Air India Flight: ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಗೆ ವಿಮಾನ ನಿರ್ಬಂಧ

ಮದ್ಯಪಾನ ಮಾಡಿ ಏರ್ ಇಂಡಿಯಾದ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಪ್ರಯಾಣಿಕರೊಬ್ಬರು ಮಹಿಳಾ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾ ಕಠಿಣ ಕ್ರಮವನ್ನು ಕೈಗೊಂಡಿದೆ.

Air India Flight: ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಗೆ ವಿಮಾನ ನಿರ್ಬಂಧ
ಸಾಂದರ್ಭಿಕ ಚಿತ್ರ Image Credit source: google image
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jan 04, 2023 | 4:15 PM

ಮದ್ಯಪಾನ ಮಾಡಿ ಏರ್ ಇಂಡಿಯಾದ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಪ್ರಯಾಣಿಕರೊಬ್ಬರು ಮಹಿಳಾ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾ ಕಠಿಣ ಕ್ರಮವನ್ನು ಕೈಗೊಂಡಿದೆ. ಈ ಬಗ್ಗೆ ಸಾರ್ವಜನಿಕ ಆಕ್ರೋಶ ವ್ಯಕ್ತವಾದ ನಂತರ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯನ್ನು ಏರ್‌ಲೈನ್ಸ್ 30 ದಿನಗಳ ಕಾಲ ಏರ್ ಇಂಡಿಯಾದಲ್ಲಿ ಪ್ರಯಾಣಿಸುವುದನ್ನು ನಿಷೇಧಿಸಿದೆ ಎಂದು ವರದಿ ತಿಳಿಸಿದೆ. ವಿಮಾನ ಸಿಬ್ಬಂದಿಯ ಬೇಜಾಬ್ದಾರಿಯ ಬಗ್ಗೆ ತನಿಖೆ ನಡೆಸಲು ಏರ್ ಇಂಡಿಯಾ ಆಂತರಿಕ ಸಮಿತಿಯನ್ನು ರಚಿಸಿದೆ ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಏರ್ ಇಂಡಿಯಾ ಅಧಿಕಾರಗಳು ತಕ್ಷಣಕ್ಕೆ ಕ್ರಮ ಕೈಗೊಳ್ಳದೇ ದೊಡ್ಡ ತಪ್ಪು ಉಂಟಾಗಿದೆ. ಈ ಕಾರಣಕ್ಕೆ ವ್ಯವಸ್ಥೆಯ ನ್ಯೂನತೆಗಳನ್ನು ಪರಿಹರಿಸುವ ಪ್ರಯತ್ನವನ್ನು ಮಾಡುತ್ತೇವೆ ಎಂದು ಹೇಳಿದೆ.

ಈ ಬಗ್ಗೆ ತನಿಖೆ ಮಾಡುತ್ತೇವೆ ಈಗಾಗಲೇ ಈ ಘಟನೆಯಿಂದ ನೊಂದಿರುವ ಮಹಿಳಾ ಪ್ರಯಾಣಿಕರು ಮತ್ತು ಅವರ ಕುಟುಂಬದೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ. ಏರ್ ಇಂಡಿಯಾ ವಿಮಾನದಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ನಂತರ ವಿಮಾನಯಾನ ಸಂಸ್ಥೆಯ ಹಲವು ನಿರ್ಲಕ್ಷ್ಯದ ಪ್ರಕರಣಗಳು ಇತ್ತೀಚಿಗೆ ಬೆಳಕಿಗೆ ಬಂದಿದೆ.

ಇದನ್ನು ಓದಿ: Air India Flight: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಕುಡುಕ ಪ್ರಯಾಣಿಕ

ನವೆಂಬರ್ 26 ರಂದು ಏರ್ ಇಂಡಿಯಾ ಫ್ಲೈಟ್ AI 102 ನಲ್ಲಿ ವಿಮಾನವು ನ್ಯೂಯಾರ್ಕ್ JFK ವಿಮಾನ ನಿಲ್ದಾಣದಿಂದ ನವದೆಹಲಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮಹಿಳೆ, ಟಾಟಾ ಗ್ರೂಪ್ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರಿಗೆ ಪತ್ರ ಬರೆದು, ಎಐ ಕ್ಯಾಬಿನ್ ಸಿಬ್ಬಂದಿಯ ನಿರ್ಲಕ್ಷ್ಯ ಕ್ರಮದ ಬಗ್ಗೆ ಮತ್ತು ತನಗೆ ಒಂದು ಜೋಡಿ ಪೈಜಾಮಾ ಮತ್ತು ಚಪ್ಪಲಿಯನ್ನು ನೀಡಿದರು. ಇದರ ಜೊತೆಗೆ ಪ್ರಕರಣದಲ್ಲಿ ಭಾಗಿಯಾದ ವ್ಯಕ್ತಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.

ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಏರ್ ಇಂಡಿಯಾದಲ್ಲಿ 30 ದಿನಗಳವರೆಗೆ ಅಥವಾ ಆಂತರಿಕ ಸಮಿತಿಯ ನಿರ್ಧಾರದವರೆಗೆ, ಮೊದಲಿನಂತೆ ಪ್ರಯಾಣಿಸುವುದನ್ನು ನಿಷೇಧಿಸಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದರೆ, ನಿಯಂತ್ರಣ ಮಾರ್ಗಸೂಚಿಗಳ ಪ್ರಕಾರ ಅಶಿಸ್ತಿನ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:15 pm, Wed, 4 January 23

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್