ಇಸ್ರೇಲ್-ಹಮಾಸ್ ಸಂಘರ್ಷ: ನವೆಂಬರ್​ 30ರವರೆಗೆ ಟೆಲ್ ಅವೀವ್​ಗೆ ವಿಮಾನ ಸೇವೆಯನ್ನು ಸ್ಥಗಿತಗೊಳಿಸಿದ ಏರ್​ ಇಂಡಿಯಾ

ಇಸ್ರೇಲ್ ಮತ್ತು ಉಗ್ರಗಾಮಿ ಗುಂಪು ಹಮಾಸ್ ನಡುವಿನ ಉದ್ವಿಗ್ನತೆಯ ಹೆಚ್ಚಿದ್ದು ಏರ್ ಇಂಡಿಯಾ ನವೆಂಬರ್ 30 ರವರೆಗೆ ಟೆಲ್ ಅವೀವ್‌ಗೆ ವಿಮಾನಗಳ ಸೇವೆಯನ್ನು ಸ್ಥಗಿತಗೊಳಿಸಿದೆ. ಅಕ್ಟೋಬರ್ 7 ರಿಂದ ಟೆಲ್ ಅವೀವ್‌ಗೆ ಮತ್ತು ಅಲ್ಲಿಂದ ಯಾವುದೇ ಭಾಗಕ್ಕೂ ವಿಮಾನ ಹಾರಾಟ ಇಲ್ಲ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ.

ಇಸ್ರೇಲ್-ಹಮಾಸ್ ಸಂಘರ್ಷ: ನವೆಂಬರ್​ 30ರವರೆಗೆ ಟೆಲ್ ಅವೀವ್​ಗೆ ವಿಮಾನ ಸೇವೆಯನ್ನು ಸ್ಥಗಿತಗೊಳಿಸಿದ ಏರ್​ ಇಂಡಿಯಾ
ಏರ್ ಇಂಡಿಯಾImage Credit source: Times Of India
Follow us
ನಯನಾ ರಾಜೀವ್
|

Updated on: Nov 06, 2023 | 11:06 AM

ಇಸ್ರೇಲ್(Israel) ಮತ್ತು ಉಗ್ರಗಾಮಿ ಗುಂಪು ಹಮಾಸ್ ನಡುವಿನ ಉದ್ವಿಗ್ನತೆಯ ಹೆಚ್ಚಿದ್ದು ಏರ್ ಇಂಡಿಯಾ(Air India) ನವೆಂಬರ್ 30 ರವರೆಗೆ ಟೆಲ್ ಅವೀವ್‌ಗೆ ವಿಮಾನಗಳ ಸೇವೆಯನ್ನು ಸ್ಥಗಿತಗೊಳಿಸಿದೆ. ಅಕ್ಟೋಬರ್ 7 ರಿಂದ ಟೆಲ್ ಅವೀವ್‌ಗೆ ಮತ್ತು ಅಲ್ಲಿಂದ ಯಾವುದೇ ಭಾಗಕ್ಕೂ ವಿಮಾನ ಹಾರಾಟ ಇಲ್ಲ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ.

ನವೆಂಬರ್ 30 ರವರೆಗೆ ಟೆಲ್ ಅವಿವ್‌ಗೆ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಏರ್‌ಲೈನ್ ವಕ್ತಾರರು ಭಾನುವಾರ ತಿಳಿಸಿದ್ದಾರೆ. ಸಾಮಾನ್ಯವಾಗಿ, ವಿಮಾನ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಮತ್ತು ಭಾನುವಾರ ರಾಷ್ಟ್ರೀಯ ರಾಜಧಾನಿಯಿಂದ ಟೆಲ್ ಅವೀವ್‌ಗೆ ಐದು ಏರ್ ಇಂಡಿಯಾ ವಿಮಾನಗಳು ಕಾರ್ಯಾಚರಿಸುತ್ತಿವೆ.

ಕಳೆದ ತಿಂಗಳು, ಘರ್ಷಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್‌ನಿಂದ ಹಿಂತಿರುಗಲು ಇಚ್ಛಿಸುವ ಭಾರತೀಯರನ್ನು ಮರಳಿ ಕರೆತರಲು ಸರ್ಕಾರದ ಆಪರೇಷನ್ ಅಜಯ್ ಅಡಿಯಲ್ಲಿ ವಿಮಾನಯಾನವು ರಾಷ್ಟ್ರೀಯ ರಾಜಧಾನಿಯಿಂದ ಟೆಲ್ ಅವೀವ್‌ಗೆ ಕೆಲವು ಚಾರ್ಟರ್ಡ್ ವಿಮಾನಗಳನ್ನು ಕಳುಹಿಸಿತ್ತು.

ಮತ್ತಷ್ಟು ಓದಿ: ಗಾಜಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 7 ಮಂದಿ ಒತ್ತೆಯಾಳುಗಳು ಸಾವು

ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ 5 ಸಾವಿರ ರಾಕೆಟ್​ಗಳಿಂದ ದಾಳಿ ನಡೆಸಿದರು, ಘಟನೆಯಲ್ಲಿ 1,400ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಅದಾದ ಬಳಿಕ ಇಸ್ರೇಲ್ ಪ್ರತಿಯಾಗಿ ಗಾಜಾದ ಮೇಲೆ ದಾಳಿ ನಡೆಸಿದ್ದು, ಅಲ್ಲೂ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಯುದ್ಧವನ್ನು ನಾವು ಪ್ರಾರಂಭ ಮಾಡಿಲ್ಲ ಆದರೆ ನಾವೇ ಅಂತ್ಯ ಮಾಡುತ್ತೇವೆ ಎಂದು ಇಸ್ರೇಲ್ ಪಣತೊಟ್ಟಿದೆ.

ವಿಶ್ವಸಂಸ್ಥೆ ನಡೆಸುತ್ತಿದ್ದ ಶಾಲೆಯ ಇಸ್ರೇಲ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 70ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿನ ಹಮಾಸ್ ಆರೋಗ್ಯ ಸಚಿವಾಲಯವು ತಿಳಿಸಿದೆ.

ಅಲ್-ಫಖುರಾ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 15 ಮಂದಿ ಮೃತಪಟ್ಟಿದ್ದರು, ಮತ್ತು 70 ಮಂದಿ ಗಾಯಗೊಂಡಿದ್ದರು. ಇದಕ್ಕೂ ಮೊದಲು ಈ ಶಾಲೆಯ ಮೇಲೆ ನಡೆದ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದಾರೆ ಮತ್ತು 54 ಮಂದಿ ಗಾಯಗೊಂಡಿದ್ದಾರೆ ಎಂದು ಸಚಿವಾಲಯ ಹೇಳಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ