Video: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ, ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್
ದೆಹಲಿಯಿಂದ ಬಾಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಬುಧವಾರ ರಾಷ್ಟ್ರ ರಾಜಧಾನಿಗೆ ಮರಳಲು ಸೂಚಿಸಲಾಗಿದ್ದು, ವಿಮಾನ ನಿಲ್ದಾಣದ ಬಳಿ ಜ್ವಾಲಾಮುಖಿ ಸ್ಫೋಟ ಸಂಭವಿಸಿದೆ ಎಂಬ ವರದಿಗಳು ಬಂದಿವೆ, ಆದ್ದರಿಂದ ಸುರಕ್ಷತೆಯ ದೃಷ್ಠಿಯಿಂದ ವಿಮಾನವನ್ನು ಹಿಂತಿರುಗಿಸಲಾಯಿತು. ವಿಮಾನವು ದೆಹಲಿಯಲ್ಲಿ ಸುರಕ್ಷಿತವಾಗಿ ಇಳಿಯಿತು ಮತ್ತು ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು ಎಂದು ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ.ಸುರಕ್ಷತೆಯ ಹಿತದೃಷ್ಟಿಯಿಂದ ದೆಹಲಿಗೆ ಹಿಂತಿರುಗಲು ಸೂಚಿಸಲಾಯಿತು. ಬಾಲಿಗೆ ಹೋಗುವ ಡಜನ್‌ಗಟ್ಟಲೆ ವಿಮಾನಗಳು ಬುಧವಾರ ರದ್ದಾಗಿದೆ.
ಬಾಲಿ, ಜೂನ್ 18: ಪೂರ್ವ ಇಂಡೋನೇಷ್ಯಾ(Indonesia)ದಲ್ಲಿ ಮೌಂಟ್ ಲೆವೊಟೊಬಿ ಲಕಿ-ಲಕಿ ಜ್ವಾಲಾಮುಖಿ(Volcano) ಸ್ಫೋಟಗೊಂಡಿದೆ. ಈ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಸೇರಿದಂತೆ ಹಲವು ವಿಮಾನಗಳ ಕಾರ್ಯಾಚರಣೆ ಸ್ಥಗಿತಗೊಂಡಿವೆ. ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ದೆಹಲಿಗೆ ಮರಳಿದೆ. ಈ ಸ್ಫೋಟದಿಂದಾಗಿ, ಏರ್ ಇಂಡಿಯಾ, ಸಿಂಗಾಪುರ್ ಏರ್ಲೈನ್ಸ್, ಏರ್ ನ್ಯೂಜಿಲೆಂಡ್, ಜೆಟ್‌ಸ್ಟಾರ್, ವರ್ಜಿನ್ ಆಸ್ಟ್ರೇಲಿಯಾ ಮತ್ತು ಚೀನಾದ ಜುನ್ಯಾವೊ ಏರ್‌ಲೈನ್ಸ್ ಸೇರಿದಂತೆ ಬಾಲಿಗೆ ಅನೇಕ ಅಂತಾರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ಜ್ವಾಲಾಮುಖಿಯಿಂದ ಉಂಟಾಗಿರುವ ದಟ್ಟ ಹೊಗೆಯು 10 ಕಿ.ಮೀ ಎತ್ತರವನ್ನು ತಲುಪಿದ್ದು, ಇದು ವಾಯು ಸಂಚಾರದ ಮೇಲೆ ತೀವ್ರ ಪರಿಣಾಮವನ್ನು ಬೀರಿದೆ. ಏರ್ ಇಂಡಿಯಾ ವಿಮಾನ(AI2145 ) ಇಂದು ಬೆಳಗ್ಗೆ ದೆಹಲಿಯಿಂದ ಬಾಲಿಗೆ ಹೊರಟಿತ್ತು. ಆದರೆ ಜ್ವಾಲಾಮುಖಿಯಿಂದಾಗಿ ದೆಹಲಿಗೆ ವಾಪಸ್ ಹೋಗುವಂತೆ ಸೂಚನೆ ನೀಡಲಾಯಿತು.
ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಮಾನಯಾನ ಸಂಸ್ಥೆ ವಿಷಾದ ವ್ಯಕ್ತಪಡಿಸಿದೆ. ತೊಂದರೆಗೊಳಗಾದ ಪ್ರಯಾಣಿಕರಿಗೆ ಸ್ಥಳಾವಕಾಶ ಕಲ್ಪಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ. ಏರ್ ಇಂಡಿಯಾ ಪ್ರಯಾಣಿಕರಿಗೆ ಹೋಟೆಲ್ ವಸತಿ ಸೌಲಭ್ಯವನ್ನು ಒದಗಿಸಿದೆ ಜೊತೆಗೆ ಎರಡು ಆಯ್ಕೆಗಳನ್ನು ನೀಡಿದೆ.
ಮತ್ತಷ್ಟು ಓದಿ: ಬೋಯಿಂಗ್ ವಿಮಾನಗಳ ಪರಿಶೀಲನೆ ಬೆನ್ನಲ್ಲೇ 5 ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು
ಒಂದೊಮ್ಮೆ ಪ್ರಯಾಣಿಕರ ಟಿಕೆಟ್ನ ಸಂಪೂರ್ಣ ಹಣವನ್ನು ಹಿಂದಿರುಗಿಸುವುದಾಗಿ ಅಥವಾ ಸ್ವಲ್ಪ ಸಮಯದ ಬಳಿಕ ಬೇರೆ ವಿಮಾನದ ವ್ಯವಸ್ಥೆ ಮಾಡುವುದಾಗಿ ಹೇಳಿದೆ. ಆಯ್ಕೆ ನಿಮಗೆ ಬಿಟ್ಟಿದ್ದು ಎಂದು ಹೇಳಿದೆ.
ಮೌಂಟ್ ಲೆವೊಟೊಬಿ ಲಕಿ-ಲಕಿ ಪೂರ್ವ ನುಸಾ ತೆಂಗಾರ ಪ್ರಾಂತ್ಯದ ಫ್ಲೋರ್ಸ್ ದ್ವೀಪದಲ್ಲಿ 1,584 ಮೀಟರ್ ಎತ್ತರದ ಅವಳಿ ಶಿಖರಗಳ ಜ್ವಾಲಾಮುಖಿ ಸ್ಫೋಟಗೊಂಡಿದೆ.ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ನವೆಂಬರ್‌ನಲ್ಲಿ ಮೌಂಟ್ ಲೆವೊಟೊಬಿ ಲಕಿ ಲಕಿ ಸ್ಫೋಟದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದರು ಮತ್ತು ಡಜನ್ಗಟ್ಟಲೆ ಜನರು ಗಾಯಗೊಂಡಿದ್ದರು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




