AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರ ರಚನೆ ಸೇರಿದಂತೆ ಭದ್ರತೆ, ರಾಜಕೀಯ, ಸಾಮಾಜಿಕ ವಿಷಯಗಳ ಬಗ್ಗೆ ತಾಲಿಬಾನ್ ಚರ್ಚೆ

ತಾಲಿಬಾನ್ ಸುಪ್ರೀಂ ಲೀಡರ್ ಹಬೀತುಲ್ಲಾ ಅಖುಂದಾಜಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೂತನ ಸರ್ಕಾರ ರಚನೆಯ ಪ್ರಸ್ತಾವನೆಯಾಗಿದ್ದು, ಶೀಘ್ರದಲ್ಲೇ ಹೊಸದೊಂದು ಬೆಳವಣಿಗೆಗೆ ಅಫ್ಘಾನಿಸ್ತಾನ ಸಾಕ್ಷಿಯಾಗಬಹುದು ಎಂದು ಅಂದಾಜಿಸಲಾಗಿದೆ.

ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರ ರಚನೆ ಸೇರಿದಂತೆ ಭದ್ರತೆ, ರಾಜಕೀಯ, ಸಾಮಾಜಿಕ ವಿಷಯಗಳ ಬಗ್ಗೆ ತಾಲಿಬಾನ್ ಚರ್ಚೆ
ತಾಲಿಬಾನ್ ಹೋರಾಟಗಾರರು (ಸಾಂದರ್ಭಿಕ ಚಿತ್ರ)
TV9 Web
| Updated By: Skanda|

Updated on: Sep 01, 2021 | 8:22 AM

Share

ತಾಲಿಬಾನ್​ ಸುಪರ್ದಿಯಲ್ಲಿರುವ ಅಫ್ಘಾನಿಸ್ತಾನದ ಪ್ರಸಕ್ತ ಸ್ಥಿತಿಗತಿಗಳ ಬಗ್ಗೆ ತಾಲಿಬಾನ್ ನಾಯಕರು ನಡೆಸಿದ 3 ದಿನ‌ಗಳ ಸಭೆ ಮುಕ್ತಾಯಗೊಂಡಿದೆ. ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರ ರಚನೆ, ರಾಜಕೀಯ, ಭದ್ರತೆ, ಸಾಮಾಜಿಕ ವಿಷಯಗಳ ಕುರಿತು ಮಾತುಕತೆ ನಡೆದಿದ್ದು, ಆಫ್ಘನ್‌ನ ‌ಕಂದಹಾರ್‌ನಲ್ಲಿ ನಡೆದ ಸಭೆ ಕುರಿತು ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಯಿದ್ ಮಾಹಿತಿ ನೀಡಿದ್ದಾರೆ. ತಾಲಿಬಾನ್ ಸುಪ್ರೀಂ ಲೀಡರ್ ಹಬೀತುಲ್ಲಾ ಅಖುಂದಾಜಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೂತನ ಸರ್ಕಾರ ರಚನೆಯ ಪ್ರಸ್ತಾವನೆಯಾಗಿದ್ದು, ಶೀಘ್ರದಲ್ಲೇ ಹೊಸದೊಂದು ಬೆಳವಣಿಗೆಗೆ ಅಫ್ಘಾನಿಸ್ತಾನ ಸಾಕ್ಷಿಯಾಗಬಹುದು ಎಂದು ಅಂದಾಜಿಸಲಾಗಿದೆ.

ಇನ್ನೊಂದೆಡೆ ಅಫ್ಘಾನಿಸ್ತಾನದಿಂದ ತಮ್ಮ ಸೇನೆಯನ್ನು ವಾಪಾಸ್ ಕರೆಸಿಕೊಂಡಿರುವ ಅಮೆರಿಕಾ ಅಧ್ಯಕ್ಷ ಜೋ ಬೈಡನ್​, ಆಫ್ಘನ್​ಗೆ ಮತ್ತೆ ಸೇನೆ ಕಳಿಸುವ ಯೋಚನೆ ಮಾಡಿಲ್ಲ ಎಂದು ಜೋ ಬೈಡನ್ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ಹೇಳಿಕೆ ನೀಡಿದ್ದಾರೆ. ಇನ್ನೇನಿದ್ದರೂ ನಮ್ಮ ಗಮನ ನಿರಾಶ್ರಿತರಿಗೆ ನೆಲೆ ಕಲ್ಪಿಸುವ ಬಗ್ಗೆ ಇರಲಿದೆ. ಹೀಗಾಗಿ ಸೇನೆಯನ್ನು ಮತ್ತೆ ಕಳುಹಿಸುವ ಚಿಂತನೆ ಇಲ್ಲ ಎಂದು ತಿಳಿಸಿದ್ದಾರೆ.

ಅಫ್ಘಾನಿಸ್ತಾನದಿಂದ ಸೇನೆ ಹಿಂತೆಗೆದುಕೊಂಡ ಬಗ್ಗೆ ಜೋ ಬೈಡನ್ ಕೂಡಾ ಸಮರ್ಥನೆ ಮಾಡಿಕೊಂಡಿದ್ದು, ಸೋಮವಾರ ಏರ್ ಲಿಪ್ಟ್ ಮುಗಿಯುವ ಮುನ್ನವೇ 5,500 ಅಮೆರಿಕನ್ನರು ಹೊರಬಂದಿದ್ದಾರೆ. ಉಳಿದ ಅಮೆರಿಕನ್ನರು ವಾಪಾಸ್ ಬರಲು ಬಯಸಿದರೆ ಸ್ಥಳಾಂತರಿಸುವ ವ್ಯವಸ್ಥೆ ಮಾಡಲಾಗುವುದು. ಅಫ್ಘಾನಿಸ್ತಾನದಿಂದ ಸೇನೆ ವಾಪಸ್ ಕರೆಸಿಕೊಂಡ ತೀರ್ಮಾನ ಸರಿಯಾದ ತೀರ್ಮಾನ, ಬುದ್ದಿವಂತಿಕೆಯ ತೀರ್ಮಾನ, ಅತ್ಯುತ್ತಮ ತೀರ್ಮಾನ ಎಂದು ಬೆನ್ನು ತಟ್ಟಿಕೊಂಡಿದ್ದಾರೆ.

ಭಯೋತ್ಪಾದನೆ ವಿರುದ್ಧದ ನಮ್ಮ ಸಮರ ಅಫ್ಘಾನಿಸ್ತಾನ ಸೇರಿದಂತೆ ಇತರೆ ದೇಶಗಳಲ್ಲಿ ಮುಂದುವರಿಯಲಿದೆ. ಐಸಿಎಸ್ ಖೊರಸನಾ ಜತೆಗಿನ ಹೋರಾಟ ಇನ್ನೂ ಮುಗಿದಿಲ್ಲ. ಇದು ಅಫ್ಘಾನಿಸ್ತಾನದಲ್ಲಿ ಯುದ್ಧ ಅಂತ್ಯದ ಕಾಲ ಆಗಿತ್ತು. ಈಗ ಭವಿಷ್ಯದ ಕಡೆ ನೋಡುವ ಸಮಯ, ಭೂತಕಾಲವನ್ನಲ್ಲ. ಯಾವುದೇ ಯುದ್ದಗಳಲ್ಲಿ ಕಡಿಮೆ ರಿಸ್ಕ್, ಕಡಿಮೆ ವೆಚ್ಚ, ಕಡಿಮೆ ಗ್ರೇಡ್ ಎಂಬುದು ಇಲ್ಲ ಎಂದು ಜೋ ಬೈಡನ್​ ಅಭಿಪ್ರಾಯಪಟ್ಟಿದ್ದಾರೆ.

ಆಫ್ಘನ್‌ನಿಂದ ನಮ್ಮ ಸೇನೆ ವಾಪಸ್‌ ಕರೆಸಿಕೊಂಡಿರುವ ಹೊಣೆ ಹೊರುತ್ತೇನೆ. 2 ದಶಕಗಳಲ್ಲಿ ಆಪ್ಘನ್‌ನಲ್ಲಿ ಸಾಕಷ್ಟು ಘಟನೆಗಳು ನಡೆದಿವೆ. 1,400 ಅಮೆರಿಕಾ ಯೋಧರು ಹುತಾತ್ಮರಾಗಿದ್ದಾರೆ, 44 ಸಾವಿರಕ್ಕೂ ಹೆಚ್ಚು ಸೈನಿಕರು ಗಾಯಗೊಂಡಿದ್ದಾರೆ. ಅಫ್ಘಾನಿಸ್ತಾನಕ್ಕಾಗಿಯೇ ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ದೇವೆ. ನಾವು ಮೊದಲು ಅಮೆರಿಕಾವನ್ನು ಸುರಕ್ಷಿತವಾಗಿಡಲು ಬಯಸುತ್ತೇವೆ ಎಂದು ಹೇಳುವ ಮೂಲಕ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮೊದಲು ಅಮೆರಿಕಾವನ್ನು ಸುರಕ್ಷಿತವಾಗಿಡುತ್ತೇವೆ, ಆಫ್ಘನ್​ಗೆ ಈಗಾಗಲೇ ಕೋಟಿಗಟ್ಟಲೆ ಹಣ ಸುರಿದಾಗಿದೆ: ಜೋ ಬೈಡನ್​ 

ಅಫ್ಘಾನಿಸ್ತಾನದಲ್ಲಿ ಶಾಂತಿ, ಸೌಹಾರ್ದತೆ ನೆಲೆಸುವಂತೆ ಮಾಡುತ್ತೇವೆ ಅಂತ ಭರವಸೆ ನೀಡಿದ ತಾಲಿಬಾನ್ ನಾಯಕರು

(Taliban Leaders meeting over formation of new Government in Afghanistan)

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?