Afghanistan Earthquakes: ಅಫ್ಘಾನಿಸ್ತಾನದ ಸರಣಿ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 2,400ಕ್ಕೆ ಏರಿಕೆ

ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಸರಣಿ ಭೂಕಂಪ(Earthquake)ಗಳಿಂದ ಸಾವನ್ನಪ್ಪಿದ್ದವರ ಸಂಖ್ಯೆ ಸೋಮವಾರ 2,400ಕ್ಕೆ ಏರಿಕೆಯಾಗಿದೆ ಎಂದು ವಿಪತ್ತು ನಿರ್ವಹಣಾ ಸಚಿವಾಲಯದ ವಕ್ತಾರ ಜನನ್ ಸೈಕ್ ತಿಳಿಸಿದ್ದಾರೆ. ಹೆರಾತ್‌ನ ಜಿಂದಾ ಜನ್ ಜಿಲ್ಲೆಯ 13 ಹಳ್ಳಿಗಳಲ್ಲಿ ವಾಸಿಸುತ್ತಿದ್ದವರು ಹೆಚ್ಚಿನ ಮಂದಿ ಭೂಕಂಪಕ್ಕೆ ಬಲಿಯಾಗಿದ್ದಾರೆ. 1,320 ಮನೆಗಳು ನಾಶವಾಗಿವೆ ಎಂದು ಹೇಳಿದರು. 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ, ಶನಿವಾರದಂದು ಪಶ್ಚಿಮ ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಇದರ ನಂತರ, 6.3, 5.9 ಮತ್ತು 5.5 ರ ತೀವ್ರತೆಯ ಮೂರು ಭೂಕಂಪಗಳು ಸಹ ಸಂಭವಿಸಿತ್ತು.

Afghanistan Earthquakes: ಅಫ್ಘಾನಿಸ್ತಾನದ ಸರಣಿ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 2,400ಕ್ಕೆ ಏರಿಕೆ
ಭೂಕಂಪ
Image Credit source: Jagaran

Updated on: Oct 09, 2023 | 10:23 AM

ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಸರಣಿ ಭೂಕಂಪ(Earthquake)ಗಳಿಂದ ಸಾವನ್ನಪ್ಪಿದ್ದವರ ಸಂಖ್ಯೆ ಸೋಮವಾರ 2,400ಕ್ಕೆ ಏರಿಕೆಯಾಗಿದೆ ಎಂದು ವಿಪತ್ತು ನಿರ್ವಹಣಾ ಸಚಿವಾಲಯದ ವಕ್ತಾರ ಜನನ್ ಸೈಕ್ ತಿಳಿಸಿದ್ದಾರೆ. ಹೆರಾತ್‌ನ ಜಿಂದಾ ಜನ್ ಜಿಲ್ಲೆಯ 13 ಹಳ್ಳಿಗಳಲ್ಲಿ ವಾಸಿಸುತ್ತಿದ್ದವರು ಹೆಚ್ಚಿನ ಮಂದಿ ಭೂಕಂಪಕ್ಕೆ ಬಲಿಯಾಗಿದ್ದಾರೆ. 1,320 ಮನೆಗಳು ನಾಶವಾಗಿವೆ ಎಂದು ಹೇಳಿದರು. 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ, ಶನಿವಾರದಂದು ಪಶ್ಚಿಮ ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಇದರ ನಂತರ, 6.3, 5.9 ಮತ್ತು 5.5 ರ ತೀವ್ರತೆಯ ಮೂರು ಭೂಕಂಪಗಳು ಸಹ ಸಂಭವಿಸಿತ್ತು.

ಮಾಹಿತಿ ಪ್ರಕಾರ, ಹೆರಾತ್​ನಲ್ಲಿ ಸಂಭವಿಸಿದ ಭೂಕಂಪದಿಂದ ಸಾವನ್ನಪ್ಪಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಸುಮಾರು 6 ಗ್ರಾಮಗಳು ನಾಶವಾಗಿವೆ, ನೂರಾರು ನಾಗರಿಕರು ಅವಶೇಷಗಳಡಿ ಸಮಾಧಿಯಾಗಿದ್ದಾರೆ. ಹೆರಾತ್‌ನ ಭೂಕಂಪ ಪೀಡಿತ ಪ್ರದೇಶಗಳಿಗೆ ಆದಷ್ಟು ಬೇಗ ತಲುಪುವಂತೆ ಸ್ಥಳೀಯ ಸಂಸ್ಥೆಗಳಿಗೆ ತಾಲಿಬಾನ್ ಮನವಿ ಮಾಡಿದೆ.

ಸಹಾಯ ಸಂಸ್ಥೆಗಳು ಗಾಯಾಳುಗಳನ್ನು ಆದಷ್ಟು ಬೇಗ ಆಸ್ಪತ್ರೆಗಳಿಗೆ ಕರೆದೊಯ್ಯಬೇಕು ಮತ್ತು ಭೂಕಂಪದಿಂದಾಗಿ ನಿರಾಶ್ರಿತರಾದವರಿಗೆ ತಂಗಲು ಸ್ಥಳಗಳನ್ನು ಒದಗಿಸಬೇಕು ಎಂದು ತಾಲಿಬಾನ್ ಹೇಳಿದೆ. ಭೂಕಂಪನದ ಪರಿಣಾಮ ಜನರು ಮನೆಯಿಂದ ಹೊರಬಂದಿದ್ದಾರೆ. ಭೂಕಂಪದಿಂದಾಗಿ ಜನರು ಭಯಭೀತರಾಗಿದ್ದಾರೆ. ಈ ಕಾರಣದಿಂದ ಎಲ್ಲಾ ಮನೆಗಳು ಮತ್ತು ಅಂಗಡಿಗಳು ಖಾಲಿ ಬಿದ್ದಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು 12 ಆಂಬ್ಯುಲೆನ್ಸ್‌ಗಳನ್ನು ಕಳುಹಿಸಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಈ ಭೂಕಂಪದಿಂದಾಗಿ ದೂರವಾಣಿ ಸಂಪರ್ಕಗಳು ಸ್ಥಗಿತಗೊಂಡಿವೆ. ಸಾಮಾಜಿಕ ಮಾಧ್ಯಮದಲ್ಲಿ ಚಿತ್ರಗಳು ಕಾಣಿಸಿಕೊಂಡಿದ್ದು, ಜನರು ತಮ್ಮ ಮನೆಗಳ ಹೊರಗೆ ಬೀದಿಗಳಲ್ಲಿ ಕುಳಿತಿದ್ದಾರೆ. ಈ ಭೂಕಂಪದಲ್ಲಿ ಮೃತಪಟ್ಟವರಿಗೆ ತಾಲಿಬಾನ್ ಸಂತಾಪ ವ್ಯಕ್ತಪಡಿಸಿದೆ. ಕಳೆದ ಎರಡು ದಶಕಗಳಲ್ಲಿ ಸಂಭವಿಸಿದ ಪ್ರಬಲ ಭೂಕಂಪ ಇದಾಗಿದೆ.

ಮತ್ತಷ್ಟು ಓದಿ: ಸರಣಿ ಭೂಕಂಪಗಳಿಗೆ ನಲುಗಿದ ಪಶ್ಚಿಮ ಅಫ್ಘಾನಿಸ್ತಾನ, 320 ಮಂದಿ ಸಾವು

ಕಳೆದ ವರ್ಷದ ಆರಂಭದಲ್ಲಿ ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನದ ಗಡಿಯಲ್ಲಿ ಭೂಕಂಪ ಸಂಭವಿಸಿತ್ತು. ಆಗ 1000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಈ ಭೂಕಂಪದ ಕೇಂದ್ರಬಿಂದು ಸ್ಪೆರಾ ಜಿಲ್ಲೆಯಲ್ಲಿತ್ತು. ಭೂಕಂಪದಿಂದಾಗಿ ನೂರಾರು ಮನೆಗಳು ನೆಲಸಮವಾಗಿದ್ದು, 1500 ಮಂದಿ ಗಾಯಗೊಂಡಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us