಷಿಸಿದ್ದಾರೆ. ತಾಲಿಬಾನ್ ಸಂಘಟನೆ ವಕ್ತಾರ ಸುಹೈಲ್ ಶಾಹಿನ್ ಈ ಬಗ್ಗೆ ಹೇಳಿಕೆ ನೀಡಿದ್ದು, ಪಂಜ್‌ಶೀರ್‌ ವಿವಾದ ಅಂತ್ಯವಾಗಿದೆ. ಅಫ್ಘಾನಿಸ್ತಾನ ಸಂಪೂರ್ಣವಾಗಿ ತಾಲಿಬಾನ್ ವಶವಾಗಿದೆ. ಅಫ್ಘಾನಿಸ್ತಾನದ ಪುನರ್‌ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದ್ದಾನೆ.

ಪಂಜ್‌ಶೀರ್‌ನ ಎಲ್ಲ ಜಿಲ್ಲೆಗಳನ್ನು ವಶಕ್ಕೆ ಪಡೆದಿದ್ದೇವೆ. ಯಾರ ವಿರುದ್ಧವೂ ಆಫ್ಘನ್ ಭೂಮಿ ಬಳಕೆಗೆ ಅವಕಾಶವಿಲ್ಲ. ಅಫ್ಘಾನಿಸ್ತಾನವನ್ನು ಮರಳಿ ಕಟ್ಟುವ ಕಡೆ ನಮ್ಮ ಗಮನ ಇರಲಿದೆ ಎಂದು ತಾಲಿಬಾನ್ ಸಂಘಟನೆ ವಕ್ತಾರ ಸುಹೈಲ್ ಶಾಹಿನ್ ಹೇಳಿಕೆ ನೀಡಿದ್ದಾನೆ. ಆ ಮೂಲಕ ತಾಲಿಬಾನಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದ ಪಂಜ್​ಶೀರ್​ ಪ್ರಾಂತ್ಯ ಕೂಡಾ ತೆಕ್ಕೆಗೆ ಸಿಲುಕಿರುವುದಾಗಿ ತಿಳಿಸಿದ್ದಾನೆ.

ಆದರೆ, ಇದಕ್ಕೆ ತಿರುಗೇಟು ನೀಡಿರುವ ರೆಸಿಸ್ಟೆನ್ಸ್ ಫ್ರಂಟ್‌, ಪಂಜ್‌ಶೀರ್‌ ಕಣಿವೆ ಮೇಲೆ ಇನ್ನೂ ನಮ್ಮ ಹಿಡಿತವಿದೆ. ತಾಲಿಬಾನ್ ಕೇವಲ ಪಂಜ್‌ಶೀರ್‌ ರಸ್ತೆಯನ್ನು ವಶಕ್ಕೆ ಪಡೆದಿದೆ. ಪಂಜ್​ಶೀರ್ ಪ್ರಾಂತ್ಯ ಅವರ ಹಿಡಿತಕ್ಕೆ ಸಿಲುಕಿಲ್ಲ ಎಂದು ಸ್ಪಷ್ಟನೆ ನೀಡಿದೆ. ಕೆಲ ದಿನಗಳ ಹಿಂದೆಯೂ ತಾಲಿಬಾನ್​ ಪಂಜ್​ಶೀರ್​ ಬಗ್ಗೆ ಮಾತನಾಡಿದ್ದಾಗ ಅಲ್ಲಿನ ನಾಯಕರು ಇದೇ ರೀತಿ ತಿರುಗೇಟು ನೀಡಿ ನಾವು ತಾಲಿಬಾನ್​ಗಳ ಬೆದರಿಕೆಗೆ ಜಗ್ಗುವುದಿಲ್ಲ ಎಂದಿದ್ದರು.

ಅಮರುಲ್ಲಾ ಸಾಲೇಹ್ ಹೇಳಿದ್ದೇನು? ತಮ್ಮನ್ನು ತಾವು ಅಫ್ಘಾನಿಸ್ತಾನದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿರುವ, ಸದ್ಯ ಪಂಜ್‌ಶೀರ್‌​ ಪ್ರಾಂತ್ಯದ ಹೋರಾಟಗಾರರೊಂದಿಗೆ ಸೇರಿರುವ ಅಮರುಲ್ಲಾ ಸಾಲೇಹ್, ಕಾಬೂಲ್​ ಹೇಗೆ ತಾಲಿಬಾನ್​ ಉಗ್ರರ ಕೈವಶವಾಯಿತು, ಅಂಥ ಕಷ್ಟಕರದ ಸಂದರ್ಭದಲ್ಲಿ ಅಫ್ಘಾನಿಸ್ತಾನದ ನಾಯಕತ್ವ ಜನರನ್ನು ಹೇಗೆ ಕೈಬಿಟ್ಟಿತು ಎಂಬ ಬಗ್ಗೆ ಮಾಧ್ಯಮಕ್ಕೆ ವಿವರಿಸಿದ್ದಾರೆ. 48 ವರ್ಷದ ಅವರು, ತಾವು ತಾಲಿಬಾನಿಗಳಿಗೆ ಹೆದರುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ​

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸ ಶುರುವಾಗುತ್ತಿದ್ದಂತೆ ದೇಶದ ಪ್ರಮುಖ ನಾಯಕರೆಲ್ಲ ದೇಶ ತೊರೆದು ಹೋಗಿದ್ದಾರೆ. ಇಲ್ಲಿನ ಜನರಿಗೆ ಅವರ ಅಗತ್ಯ ಇತ್ತು. ಆ ಸಮಯದಲ್ಲೇ ಅವರನ್ನು ಬಿಟ್ಟು ಹೋಗಿದ್ದಾರೆ. ಹೀಗೆ ದೇಶ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿದ್ದಾಗ ದೇಶದಿಂದ ಪಲಾಯನ ಮಾಡಿದವರು ಈ ಮಣ್ಣಿಗೆ ದ್ರೋಹ ಬಗೆದಿದ್ದಾರೆ ಎಂದು ಭಾವಿಸುತ್ತೇನೆ ಎಂದು ಸಾಲೇಹ್​ ಹೇಳಿದ್ದಾಗಿ ಯುಕೆ ಪತ್ರಿಕೆ ಡೇಲಿ ಮೇಲ್​ ವರದಿ ಮಾಡಿದೆ. ಹಾಗೇ, ಕಳೆದ ತಿಂಗಳು ಒಂದೊಂದೇ ಪ್ರಾಂತ್ಯಗಳನ್ನು ವಶಪಡಿಸಿಕೊಂಡು, ಕಾಬೂಲ್​ಗೆ ಕಾಲಿಟ್ಟ ತಾಲಿಬಾನಿಗಳನ್ನು ಅಫ್ಘಾನಿಸ್ತಾನದ ಆಡಳಿತ ಎದುರಿಸುವುದು ಬಿಟ್ಟು, ಪಲಾಯನ ಮಾಡಿದ್ದನ್ನು ಕೂಡ ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ತಾಲಿಬಾನ್ ಆಡಳಿತಕ್ಕೆ ವಿಶ್ವಸಂಸ್ಥೆ ಅಭಯ: ಅಫ್ಘಾನಿಸ್ತಾನದಲ್ಲಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಮಾರ್ಟಿನ್ ಗ್ರಿಫಿತ್ಸ್​-ಮುಲ್ಲಾ ಬಾರದಾರ್ ಭೇಟಿ

‘ನಾನು ತಾಲಿಬಾನಿಗಳಿಗೆ ಶರಣಾಗುವುದಿಲ್ಲ..ಅಂಥ ಪರಿಸ್ಥಿತಿ ಬಂದರೆ ನನ್ನ ತಲೆಗೆ ಎರಡು ಬಾರಿ ಗುಂಡು ಹೊಡಿ

(Panjshir in our control says Taliban but Resistance front deny and slams back)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ