ಭಾರತದೊಂದಿಗೆ ಸಂಬಂಧ ಬೆಳೆಸುವ ಇಂಗಿತ ವ್ಯಕ್ತಪಡಿಸಿದ ತಾಲಿಬಾನ್​; ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಹೇಳಿಕೆ

ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಈ ಮೊದಲು ಭಾರತದ ಡೆಹ್ರಾಡೂನ್​ನಲ್ಲಿ ಇಂಡಿಯನ್ ಮಿಲಿಟರಿ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದ ಎನ್ನುವುದು ಅತ್ಯಂತ ಗಮನಾರ್ಹ ವಿಚಾರವಾಗಿದೆ. ತರಬೇತಿ ಬಳಿಕ ಅಫ್ಘಾನಿಸ್ತಾನಕ್ಕೆ ಹೋಗಿದ್ದ ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಅಫ್ಘನ್ ಮಿಲಿಟರಿ ಸೇರಿಕೊಳ್ಳುವ ಬದಲು ತಾಲಿಬಾನ್ ಕಡೆಗೆ ಒಲವು ವ್ಯಕ್ತಪಡಿಸಿ ಆ ಸಂಘಟನೆಗೆ ಸೇರ್ಪಡೆಯಾಗಿದ್ದಾನೆ.

ಭಾರತದೊಂದಿಗೆ ಸಂಬಂಧ ಬೆಳೆಸುವ ಇಂಗಿತ ವ್ಯಕ್ತಪಡಿಸಿದ ತಾಲಿಬಾನ್​; ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಹೇಳಿಕೆ
ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ
Follow us
TV9 Web
| Updated By: Skanda

Updated on:Aug 29, 2021 | 9:36 AM

ಅಫ್ಘಾನಿಸ್ತಾನದಲ್ಲಿ ಪ್ರಜಾಪ್ರಭುತ್ವ ಸರ್ಕಾರವನ್ನು ಹತೋಟಿಗೆ ತೆಗೆದುಕೊಂಡು ತಮ್ಮದೇ ಸಾಮ್ರಾಜ್ಯ ಕಟ್ಟಿ ಆಳ್ವಿಕೆ ನಡೆಸಲು ಮುಂದಾಗಿರುವ ತಾಲಿಬಾನ್​ ಇದೀಗ ಭಾರತದೊಂದಿಗೆ ಸಂಬಂಧ ಬೆಳೆಸುವ ಇಂಗಿತ ವ್ಯಕ್ತಪಡಿಸಿದೆ. ತಾಲಿಬಾನ್ ನಾಯಕ ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಈ ಕುರಿತು ಹೇಳಿಕೆ ನೀಡಿದ್ದು, ಅಫ್ಘಾನಿಸ್ತಾನದ ತಾಲಿಬಾನ್​ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಲು ಬಯಸುತ್ತದೆ ಎಂದು ಹೇಳಿಕೊಂಡಿದ್ದಾನೆ.

ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಈ ಮೊದಲು ಭಾರತದ ಡೆಹ್ರಾಡೂನ್​ನಲ್ಲಿ ಇಂಡಿಯನ್ ಮಿಲಿಟರಿ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದ ಎನ್ನುವುದು ಅತ್ಯಂತ ಗಮನಾರ್ಹ ವಿಚಾರವಾಗಿದೆ. ತರಬೇತಿ ಬಳಿಕ ಅಫ್ಘಾನಿಸ್ತಾನಕ್ಕೆ ಹೋಗಿದ್ದ ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಅಫ್ಘನ್ ಮಿಲಿಟರಿ ಸೇರಿಕೊಳ್ಳುವ ಬದಲು ತಾಲಿಬಾನ್ ಕಡೆಗೆ ಒಲವು ವ್ಯಕ್ತಪಡಿಸಿ ಆ ಸಂಘಟನೆಗೆ ಸೇರ್ಪಡೆಯಾಗಿದ್ದಾನೆ. ಈಗ ಅಫ್ಘಾನಿಸ್ತಾನದ ಬಹುಭಾಗವನ್ನು ತಾಲಿಬಾನ್ ವಶಪಡಿಸಿಕೊಳ್ಳುತ್ತಿರುವ ಹೊತ್ತಿನಲ್ಲೇ, ಅಫ್ಘಾನಿಸ್ತಾನದ ತಾಲಿಬಾನ್ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಲು ಬಯಸುತ್ತದೆ ಎಂದು ಹೇಳಿದ್ದಾನೆ.

ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನದಲ್ಲಿರುವ ಕುಖ್ಯಾತ ಭಯೋತ್ಪಾದಕ, ಜೈಷ್-ಎ-ಮೊಹಮದ್ ಉಗ್ರಗಾಮಿ ಸಂಘಟನೆಯ ನಾಯಕ ಮಸೂದ್ ಅಜರ್ ಅಫ್ಘಾನಿಸ್ತಾನದ ತಾಲಿಬಾನ್ ನಾಯಕರನ್ನು ಕಂದಹಾರ್ ನಗರದಲ್ಲಿ ಭೇಟಿಯಾಗಿ, ಕಾಶ್ಮೀರದ ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲ ಕೋರಿದ್ದಾನೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೆ ಜಾಲತಾಣ ವರದಿ ಮಾಡಿತ್ತು.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಲ್ಲಾ ಅಬ್ದುಲ್ ಘನಿ ಬಾರದಾರ್ ಸೇರಿದಂತೆ ಹಲವು ಪ್ರಮುಖರನ್ನು ಮಜೂದ್ ಅಜರ್ ಭೇಟಿಯಾಗಿದ್ದಾನೆ ಎನ್ನಲಾಗಿದೆ. ಮುಂಬೈ ಮೇಲೆ ಭಯೋತ್ಪಾದಕರ ದಾಳಿ (26/11) ಸೇರಿದಂತೆ ಹಲವು ಭಯೋತ್ಪಾದನಾ ಚಟುವಟಿಕೆಗಳಲ್ಲಿ ಮಸೂದ್ ಅಜರ್​ ಆರೋಪಿಯಾಗಿದ್ದಾನೆ.

ತಾಲಿಬಾನ್ ಉಗ್ರರು ಕಾಬೂಲ್ ವಶಪಡಿಸಿಕೊಳ್ಳುವ ಒಂದು ದಿನ ಮೊದಲಷ್ಟೇ ತಾಲಿಬಾನ್ ಉಗ್ರರನ್ನು ಮಜೂದ್ ಅಜರ್ ಶ್ಲಾಘಿಸಿ ಲೇಖನ ಬರೆದಿದ್ದ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಗೆಲುವನ್ನು ಸಂಭ್ರಮಿಸಿದ್ದ ಜೈಷ್-ಎ-ಮೊಹಮದ್ ಉಗ್ರರು ಪರಸ್ಪರ ಅಭಿನಂದನೆಯ ಮೆಸೇಜ್​ಗಳನ್ನು ವಿನಿಮಯ ಮಾಡಿಕೊಂಡಿದ್ದರು.

ಜೈಷ್​-ಎ-ಮೊಹಮದ್ ಮತ್ತು ತಾಲಿಬಾನ್ ಸಂಘಟನೆಗಳು ಸೈದ್ಧಾಂತಿಕವಾಗಿ ಸಹಮತ ಹೊಂದಿವೆ. ಇಸ್ಲಾಮಿಕ್ ಷರಿಯಾ ಕಾನೂನು ಪದ್ಧತಿಯನ್ನು ಡಿಯೊಬಂಡಿ ಸುನ್ನಿ ವಿಚಾರಧಾರೆಗೆ ಅನುಗುಣವಾಗಿ ಎರಡೂ ಸಂಘಟನೆಗಳು ವಿಶ್ಲೇಷಿಸುತ್ತವೆ. ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸುತ್ತವೆ ಎಂದು ಸಂದೇಶ ವಿನಿಮಯ ಮಾಡಿಕೊಂಡಿದ್ದರು.

ಕಠ್ಮಂಡುವಿನಿಂದ ಲಖನೌಗೆ ಬರುತ್ತಿದ್ದ ಇಂಡಿಯನ್ ಏರ್​ಲೈನ್ಸ್​ ವಿಮಾನವನ್ನು ಅಪಹರಿಸಿ ಕಂದಹಾರ್​​ಗೆ ಕೊಂಡೊಯ್ದಿದ್ದ ಪಾಕಿಸ್ತಾನದ ಉಗ್ರಗಾಮಿಗಳು ಪ್ರಯಾಣಿಕರನ್ನು ಒತ್ತೆಯಾಗಿ ಇರಿಸಿಕೊಂಡು ಮಸೂದ್​ ಅಜರ್​ನ ಬಿಡುಗಡೆಗೆ ಒತ್ತಾಯಿಸಿದ್ದರು. ಆಗ ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸುತ್ತಿದ್ದ ತಾಲಿಬಾನಿಗಳು ವಿಮಾನದ ಸುತ್ತ ಕಾವಲುನಿಂತು ಭಯೋತ್ಪಾದಕರ ಉದ್ದೇಶ ಈಡೇರಿಸಿದ್ದರು. ಮಸೂದ್ ಅಜರ್ ಬಿಡುಗಡೆಯ ನಂತರ ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆ ಹೆಚ್ಚಾಗಿತ್ತು.

ಪಾಕಿಸ್ತಾನದ ಆಡಳಿತಾರೂಢ ಪಕ್ಷ ತೆಹ್ರೀಕ್-ಎ-ಇನ್​ಸಾಫ್ (ಪಿಟಿಐ) ನಾಯಕಿ ನೀಲೀಮ್ ಇರ್ಷಾದ್ ಶೇಖ್ ಸಹ ಜಮ್ಮು ಕಾಶ್ಮೀರದ ಹೋರಾಟಕ್ಕೆ ತಾಲಿಬಾನ್ ಬೆಂಬಲ ಸಿಗಲಿದೆ ಎಂದು ಹೇಳಿಕೊಂಡಿದ್ದರು. ಕಾಶ್ಮೀರದ ಹೋರಾಟದಲ್ಲಿ ಪಾಕಿಸ್ತಾನದ ಜೊತೆಗೆ ಇನ್ನು ಮುಂದೆ ಅಫ್ಘಾನಿಸ್ತಾನದ ನೆರವೂ ನಮಗೆ ಸಿಗಲಿ ಎಂದು ಲೈವ್ ಟಿವಿ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದರು.

(Taliban leader Mohammad Abbas Stanikzai wants to build good relationship with India)

ಇದನ್ನೂ ಓದಿ: ಶಸ್ತ್ರಾಸ್ತ್ರ, ಮದ್ದುಗುಂಡು, ಸೇನಾ ವಾಹನವನ್ನು ಹಸ್ತಾಂತರಿಸದಿದ್ದರೆ ಕಠಿಣ ಶಿಕ್ಷೆ ಕೊಡುತ್ತೇವೆ: ಆಫ್ಘನ್​ ಸೇನೆಗೆ ತಾಲಿಬಾನ್​ ಎಚ್ಚರಿಕೆ 

ತಾಲಿಬಾನ್ ನಾಯಕರನ್ನು ಭೇಟಿಯಾಗಿ ಕಾಶ್ಮೀರದ ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲ ಕೋರಿದ ಉಗ್ರ ಮಸೂದ್ ಅಜರ್

Published On - 9:24 am, Sun, 29 August 21

ಖೋ- ಖೋ ವಿಶ್ವಕಪ್: ಭಾರತ ಮಹಿಳಾ- ಪುರುಷ ತಂಡಗಳೇ ಚಾಂಪಿಯನ್ಸ್
ಖೋ- ಖೋ ವಿಶ್ವಕಪ್: ಭಾರತ ಮಹಿಳಾ- ಪುರುಷ ತಂಡಗಳೇ ಚಾಂಪಿಯನ್ಸ್
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ