AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೀನ್ಯಾದ ವಸತಿ ಶಾಲೆಯಲ್ಲಿ ಅಗ್ನಿ ಅವಘಡ, 17 ಮಕ್ಕಳು ಸಾವು, 14 ಮಂದಿಗೆ ಗಂಭೀರ ಗಾಯ

ಕೀನ್ಯಾದ ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 17 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಹಿಲ್‌ಸೈಡ್ ಎಂದರಶಾ ಪ್ರಾಥಮಿಕ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಕೀನ್ಯಾದ ವಸತಿ ಶಾಲೆಯಲ್ಲಿ ಅಗ್ನಿ ಅವಘಡ, 17 ಮಕ್ಕಳು ಸಾವು, 14 ಮಂದಿಗೆ ಗಂಭೀರ ಗಾಯ
ಅಗ್ನಿ ಅವಘಡ
ನಯನಾ ರಾಜೀವ್
|

Updated on: Sep 06, 2024 | 12:07 PM

Share

ಕೀನ್ಯಾದ ವಸತಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 17 ಮಕ್ಕಳು ಸಾವನ್ನಪ್ಪಿದ್ದು, 14 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಕುರಿತು ವರದಿಯಾಗಿದೆ. ಹಿಲ್‌ಸೈಡ್ ಎಂದರಶಾ ಪ್ರಾಥಮಿಕ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ನಾವು ಕಾರಣವನ್ನು ತನಿಖೆ ಮಾಡುತ್ತಿದ್ದೇವೆ ಮತ್ತು ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. 2017 ರಲ್ಲಿ, ಇದೇ ರೀತಿಯ ದುರಂತವು ನೈರೋಬಿಯಲ್ಲಿ 10 ವಿದ್ಯಾರ್ಥಿಗಳ ಜೀವವನ್ನು ಬಲಿ ತೆಗೆದುಕೊಂಡಿತು.

ಇತ್ತೀಚಿನ ಘಟನೆಯು ದೇಶಾದ್ಯಂತ ಬೋರ್ಡಿಂಗ್ ಶಾಲೆಗಳಲ್ಲಿ ಸುರಕ್ಷತಾ ಮಾನದಂಡಗಳ ಚಿಂತೆ ಮೂಡಿದೆ. ಕೀನ್ಯಾ ರೆಡ್‌ಕ್ರಾಸ್ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೀಡಿತ ಕುಟುಂಬಗಳಿಗೆ ಮಾನಸಿಕ ಸಾಮಾಜಿಕ ಬೆಂಬಲ ಸೇವೆಗಳನ್ನು ಒದಗಿಸುತ್ತಿದೆ ಮತ್ತು ಶಾಲೆಯಲ್ಲಿ ಟ್ರೇಸಿಂಗ್ ಡೆಸ್ಕ್ ಅನ್ನು ಸ್ಥಾಪಿಸಿದೆ ಎಂದು ಬಿಬಿಸಿ ತಿಳಿಸಿದೆ.

ಮತ್ತಷ್ಟು ಓದಿ: Kuwait Fire: ಕುವೈತ್​ನ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ಅವಘಡ, ನಾಲ್ವರು ಭಾರತೀಯರು ಸೇರಿ 35 ಜನರ ಸಜೀವ ದಹನ

ನೈರೋಬಿಯ ಆಗ್ನೇಯ ಭಾಗದಲ್ಲಿರುವ ಮಚಾಕೋಸ್ ಕೌಂಟಿಯಲ್ಲಿ 20 ವರ್ಷಗಳ ಹಿಂದೆ ನಡೆದ ಅತ್ಯಂತ ಭೀಕರ ಕೀನ್ಯಾದ ಶಾಲಾ ಅಗ್ನಿ ಅವಘಡದಲ್ಲಿ ಕನಿಷ್ಠ 67 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಸರ್ಕಾರದ ಪ್ರಕಾರ 2015 ರಿಂದ 2016 ರವರೆಗೆ ಸುಮಾರು 350 ಕೀನ್ಯಾದ ಶಾಲೆಗಳು ಬೆಂಕಿಗೆ ಆಹುತಿಯಾಗಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!