ಕೀನ್ಯಾದ ವಸತಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 17 ಮಕ್ಕಳು ಸಾವನ್ನಪ್ಪಿದ್ದು, 14 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಕುರಿತು ವರದಿಯಾಗಿದೆ. ಹಿಲ್‌ಸೈಡ್ ಎಂದರಶಾ ಪ್ರಾಥಮಿಕ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ನಾವು ಕಾರಣವನ್ನು ತನಿಖೆ ಮಾಡುತ್ತಿದ್ದೇವೆ ಮತ್ತು ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. 2017 ರಲ್ಲಿ, ಇದೇ ರೀತಿಯ ದುರಂತವು ನೈರೋಬಿಯಲ್ಲಿ 10 ವಿದ್ಯಾರ್ಥಿಗಳ ಜೀವವನ್ನು ಬಲಿ ತೆಗೆದುಕೊಂಡಿತು.
ಇತ್ತೀಚಿನ ಘಟನೆಯು ದೇಶಾದ್ಯಂತ ಬೋರ್ಡಿಂಗ್ ಶಾಲೆಗಳಲ್ಲಿ ಸುರಕ್ಷತಾ ಮಾನದಂಡಗಳ ಚಿಂತೆ ಮೂಡಿದೆ.
ಕೀನ್ಯಾ ರೆಡ್‌ಕ್ರಾಸ್ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೀಡಿತ ಕುಟುಂಬಗಳಿಗೆ ಮಾನಸಿಕ ಸಾಮಾಜಿಕ ಬೆಂಬಲ ಸೇವೆಗಳನ್ನು ಒದಗಿಸುತ್ತಿದೆ ಮತ್ತು ಶಾಲೆಯಲ್ಲಿ ಟ್ರೇಸಿಂಗ್ ಡೆಸ್ಕ್ ಅನ್ನು ಸ್ಥಾಪಿಸಿದೆ ಎಂದು ಬಿಬಿಸಿ ತಿಳಿಸಿದೆ.
ಮತ್ತಷ್ಟು ಓದಿ: Kuwait Fire: ಕುವೈತ್ನ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ಅವಘಡ, ನಾಲ್ವರು ಭಾರತೀಯರು ಸೇರಿ 35 ಜನರ ಸಜೀವ ದಹನ
ನೈರೋಬಿಯ ಆಗ್ನೇಯ ಭಾಗದಲ್ಲಿರುವ ಮಚಾಕೋಸ್ ಕೌಂಟಿಯಲ್ಲಿ 20 ವರ್ಷಗಳ ಹಿಂದೆ ನಡೆದ ಅತ್ಯಂತ ಭೀಕರ ಕೀನ್ಯಾದ ಶಾಲಾ ಅಗ್ನಿ ಅವಘಡದಲ್ಲಿ ಕನಿಷ್ಠ 67 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಸರ್ಕಾರದ ಪ್ರಕಾರ 2015 ರಿಂದ 2016 ರವರೆಗೆ ಸುಮಾರು 350 ಕೀನ್ಯಾದ ಶಾಲೆಗಳು ಬೆಂಕಿಗೆ ಆಹುತಿಯಾಗಿವೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ