Kabul Airport Blast: ಅಫ್ಘಾನಿಸ್ತಾನದಲ್ಲಿ ಸರಣಿ ಸ್ಫೋಟ: ದುಷ್ಕೃತ್ಯದ ಹೊಣೆ ಹೊತ್ತ ಐಸಿಸ್​-ಕೆ ಸಂಘಟನೆ

| Updated By: Skanda

Updated on: Aug 27, 2021 | 7:42 AM

ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕೃತ್ಯದ ಹೊಣೆಯನ್ನು ಐಸಿಸ್​-ಕೆ ಸಂಘಟನೆ ಹೊತ್ತುಕೊಂಡಿದೆ. ಸಂಘಟನೆಯ ಟೆಲಿಗ್ರಾಂ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದ್ದು, ಕಾಬೂಲ್​ನಲ್ಲಿ ನಡೆದ ಎರಡೂ ಸ್ಫೋಟಗಳ ಹಿಂದೆ ನಮ್ಮದೇ ಕೈವಾಡ ಇದೆ ಎಂದು ಐಸಿಸ್​ ಕೆ ಹೇಳಿಕೊಂಡಿದೆ.

Kabul Airport Blast: ಅಫ್ಘಾನಿಸ್ತಾನದಲ್ಲಿ ಸರಣಿ ಸ್ಫೋಟ: ದುಷ್ಕೃತ್ಯದ ಹೊಣೆ ಹೊತ್ತ ಐಸಿಸ್​-ಕೆ ಸಂಘಟನೆ
ಬಾಂಬ್​ ಸ್ಫೋಟದ ದೃಶ್ಯ
Follow us on

ಅಫ್ಘಾನಿಸ್ತಾನದ ಕಾಬೂಲ್​​ನಲ್ಲಿ ಸಂಭವಿಸಿದ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕೃತ್ಯದ ಹೊಣೆಯನ್ನು ಐಸಿಸ್​-ಕೆ (ISIS K) ಸಂಘಟನೆ ಹೊತ್ತುಕೊಂಡಿದೆ. ಸಂಘಟನೆಯ ಟೆಲಿಗ್ರಾಂ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದ್ದು, ಕಾಬೂಲ್​ನಲ್ಲಿ ನಡೆದ ಎರಡೂ ಸ್ಫೋಟಗಳ (Kabul Airport Blast) ಹಿಂದೆ ನಮ್ಮದೇ ಕೈವಾಡ ಇದೆ ಎಂದು ಐಸಿಸ್​ ಕೆ ಹೇಳಿಕೊಂಡಿರುವುದಾಗಿ ವಿದೇಶಿ ಮಾಧ್ಯಮಗಳು ವರದಿ ಮಾಡಿವೆ.

ಈ ಸರಣಿ ಸ್ಫೋಟದಲ್ಲಿ ಸುಮಾರು 60 ಜನ ಬಲಿಯಾಗಿದ್ದು, 140ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಮೆರಿಕ ಸೇನೆಯ 12 ಜನ ಬಲಿಯಾಗಿದ್ದು, 15 ಜನರಿಗೆ ಗಾಯಗಳಾಗಿವೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ಅಮೆರಿಕಾ ಅಧ್ಯಕ್ಷ ಜೋ ಬೈಡನ್​, ಅಮೆರಿಕ ವಿರುದ್ಧ ದಾಳಿ ಮಾಡಿದವರು ಎಚ್ಚರಿಕೆಯಿಂದ ಇರಿ. ನಮ್ಮ ವಿರುದ್ಧ ದಾಳಿ ಮಾಡಿದವರನ್ನು ಕ್ಷಮಿಸುವ ಪ್ರಶ್ನೆ ಇಲ್ಲ. ನಮ್ಮ ವಿರುದ್ಧ ದಾಳಿ ಮಾಡಿದವರನ್ನು ಎಂದಿಗೂ ನಾವು ಮರೆಯುವುದಿಲ್ಲ. ನೀವು ಎಲ್ಲೇ ಇದ್ದರೂ ಹೆಕ್ಕಿ ಹೆಕ್ಕಿ ಕೊಲ್ಲುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್​ನಲ್ಲಿ ಎರಡು ಆತ್ಮಾಹುತಿ ಬಾಂಬ್​ಗಳು ಸ್ಫೋಟಿಸಿದ ನಂತರ ಫ್ರಾನ್ಸ್​ ಪ್ರಜೆಯೊಬ್ಬರು ವಿಮಾನ ನಿಲ್ದಾಣದಿಂದ ದೂರ ಸರಿಯುವಂತೆ ಜನರನ್ನು ಎಚ್ಚರಿಸುತ್ತಿದ್ದರು. ಈ ವೇಳೆಯೇ ಅಲ್ಲಿ ಮತ್ತೊಂದು ಬಾಂಬ್ ಸ್ಫೋಟಿಸಿದ್ದು, ಜನರು ಭಯಭೀತರಾಗಿದ್ದರು. ವಿಮಾನ ನಿಲ್ದಾಣದಲ್ಲಿ ಮತ್ತೊಂದು ಬಾಂಬ್ ಸ್ಫೋಟಿಸುವ ಸಾಧ್ಯತೆಯಿದೆ, ಎಲ್ಲರೂ ವಿಮಾನ ನಿಲ್ದಾಣದ ಗೇಟ್​ಗಳಿಂದ ದೂರ ಸರಿಯಿರಿ ಎಂದು ಫ್ರಾನ್ಸ್​ ಪ್ರಜೆ ಜನರಿಗೆ ಎಚ್ಚರಿಕೆ ನೀಡುತ್ತಿದ್ದ ಹೊತ್ತಿನಲ್ಲೇ ಮತ್ತೊಂದು ಬಾಂಬ್ ಸ್ಫೋಟಿಸಿತ್ತು.

ಕಾಬೂಲ್​​ನಲ್ಲಿ ಸಂಭವಿಸಿದ ಸರಣಿ ಸ್ಫೋಟದಲ್ಲಿ ಅಮೆರಿಕದ ಯೋಧರು ಮೃತಪಟ್ಟಿರುವ ಬಗ್ಗೆ ಅಮೆರಿಕದ ರಕ್ಷಣಾ ಕಾರ್ಯಾಲಯ ಪೆಂಟಗನ್ ಮಾಹಿತಿ ನೀಡಿದೆ ಎಂದು ಕೆಲ ಮಾಧ್ಯಮಗಳು ಹೇಳಿಕೊಂಡಿವೆ. ಅಫ್ಘಾನಿಸ್ತಾನದ ಕಾಬೂಲ್​​ನಲ್ಲಿ ಸರಣಿ ಸ್ಫೋಟ ಪ್ರಕರಣದಲ್ಲಿ ಸುಮಾರು 120 ಜನರು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಸರಣಿ ಸ್ಫೋಟದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣವನ್ನು ಅಮೆರಿಕ ಸೇನೆ ತನ್ನ ವಶಕ್ಕೆ ಪಡೆದುಕೊಂಡಿದೆ. ರಾಜಧಾನಿ ಕಾಬೂಲ್​ನಲ್ಲಿ ತಾಲಿಬಾನ್ ಆಡಳಿತ ಕರ್ಫ್ಯೂ ಹೇರಿದೆ.

ಸರಣಿ ಸ್ಫೋಟದ ಹಿನ್ನೆಲೆಯಲ್ಲಿ ಪ್ರಮುಖ ನ್ಯಾಟೊ ದೇಶಗಳು ಉನ್ನತ ಮಟ್ಟದ ಸಭೆಗಳನ್ನು ನಡೆಸಿ ಅಫ್ಘಾನಿಸ್ತಾನದ ಭದ್ರತಾ ಸ್ಥಿತಿಗತಿ ಪರಿಶೀಲಿಸಿದ್ದಾರೆ. ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್​, ಫ್ರಾನ್ಸ್​ ಅಧ್ಯಕ್ಷ ಇಮ್ಯಾನುಯೆಲ್​ ಮಕ್ರಾನ್, ತುರ್ತು ಸಭೆ ಕರೆದ ಅಮೆರಿಕ ಅಧ್ಯಕ್ಷ ಜೋ ಬೈಡೆನ್​ ತಮ್ಮ ಇತರ ಕಾರ್ಯಕ್ರಮಗಳನ್ನು ರದ್ದುಪಡಿಸಿ ಉನ್ನತ ಮಟ್ಟದ ಸಭೆಗಳನ್ನು ನಡೆಸಿದ್ದಾರೆ.

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆ ಎರಡು ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, 13 ಜನರು ಸಾವನ್ನಪ್ಪಿದ್ದಾರೆ ಹಾಗೂ 15 ಜನರು ಗಾಯಗೊಂಡಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕದ ನಾಗರಿಕರು ಮತ್ತು ಭದ್ರತಾ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ.

ಇದನ್ನೂ ಓದಿ:
Wall Street: ಕಾಬೂಲ್ ಸ್ಫೋಟಕ್ಕೆ ಕಂಪಿಸಿದ ಅಮೆರಿಕ ಷೇರುಪೇಟೆ; ಡೊ ಜೋನ್ಸ್ ಕುಸಿತ

ಐಸಿಸ್​ ಉಗ್ರರ ದಾಳಿ ಬೆದರಿಕೆ ಇರುವುದನ್ನು ಸ್ಪಷ್ಟಪಡಿಸಿದ ಜೋ ಬೈಡನ್​; ಸಾವು-ನೋವಿಲ್ಲದೆ ಸ್ಥಳಾಂತರ ಸಾಧ್ಯವಿಲ್ಲ ಎಂದರೇನು ಅರ್ಥ?

(The terror group ISIS K claimed responsibility for the deadly double attack at Kabul airport on the groups Telegram account SITE monitoring)

Published On - 7:32 am, Fri, 27 August 21