Afghanistan: ಕಾಬೂಲ್​ನಿಂದ ಅಮೆರಿಕಕ್ಕೆ ಹೋಗುತ್ತಿದ್ದ ವಿಮಾನದಿಂದ ಕೆಳಗೆ ಬಿದ್ದು ಇಬ್ಬರ ದುರ್ಮರಣ

ವಿಮಾನದ ಟೈರ್​ ಸಮೀಪದ ಹಿಡಿಕೆಗೆ ಕಟ್ಟಿಕೊಂಡಿದ್ದ ಈ ಪ್ರಯಾಣಿಕರು ವಿಮಾನ ಟೇಕಾಫ್ ಆದ ನಿಮಿಷಗಳ ಬಳಿಕ ಕೆಳಗೆ ಬಿದ್ದರು. ಈ ವಿಮಾನವು ಕಾಬೂಲ್‌ನಿಂದ ಅಮೆರಿಕಕ್ಕೆ ತೆರಳುತ್ತಿತ್ತು.

Afghanistan: ಕಾಬೂಲ್​ನಿಂದ ಅಮೆರಿಕಕ್ಕೆ ಹೋಗುತ್ತಿದ್ದ ವಿಮಾನದಿಂದ ಕೆಳಗೆ ಬಿದ್ದು ಇಬ್ಬರ ದುರ್ಮರಣ
ವಿಮಾನದಿಂದ ಕೆಳಗೆ ಬಿದ್ದ ಇಬ್ಬರು ಪ್ರಯಾಣಿಕರು
Edited By:

Updated on: Aug 16, 2021 | 3:22 PM

ಕಾಬೂಲ್: ಟೇಕಾಫ್ ಆಗಿದ್ದ ವಿಮಾನದಿಂದ ಕೆಳಗೆ ಬಿದ್ದ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಸೋಮವಾರ ನಡೆದಿದೆ. ವಿಮಾನದ ಟೈರ್​ ಸಮೀಪದ ಹಿಡಿಕೆಗೆ ಕಟ್ಟಿಕೊಂಡಿದ್ದ ಈ ಪ್ರಯಾಣಿಕರು ವಿಮಾನ ಟೇಕಾಫ್ ಆದ ನಿಮಿಷಗಳ ಬಳಿಕ ಕೆಳಗೆ ಬಿದ್ದರು. ಈ ವಿಮಾನವು ಕಾಬೂಲ್‌ನಿಂದ ಅಮೆರಿಕಕ್ಕೆ ತೆರಳುತ್ತಿತ್ತು.

ಇರಾನ್​ನ ಸುದ್ದಿಸಂಸ್ಥೆ ತೆಹ್ರಾನ್ ಟೈಮ್ಸ್​ ಮೊದಲ ಬಾರಿಗೆ ಈ ವಿಡಿಯೊ ಟ್ವೀಟ್ ಮಾಡಿತ್ತು. ಕಾಬೂಲ್​ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಇವರಿಬ್ಬರೂ ಕೆಳಗೆ ಬಿದ್ದಿದ್ದಾರೆ.

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ ತಾಲೀಬಾನ್ ಉಗ್ರರ ವಶಕ್ಕೆ ಬರುತ್ತಿದ್ದಂತೆ ಅಲ್ಲಿನ ಜನರಲ್ಲಿ ಆತಂಕ ಶುರುವಾಗಿದೆ. ಸಾವಿರಾರು ಜನರು ದೇಶಬಿಟ್ಟು ಹೊರಗೆ ಹೋಗುವ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ವಿಮಾನ ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಾಗಿದ್ದು, ನೂಕಾಟ-ತಳ್ಳಾಟ ಸಾಮಾನ್ಯ ಎನಿಸಿದೆ. ಜನರನ್ನು ನಿಯಂತ್ರಿಸಲು ಅಮೆರಿಕ ಸೇನಾಪಡೆಗಳು ಗಾಳಿಯಲ್ಲಿ ಗುಂಡು ಹಾರಿಸಿವೆ.

ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಗುಂಡು ಹಾರಾಟದ ವೇಳೆ ಈವರೆಗೆ ಐವರು ಮೃತಪಟ್ಟಿದ್ದಾರೆ. ವಿಮಾನ ಹತ್ತಲು ಏಕಾಏಕಿ ನೂರಾರು ಜನರು ಮುನ್ನುಗ್ಗಿ ಬಂದಾಗ ಪರಿಸ್ಥಿತಿ ಹದಗೆಟ್ಟು, ಗುಂಡು ಹಾರಾಟ ನಡೆಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Embed code

(Afghanistan Tragedy in Kabul airport people fall to death from aircraft travelling to America)

ಇದನ್ನೂ ಓದಿ: Afghanistan Crisis: ತಾಲಿಬಾನ್ ವಶದಲ್ಲಿ ಅಫ್ಘಾನಿಸ್ತಾನ; ಕಾಬೂಲ್ ವಿಮಾನ ನಿಲ್ದಾಣದಲ್ಲಿ 5 ಜನರ ಹತ್ಯೆ

ಇದನ್ನೂ ಓದಿ: ಮಹಿಳೆಯರಿಗೆ ಸ್ವಾತಂತ್ರ್ಯ ಇರುತ್ತೆ ಎನ್ನುತ್ತಿದೆ ತಾಲಿಬಾನ್; ನಂಬುತ್ತಿಲ್ಲ ಅಫ್ಗಾನಿಸ್ತಾನದ ಸ್ತ್ರೀಯರು, ಅಮೆರಿಕ ಬಗ್ಗೆ ಮಡುಗಟ್ಟಿದೆ ಅಕ್ರೋಶ

Published On - 3:18 pm, Mon, 16 August 21