ಭಾರತವು ರಷ್ಯಾ-ಉಕ್ರೇನ್ ಯುದ್ಧವನ್ನು ತಡೆಯಬಹುದು, ಮೋದಿ ಮೇಲೆ ವಿಶ್ವಾಸ ವ್ಯಕ್ತಪಡಿಸಿದ ಮೆಲೋನಿ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಂತರ ಇದೀಗ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಕೂಡ ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸಬಹುದು ಎಂದು ಹೇಳಿದ್ದಾರೆ. ಫೆಬ್ರವರಿ 2022 ರಿಂದ ರಷ್ಯಾ ಮತ್ತು ಉಕ್ರೇನ್ ಯುದ್ಧದಲ್ಲಿ ತೊಡಗಿವೆ.
ಉಕ್ರೇನ್-ರಷ್ಯಾ ಸಂಘರ್ಷವನ್ನು ಭಾರತ ಕೊನೆಗೊಳಿಸಬಹುದು ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉಕ್ರೇನ್‌ನಲ್ಲಿನ ಸಂಘರ್ಷವನ್ನು ಪರಿಹರಿಸುವಲ್ಲಿ ಭಾರತ ಮತ್ತು ಚೀನಾದಂತಹ ದೇಶಗಳು ಪ್ರಮುಖ ಪಾತ್ರ ವಹಿಸಬಹುದು ಎಂದಿದ್ದಾರೆ.
ಉತ್ತರ ಇಟಲಿಯ ಸೆರ್ನೊಬಿಯೊ ನಗರದ ಅಂಬ್ರೊಸೆಟ್ಟಿ ಫೋರಮ್‌ನಲ್ಲಿ ಶನಿವಾರ ಮೆಲೋನಿ ಈ ಹೇಳಿಕೆಯನ್ನು ನೀಡಿದ್ದಾರೆ. ಅವರು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಸಭೆ ನಡೆಸಿದರು.
ಇದಕ್ಕೂ ಮುನ್ನ, ಈ ಪ್ರದೇಶದಲ್ಲಿ ನಡೆಯುತ್ತಿರುವ ಬಿಕ್ಕಟ್ಟನ್ನು ಪರಿಹರಿಸುವಲ್ಲಿ ಭಾರತದ ಪ್ರಯತ್ನಗಳ ಬಗ್ಗೆ ರಷ್ಯಾ ಅಧ್ಯಕ್ಷ ಪುಟಿನ್ ಪ್ರತಿಕ್ರಿಯಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ರಷ್ಯಾ ಮತ್ತು ಉಕ್ರೇನ್ ಪ್ರವಾಸದ ನಂತರ ಇದೀಗ ಇಡೀ ವಿಶ್ವದ ಕಣ್ಣು ಭಾರತ ಹಾಗೂ ಪ್ರಧಾನಿ ಮೋದಿಯತ್ತ ನೆಟ್ಟಿದೆ.
ಈ ಯುದ್ಧವು ಕೊನೆಗೊಳ್ಳುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗುತ್ತಿದೆ. ನಿನ್ನೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೂಡ ಈ ಯುದ್ಧದಲ್ಲಿ ಮಧ್ಯಸ್ಥಿಕೆ ವಹಿಸುವ ದೇಶಗಳ ಬಗ್ಗೆ ಮಾತನಾಡಿದ್ದರು. ಪುಟಿನ್ ಭಾರತ ಮಾತ್ರವಲ್ಲದೆ ಚೀನಾ ಮತ್ತು ಬ್ರೆಜಿಲ್ ಕೂಡ ಮಧ್ಯಸ್ಥಿಕೆ ವಹಿಸುವಂತೆ ಕೇಳಿಕೊಂಡಿದ್ದಾರೆ.
ಮತ್ತಷ್ಟು ಓದಿ: PM Modi: ಕೈ ಮುಗಿದು ನಮಸ್ಕರಿಸಿ ಮೋದಿಯನ್ನು ಶೃಂಗಸಭೆಗೆ ಬರಮಾಡಿಕೊಂಡ ಇಟಲಿ ಪ್ರಧಾನಿ ಮೆಲೋನಿ
ಆದರೆ ಇಡೀ ಜಗತ್ತೇ ಭಾರತ ಮತ್ತು ಪ್ರಧಾನಿ ಮೋದಿಯತ್ತ ನೋಡುತ್ತಿದ್ದು ಅವರಿಂದ ಮಾತ್ರ ಈ ಯುದ್ಧವನ್ನು ನಿಲ್ಲಿಸಲು ಸಾಧ್ಯ ಎಂದು ಹೇಳುತ್ತಿದ್ದಾರೆ. ಪುಟಿನ್ ಉಕ್ರೇನ್ ಜೊತೆಗಿನ ಮಾತುಕತೆಯ ಬಗ್ಗೆ ಬಹಿರಂಗವಾಗಿ ಏನನ್ನೂ ಹೇಳಿರಲಿಲ್ಲ. ಆದರೆ ಈಗ ಉಕ್ರೇನ್ ಜೊತೆ ಮಾತುಕತೆಗೆ ಸಿದ್ಧ ಎಂದು ಪುಟಿನ್ ಹೇಳಿದ್ದಾರೆ.
ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸಲು, ಭಾರತವು ಎರಡೂ ದೇಶಗಳಿಂದ ಶಾಂತಿಗಾಗಿ ನಿರಂತರವಾಗಿ ಮನವಿ ಮಾಡುತ್ತಿದೆ. ಜಗತ್ತಿನಲ್ಲಿ ಹೆಚ್ಚುತ್ತಿರುವ ಶಕ್ತಿಯಿಂದಾಗಿ, ಭಾರತಕ್ಕೆ ಈ ಯುದ್ಧವನ್ನು ನಿಲ್ಲಿಸುವ ಸಾಮರ್ಥ್ಯವಿದೆ ಎಂದು ಎಲ್ಲರೂ ಭಾವಿಸುತ್ತಾರೆ. ರಷ್ಯಾ ಬಿಟ್ಟರೆ ಭಾರತವೂ ಅಮೆರಿಕದೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ, ಇದರಿಂದಾಗಿ ಅಮೆರಿಕ ಕೂಡ ಭಾರತದ ಪ್ರಸ್ತಾವನೆಗೆ ಪ್ರಾಮುಖ್ಯತೆ ನೀಡಲಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ