Air India: ಅಮೆರಿಕಕ್ಕೆ ಮತ್ತೊಂದು ವಿಮಾನದಲ್ಲಿ ಹೊರಟ ರಷ್ಯಾದಲ್ಲಿ ಸಿಲುಕಿದ್ದ ಪ್ರಯಾಣಿಕರು

ರಷ್ಯಾದಲ್ಲಿ ಸಿಲುಕಿದ್ದ ಪ್ರಯಾಣಿಕರು ವಿಶೇಷ ವಿಮಾನದ ಮೂಲಕ ಅಮೆರಿಕಕ್ಕೆ ತೆರಳುತ್ತಿದ್ದಾರೆ. ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ರಷ್ಯಾದ ಮಗದನ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು.

Air India: ಅಮೆರಿಕಕ್ಕೆ ಮತ್ತೊಂದು ವಿಮಾನದಲ್ಲಿ ಹೊರಟ ರಷ್ಯಾದಲ್ಲಿ ಸಿಲುಕಿದ್ದ ಪ್ರಯಾಣಿಕರು
ಏರ್ ಇಂಡಿಯಾImage Credit source: Aljazeera
Follow us
ನಯನಾ ರಾಜೀವ್
|

Updated on: Jun 08, 2023 | 8:16 AM

ರಷ್ಯಾದಲ್ಲಿ ಸಿಲುಕಿದ್ದ ಪ್ರಯಾಣಿಕರು ವಿಶೇಷ ವಿಮಾನದ ಮೂಲಕ ಅಮೆರಿಕಕ್ಕೆ ತೆರಳುತ್ತಿದ್ದಾರೆ. ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ರಷ್ಯಾದ ಮಗದನ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ಇಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ 216 ಪ್ರಯಾಣಿಕರು ಮತ್ತು 16 ಸಿಬ್ಬಂದಿಯಿದ್ದ ವಿಮಾನವನ್ನು ರಷ್ಯಾದ ಮಗದನ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು ಎಂದು ಟಾಟಾ ಗ್ರೂಪ್ ಒಡೆತನದ ಖಾಸಗಿ ವಾಹಕ ಹೇಳಿಕೆಯಲ್ಲಿ ತಿಳಿಸಿದೆ. ಏರ್ ಇಂಡಿಯಾ ಪ್ರಯಾಣಿಕರನ್ನು ಸ್ಯಾನ್ ಫ್ರಾನ್ಸಿಸ್ಕೋಗೆ ಕರೆದೊಯ್ಯಲು ಮತ್ತೊಂದು ವಿಮಾನವು ಮುಂಬೈನಿಂದ ಮಧ್ಯಾಹ್ನ 1 ಗಂಟೆಗೆ ರಷ್ಯಾದ ಮಗದನ್‌ಗೆ ಬಂದಿದೆ.

ರಷ್ಯಾದ ರಾಜಧಾನಿ ಮಾಸ್ಕೋದಿಂದ 10,000 ಕಿಮೀ ದೂರದಲ್ಲಿರುವ ದೂರದ ಮಗದನ್‍ನಲ್ಲಿ ಸಿಲುಕಿರುವ ಹಲವಾರು ಏರ್ ಇಂಡಿಯಾ ಪ್ರಯಾಣಿಕರನ್ನು ವಸತಿ ನಿಲಯಗಳಲ್ಲಿ ಇರಿಸಲಾಗಿದೆ. ಏಕೆಂದರೆ ಆ ಪ್ರದೇಶದ ಹೋಟೆಲ್‍ಗಳು ವಿಮಾನದಲ್ಲಿ ಎಲ್ಲರಿಗೂ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತಿಲ್ಲ.

ಮತ್ತಷ್ಟು ಓದಿ: Air India: ಸ್ಯಾನ್ ಫ್ರಾನ್ಸಿಸ್ಕೋಗೆ ಬದಲು ರಷ್ಯಾದಲ್ಲಿ ಇಳಿದ ವಿಮಾನ, ಭಾರತೀಯ ಪ್ರಯಾಣಿಕರಿಗಾಗಿ ವಿಶೇಷ ವಿಮಾನ ವ್ಯವಸ್ಥೆ

ವಿಮಾನವನ್ನು ತಪಾಸಣೆಗೆ ಒಳಪಡಿಸಲಾಗಿದೆ. ಪ್ರಯಾಣಿಕರಿಗೆ ಅಗತ್ಯ ಸೌಲಭ್ಯ ಒದಗಿಸಲಾಗಿದೆ. ರಷ್ಯಾದ ಮಗದನ್ ವಿಮಾನ ನಿಲ್ದಾಣದಿಂದ ತನ್ನ ಪ್ರಯಾಣಿಕರನ್ನು ಕರೆದೊಯ್ಯಲು ಪರ್ಯಾಯ ವಿಮಾನ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲಿಯವರೆಗೆ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಮಗದನ್‌ನ ಸ್ಥಳೀಯ ಹೋಟೆಲ್‌ಗಳಲ್ಲಿ ವಸತಿ ಕಲ್ಪಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕ, ಯುನೈಟೆಡ್ ಸ್ಟೇಟ್ಸ್ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸ್ಟೇಟ್ ಡಿಪಾರ್ಟ್‌ಮೆಂಟ್ ಉಪ ವಕ್ತಾರ ವೇದಾಂತ್ ಪಟೇಲ್, ಯುಎಸ್‌ಗೆ ತೆರಳುವ ವಿಮಾನವು ರಷ್ಯಾದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಆ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು