ಶೀಘ್ರವೇ ಭಾರತದಲ್ಲಿ ಸ್ಥಾಪನೆಯಾಗಲಿದೆ ಟೆಸ್ಲಾ ಕಾರು ಉತ್ಪಾದನಾ ಘಟಕ: ಎಲಾನ್ ಮಸ್ಕ್​

ಟೆಸ್ಲಾ ಸಿಇಒ ಎಲಾನ್ ಮಸ್ಕ್​(Elon Musk) ಅವರು ಮುಂದಿನ ದಿನಗಳಲ್ಲಿ ಕಂಪನಿಯು ಭಾರತದಲ್ಲಿ ಹೂಡಿಕೆ ಮಾಡಲಿದೆ ಎಂದು ಬಹಿರಂಗಪಡಿಸಿದ್ದಾರೆ.

ಶೀಘ್ರವೇ ಭಾರತದಲ್ಲಿ ಸ್ಥಾಪನೆಯಾಗಲಿದೆ ಟೆಸ್ಲಾ ಕಾರು ಉತ್ಪಾದನಾ ಘಟಕ: ಎಲಾನ್ ಮಸ್ಕ್​
ನರೇಂದ್ರ ಮೋದಿ-ಎಲಾನ್​ ಮಸ್ಕ್​
Follow us
ನಯನಾ ರಾಜೀವ್
|

Updated on:Jun 21, 2023 | 9:32 AM

ಟೆಸ್ಲಾ ಸಿಇಒ ಎಲಾನ್ ಮಸ್ಕ್​(Elon Musk) ಅವರು ಮುಂದಿನ ದಿನಗಳಲ್ಲಿ ಕಂಪನಿಯು ಭಾರತದಲ್ಲಿ ಹೂಡಿಕೆ ಮಾಡಲಿದೆ ಎಂದು ಬಹಿರಂಗಪಡಿಸಿದ್ದಾರೆ. ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ತನ್ನ ಭವಿಷ್ಯದ ಯೋಜನೆಗಳನ್ನು ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದಾರೆ. ನ್ಯೂಯಾರ್ಕ್​ ಪ್ಯಾಲೇಸ್​ ಹೋಟೆಲ್​ನಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಬಳಿಕ ಈ ಸಂದರ್ಶನ ನಡೆದಿದೆ. ಈ ವರ್ಷದ ಅಂತ್ಯದೊಳಗೆ ಜಾಗವನ್ನು ಫೈನಲ್ ಮಾಡುವುದಾಗಿ ತಿಳಿಸಿದ್ದಾರೆ.

ಟೆಸ್ಲಾವು ಬೇರೆ ದೇಶಗಳಲ್ಲಿ ಹೂಡಿಕೆಗಳನ್ನು ಮಾಡಲು ಹಿಂಜರಿಯುತ್ತಿತ್ತು ಆದರೆ ಭಾರತದಲ್ಲಿ ತನ್ನ ಹೂಡಿಕೆ ಮಾಡಲು ಮುಂದಾಗಿರುವುದು ಉತ್ತಮ ಬೆಳವಣಿಗೆ.

ಜ್ಯಾಕ್ ಡಾರ್ಸೆ ವಿವಾದ ಹಾಗೂ ಭಾರತದಲ್ಲಿ ಟ್ವಿಟ್ಟರ್ ಕಚೇರಿಗಳನ್ನು ಮುಚ್ಚುವ ಬಗ್ಗೆ ಕೇಳಿದಾಗ ಸಾಮಾಜಿಕ ಮಾಧ್ಯಮ ವೇದಿಕೆಗಳು ಸ್ಥಳೀಯ ಸರ್ಕಾರದ ನಿಯಮಗಳನ್ನು ಅನುಸರಿಸುವುದನ್ನು ಬಿಟ್ಟು ಬೇರೆ ದಾರಿ ಇಲ್ಲ ಎಂದು ಮಸ್ಕ್​ ಹೇಳಿದ್ದಾರೆ. ನಾವು ಸ್ಥಳೀಯ ಕಾನೂನುಗಳನ್ನು ಪಾಲಿಸದಿದ್ದರೆ ಮುಚ್ಚಲ್ಪಡುತ್ತೇವೆ, ಭಾರತದಲ್ಲಿ ಟೆಸ್ಲಾ ಹೂಡಿಕೆ ಯೋಜನೆಗಳ ಬಗ್ಗೆ ಮುಂಬರುವ ವರ್ಷ ಭಾರತಕ್ಕೆ ಭೇಟಿ ನೀಡಲು ಬಯಸುವುದಾಗಿ ತಿಳಿಸಿದರು.

ಮತ್ತಷ್ಟು ಓದಿ: International Yoga Day 2023: ಯೋಗ ಜಾಗತಿಕ ಆಂದೋಲನವಾಗಿದೆ, ವಿಶ್ವ ಯೋಗ ದಿನಾಚರಣೆಗೆ ಅಮೆರಿಕದಿಂದ ಪ್ರಧಾನಿ ಮೋದಿ ವಿಡಿಯೋ ಸಂದೇಶ

ಪ್ರಧಾನಿ ಮೋದಿ ಭಾರತದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ, ಭಾರತದಲ್ಲಿ ಬಂಡವಾಳ ಹೂಡಿಕೆಗೆ ಅವಕಾಶವನ್ನು ನೀಡಿದ್ದಾರೆ. ಹೊಸ ಕಂಪನಿಗಳ ಸ್ಥಾಪನೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡಲು ಕಾತುರನಾಗಿದ್ದೇನೆ ಎಂದು ಎಲಾನ್​ ಮಸ್ಕ್​ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:32 am, Wed, 21 June 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್