ಮತ್ತೆ ಕ್ಯಾತೆ ತೆಗೆದ ಚೀನಾ; ಲಡಾಖ್​ನ ಪ್ಯಾಂಗೊಂಗ್ ಸರೋವರದ ಮೇಲೆ ಚೀನಾ ಹೆಲಿಕಾಪ್ಟರ್​ ಹಾರಾಟದ ವಿಡಿಯೋ ವೈರಲ್

Ladakh News: ವೈರಲ್ ಆಗಿರುವ ವಿಡಿಯೋದಲ್ಲಿ ಚೀನಾ ಸೇನೆಯ ಹೆಲಿಕಾಪ್ಟರ್‌ಗಳು ಪ್ಯಾಂಗೋಂಗ್ ಸರೋವರದ ಮೇಲೆ ಹಾರುತ್ತಿರುವುದನ್ನು ಕಾಣಬಹುದು.

ಮತ್ತೆ ಕ್ಯಾತೆ ತೆಗೆದ ಚೀನಾ; ಲಡಾಖ್​ನ ಪ್ಯಾಂಗೊಂಗ್ ಸರೋವರದ ಮೇಲೆ ಚೀನಾ ಹೆಲಿಕಾಪ್ಟರ್​ ಹಾರಾಟದ ವಿಡಿಯೋ ವೈರಲ್
ಪ್ಯಾಂಗೊಂಗ್ ಲೇಕ್ ಮೇಲೆ ಚೀನಾ ಮಿಲಿಟರಿ ಅಭ್ಯಾಸImage Credit source: Aaj Tak
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 19, 2022 | 11:06 AM

ಲಡಾಖ್: ಭಾರತ ಮತ್ತು ಚೀನಾದ (India- China Border Dispute) ಗಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಪ್ರಯತ್ನಗಳು ನಡೆಯುತ್ತಲೇ ಇದೆ. ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ನಡೆಯುತ್ತಿರುವ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಭಾರತ ಮತ್ತು ಚೀನಾ ನಡುವೆ ಸಭೆಗಳು ನಡೆಯುತ್ತಿವೆ. ಮತ್ತೊಂದೆಡೆ, ಚೀನಾವು ನೀಚ ಕೃತ್ಯಗಳನ್ನು ಮಾಡುವುದನ್ನು ಇನ್ನೂ ನಿಲ್ಲಿಸಿಲ್ಲ. ಭಾರತದೊಂದಿಗೆ ಚೀನಾ 16ನೇ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ಮುಕ್ತಾಯವಾದ ಬೆನ್ನಲ್ಲೇ ಚೀನಾ ಸೇನೆಯ PLA ಪಡೆಗಳು ಪ್ಯಾಂಗೋಂಗ್ ಸರೋವರದ (Pangong Lake) ಮೇಲೆ ಮಿಲಿಟರಿ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ಚೀನಾದ ಮಾಧ್ಯಮಗಳು ಪ್ರಸಾರ ಮಾಡಿವೆ.

ಲಡಾಖ್​​ನ ಪ್ಯಾಂಗಾಂಗ್ ಸರೋವರದ ಬಳಿ ಚೀನಾ ಸೇನೆ ಸಮರಾಭ್ಯಾಸ ನಡೆಸಿದೆ. ಚೀನಾದ ಈ ಕ್ರಮದ ವಿಡಿಯೋ ಟ್ವಿಟ್ಟರ್​​ನಲ್ಲಿ ವೈರಲ್ ಆಗಿದೆ. ಭಾರತದೊಂದಿಗೆ ಸೇನಾ ಕಮಾಂಡರ್ ಮಟ್ಟದ ಮಾತುಕತೆ ನಡೆಸಿದ ಬೆನ್ನಲ್ಲೇ ಚೀನಾ ಸೇನೆಯ ಈ ವಿಡಿಯೋ ಮುನ್ನೆಲೆಗೆ ಬಂದಿದೆ. ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸೈನಿಕರು ಪ್ಯಾಂಗೋಂಗ್ ಸರೋವರದ ಬಳಿ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.

ವೈರಲ್ ಆಗಿರುವ ಈ ವಿಡಿಯೋದಲ್ಲಿ ಚೀನಾ ಸೇನೆಯ ಹೆಲಿಕಾಪ್ಟರ್‌ಗಳು ಪ್ಯಾಂಗೋಂಗ್ ಸರೋವರದ ಮೇಲೆ ಹಾರುತ್ತಿರುವುದನ್ನು ಕಾಣಬಹುದು. ಚೀನಾದ ಮಿಲಿಟರಿ ಕಾರ್ಯಾಚರಣೆಯ ಈ ವಿಡಿಯೋ ಇತ್ತೀಚಿನದ್ದು ಎಂದು ಹೇಳಲಾಗುತ್ತಿದೆ. ಇತ್ತೀಚೆಗಷ್ಟೇ ಚೀನಾ ಸೇನೆಯು ಪ್ಯಾಂಗೊಂಗ್ ಸರೋವರದ ಬಳಿ ಸೇನಾ ಸಮರಾಭ್ಯಾಸ ನಡೆಸಿದ್ದು, ಉಭಯ ದೇಶಗಳ ನಡುವಿನ ಕಮಾಂಡರ್ ಮಟ್ಟದ ಮಾತುಕತೆ ಬಳಿಕ ಅದರ ವಿಡಿಯೋ ಇದೀಗ ಬಿಡುಗಡೆಯಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಭಾರತ-ಚೀನಾ ಸೇನಾ ಕಮಾಂಡರ್​ಗಳ ನಡುವೆ 16ನೇ ಸುತ್ತಿನ ಮಾತುಕತೆ

ಗಮನಾರ್ಹವೆಂದರೆ, ಲಡಾಖ್‌ನ ಪ್ಯಾಂಗೊಂಗ್ ಲೇಕ್ ಪ್ರದೇಶದಲ್ಲಿ ಭಾರತ ಮತ್ತು ಚೀನಾ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಉಭಯ ದೇಶಗಳ ನಡುವೆ ಮಾತುಕತೆಯೂ ನಡೆಯುತ್ತಿದೆ. ಎರಡು ದಿನಗಳ ಹಿಂದೆ ಮೊಲ್ಡೊದಲ್ಲಿ ಉಭಯ ದೇಶಗಳ ನಡುವೆ ಕಮಾಂಡರ್ ಮಟ್ಟದ ಮಾತುಕತೆ ನಡೆದಿತ್ತು. ಉಭಯ ದೇಶಗಳ ಸೇನೆಗಳ ನಡುವೆ ಇದುವರೆಗೆ 16 ಸುತ್ತಿನ ಕಮಾಂಡರ್ ಮಟ್ಟದ ಮಾತುಕತೆ ನಡೆದಿದೆ.

Published On - 11:02 am, Tue, 19 July 22

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್