ಸರಣಿ ರಾಜೀನಾಮೆಗಳಿಂದ ಕಂಗೆಟ್ಟ ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ರಾಜೀನಾಮೆ ಸಲ್ಲಿಸುವ ಸಾಧ್ಯತೆ!

ಬ್ರಿಟನ್ನಿನ ಹಣಕಾಸು ಸಚಿವ ರಿಷಿ ಸುನಾಕ್ ಮತ್ತು ಮತ್ತು ಆರೋಗ್ಯ ಖಾತೆ ಕಾರ್ಯದರ್ಶಿ ಸಾಜಿದ್ ಜಾವಿದ್ ಅವರು ಮಂಗಳವಾರ ರಾತ್ರಿ ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸುವ ಮೂಲಕ ರಾಜೀನಾಮೆಗಳ ಪರ್ವಕ್ಕೆ ನಾಂದಿ ಹಾಡಿದರು.

ಸರಣಿ ರಾಜೀನಾಮೆಗಳಿಂದ ಕಂಗೆಟ್ಟ ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ರಾಜೀನಾಮೆ ಸಲ್ಲಿಸುವ ಸಾಧ್ಯತೆ!
ಬೊರಿಸ್ ಜಾನ್ಸನ್
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Jul 07, 2022 | 2:58 PM

ಲಂಡನ್: ತಮ್ಮ ಸಂಪುಟದದ ನಾಲ್ವರು ಸಚಿವರು ಸೇರಿದಂತೆ ಸುಮಾರು 40 ಜನ ಸಚಿವರು ಮತ್ತು ಆಪ್ತರು ಸರಣಿಯೋಪಾದಿಯಲ್ಲಿ ರಾಜೀನಾಮೆ (resignation) ಸಲ್ಲಿಸಿದ ಬಳಿಕ ಪ್ರಧಾನ ಮಂತ್ರಿ ಸ್ಥಾನದಿಂದ ಕೆಳಗಿಳಿಯಲಾರೆ ಎಂದು ಹಟ ಸಾಧಿಸುತ್ತಿದ್ದ ಬ್ರಿಟಿಷ್ ಪ್ರಧಾನ ಮಂತ್ರಿ (British PM) ಬೊರಿಸ್ ಜಾನ್ಸನ್ (Boris Johnson) ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುವ ನಿರೀಕ್ಷೆ ಇದೆಯೆಂದು ಎಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಕಳೆದ ರಾತ್ರಿಯಿಂದ ಬ್ರಿಟನ್ ನಲ್ಲಿ ರಾಜೀನಾಮೆಗಳ ಮಹಾಪೂರವೇ ಹರಿದು ಬರುತ್ತಿದೆ.

ಬ್ರಿಟನ್ನಿನ ಹಣಕಾಸು ಸಚಿವ ರಿಷಿ ಸುನಾಕ್ ಮತ್ತು ಮತ್ತು ಆರೋಗ್ಯ ಖಾತೆ ಕಾರ್ಯದರ್ಶಿ ಸಾಜಿದ್ ಜಾವಿದ್ ಅವರು ಮಂಗಳವಾರ ರಾತ್ರಿ ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸುವ ಮೂಲಕ ರಾಜೀನಾಮೆಗಳ ಪರ್ವಕ್ಕೆ ನಾಂದಿ ಹಾಡಿದರು. ಗುರುವಾರಂದು ಯುಕೆಯ ಶಿಕ್ಷಣ ಸಚಿವೆ ಮಿಶೆಲ್ ಡೊನಿಲಾನ್ ರಾಜೀನಾಮೆ ಸಲ್ಲಿಸಿದ್ದಾರೆ.

ಜಾನ್ಸನ್ ರಾಜೀನಾಮೆ ಸಲ್ಲಿಸುವುದು ಹೆಚ್ಚು ಕಡಿಮೆ ಖಚಿತವಾಗಿದೆಯಾದರೂ ಕನ್ಸರ್ವೇಟಿವ್ ಪಕ್ಷ ತನ್ನ ಹೊಸ ನಾಯಕನನ್ನು ಆಯ್ಕೆ ಮಾಡುವವರೆಗೆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆಯೋ ಅಥವಾ ಹೊರಬಂದು ಬಿಡುತ್ತಾರೋ ಅನ್ನೋದು ಖಚಿತವಾಗಿಲ್ಲ ಎಂದು ಎಪಿ ವರದಿ ಮಾಡಿದೆ.

ಇದನ್ನೂ ಓದಿ:   ಇಂಡೋ-ಪೆಸಿಫಿಕ್ ಪ್ರದೇಶವನ್ನು ನಿರಂಕುಶಾಧಿಕಾರದ ಬೆದರಿಕೆಗಳಿಂದ ಮುಕ್ತಗೊಳಿಸಬೇಕು: ಯುಕೆ ಪ್ರಧಾನಿ ಬೋರಿಸ್ ಜಾನ್ಸನ್

Published On - 2:50 pm, Thu, 7 July 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು