AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಿಂದ ಯಾವುದೇ ದೇಶಕ್ಕೆ ಬೆದರಿಕೆಯಿಲ್ಲ: ಮೊದಲ ಸುದ್ದಿಗೋಷ್ಠಿಯಲ್ಲಿ ತಾಲಿಬಾನ್​ ಅಭಯ

ಅಫ್ಘಾನಿಸ್ತಾನದ ಜನರಿಗೆ ತಮಗೆ ಬೇಕಾದ ನಿಯಮಗಳನ್ನು ರೂಪಿಸಿಕೊಳ್ಳುವ ಹಕ್ಕು ಇದೆ. ಇತರ ದೇಶಗಳು ಈ ನಿಯಮಗಳನ್ನು ಗೌರವಿಸಬೇಕು ಎಂದು ತಾಲಿಬಾನ್ ವಕ್ತಾರರು ಹೇಳಿದ್ದಾರೆ.

ಅಫ್ಘಾನಿಸ್ತಾನದಿಂದ ಯಾವುದೇ ದೇಶಕ್ಕೆ ಬೆದರಿಕೆಯಿಲ್ಲ: ಮೊದಲ ಸುದ್ದಿಗೋಷ್ಠಿಯಲ್ಲಿ ತಾಲಿಬಾನ್​ ಅಭಯ
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ತಾಲಿಬಾನ್ ವಕ್ತಾರ ಝಬಿವುಲ್ಲಾ ಮುಜಾಹಿದ್
TV9 Web
| Edited By: |

Updated on: Aug 17, 2021 | 10:06 PM

Share

ಕಾಬೂಲ್: ಅಫ್ಘಾನಿಸ್ತಾನದಿಂದ ಯಾವುದೇ ದೇಶಕ್ಕೆ ಬೆದರಿಕೆಯಿಲ್ಲ ಎಂದು ತಾಲಿಬಾನ್ ಸ್ಪಷ್ಟಪಡಿಸಿದೆ. ದೇಶವನ್ನು ಸಂಪೂರ್ಣವಾಗಿ ತನ್ನ ಸುಪರ್ದಿಗೆ ತೆಗೆದುಕೊಂಡಿರುವ ತಾಲಿಬಾನ್ ವಕ್ತಾರ ಮಂಗಳವಾರ (ಆಗಸ್ಟ್ 17) ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ, ನಮ್ಮಿಂದ ಯಾವುದೇ ದೇಶದ ಭದ್ರತೆಗೆ ಆತಂಕ ಬೇಡ ಎಂದು ಹೇಳಿದ್ದಾರೆ.

ವಿವಿಧ ದೇಶಗಳ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ತಾಲಿಬಾನ್ ವಕ್ತಾರ ಝಬಿವುಲ್ಲಾ ಮುಜಾಹಿದ್, ಅಫ್ಘಾನಿಸ್ತಾನದಲ್ಲಿ ಶೀಘ್ರ ಇಸ್ಲಾಮಿಕ್ ಸರ್ಕಾರ ಸ್ಥಾಪಿಸಲಾಗುವುದು ಎಂದು ಘೋಷಿಸಿದರು. ನಮಗೆ ಯಾವುದೇ ಆಂತರಿಕ ಅಥವಾ ಬಾಹ್ಯ ಶತ್ರುಗಳು ಬೇಕಿಲ್ಲ. ನಾವು ಯಾರೊಬ್ಬರನ್ನೂ ದ್ವೇಷಿಸುತ್ತಿಲ್ಲ. ನಮ್ಮ ನಾಯಕರ ಆದೇಶದಂತೆ ಎಲ್ಲರನ್ನೂ ನಾವು ಕ್ಷಮಿಸಿದ್ದೇವೆ ಎಂದು ಹೇಳಿದರು.

ಈ ಹಿಂದೆ ಅಫ್ಘಾನ್ ಸರ್ಕಾರಿ ಸೇನೆ ಮತ್ತು ವಿದೇಶಿ ಭದ್ರತಾ ಪಡೆಗಳಲ್ಲಿ ಕೆಲಸ ಮಾಡುತ್ತಿದ್ದವರೂ ಸೇರಿದಂತೆ ಯಾರೊಬ್ಬರ ವಿರುದ್ಧವೂ ನಾವು ಕ್ರಮ ಜರುಗಿಸುವುದಿಲ್ಲ. ಅವರ ಮನೆಗಳನ್ನು ಯಾರೊಬ್ಬರೂ ತಪಾಸಣೆಗೆ ಒಳಪಡಿಸುವುದಿಲ್ಲ ಎಂದು ಧೈರ್ಯ ತುಂಬಿದರು.

ಅಫ್ಘಾನಿಸ್ತಾನದ ಜನರಿಗೆ ತಮಗೆ ಬೇಕಾದ ನಿಯಮಗಳನ್ನು ರೂಪಿಸಿಕೊಳ್ಳುವ ಹಕ್ಕು ಇದೆ. ಇತರ ದೇಶಗಳು ಈ ನಿಯಮಗಳನ್ನು ಗೌರವಿಸಬೇಕು ಎಂದು ಅವರು ಹೇಳಿದರು. ಮಹಿಳೆಯರ ವಿರುದ್ಧ ಅಸಮಾನತೆಗೆ ಅವಕಾಶ ಕೊಡುವುದಿಲ್ಲ. ಮಹಿಳೆಯರಿಗೆ ಇಸ್ಲಾಮ್ ನೀಡುವ ಎಲ್ಲ ಹಕ್ಕುಗಳನ್ನೂ ಖಾತ್ರಿಯಾಗಿ ಕೊಡುತ್ತೇವೆ. ಆರೋಗ್ಯ ಮತ್ತು ಇತರ ಕ್ಷೇತ್ರಗಳಲ್ಲಿ ಮಹಿಳೆಯರು ಈ ಹಿಂದಿನಂತೆಯೇ ಕೆಲಸ ಮುಂದುವರಿಸಬಹುದು ಎಂದು ತಿಳಿಸಿದರು.

ಮಾಧ್ಯಮಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡುತ್ತೇವೆ. ಆದರೆ ರಾಷ್ಟ್ರೀಯ ಮೌಲ್ಯಗಳು ಮತ್ತು ಜನರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಪತ್ರಕರ್ತರು ನಡೆದುಕೊಳ್ಳಬಾರದು ಎಂದು ಎಚ್ಚರಿಸಿದರು. ಅಮೆರಿಕ ಮತ್ತು ಇತರ ದೇಶಗಳು ತಮ್ಮ ರಾಜತಾಂತ್ರಿಕ ಸಿಬ್ಬಂದಿ ಮತ್ತು ನಾಗರಿಕರನ್ನು ಅಫ್ಘಾನಿಸ್ತಾನದಿಂದ ಸ್ಥಳಾಂತರ ಮಾಡಿದ ನಂತರ ಈ ಸುದ್ದಿಗೋಷ್ಠಿ ನಡೆದಿದೆ.

(Afghanistan Taliban Spokesperson Says No Threat Will Be Posed To Any Country From Afghanistan)

ಇದನ್ನೂ ಓದಿ: ಅಮೆರಿಕವೆಂಬ ವಿದೇಶಿ ಶಕ್ತಿಯನ್ನು ಓಡಿಸಿದ ತಾಲಿಬಾನಿಗಳದ್ದು ನಿಜವಾದ ದೇಶಭಕ್ತಿ; ಸುಧೀಂದ್ರ ಕುಲಕರ್ಣಿ

ಇದನ್ನೂ ಓದಿ: Impact on India: ತಾಲಿಬಾನ್ ವಶಕ್ಕೆ ಅಫ್ಘಾನಿಸ್ತಾನ, ಭಾರತದ ಭದ್ರತೆಗೆ ಹಲವು ಆತಂಕ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ