AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್ ಮೇಲೆ ಹಮಾಸ್ ದಾಳಿ: ಟೆಲ್ ಅವೀವ್‌ಗೆ ಹೋಗುವ ವಿಮಾನ ರದ್ದುಗೊಳಿಸಿದ ಏರ್ ಇಂಡಿಯಾ

AI 139 ನವದೆಹಲಿಯಿಂದ ಮಧ್ಯಾಹ್ನ 3.35 ಕ್ಕೆ ಹೊರಟು 7.05 ಕ್ಕೆ ಟೆಲ್ ಅವೀವ್ ತಲುಪಲು ನಿಗದಿ ಆಗಿತ್ತು . ಹಿಂದಿರುಗುವ ವಿಮಾನ AI140 ರಾತ್ರಿ 10.10 ಕ್ಕೆ ಟೆಲ್ ಅವಿವ್‌ನಿಂದ ಹೊರಟು ಭಾನುವಾರ ಬೆಳಿಗ್ಗೆ 7 ಗಂಟೆಗೆ ನವದೆಹಲಿಯನ್ನು ತಲುಪಬೇಕಿತ್ತು. ಪ್ಯಾಲೇಸ್ಟಿನಿಯನ್ ಇಸ್ಲಾಮಿಸ್ಟ್ ಗುಂಪು ಹಮಾಸ್ ಶನಿವಾರ ಇಸ್ರೇಲ್ ಮೇಲೆ ಹಠಾತ್ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಕನಿಷ್ಠ 40 ಜನರು ಸಾವಿಗೀಡಾಗಿದ್ದಾರೆ.

ಇಸ್ರೇಲ್ ಮೇಲೆ ಹಮಾಸ್ ದಾಳಿ: ಟೆಲ್ ಅವೀವ್‌ಗೆ ಹೋಗುವ ವಿಮಾನ ರದ್ದುಗೊಳಿಸಿದ ಏರ್ ಇಂಡಿಯಾ
ಏರ್ ಇಂಡಿಯಾ
ರಶ್ಮಿ ಕಲ್ಲಕಟ್ಟ
|

Updated on:Oct 07, 2023 | 8:28 PM

Share

ದೆಹಲಿ ಅಕ್ಟೋಬರ್ 07: ಹಮಾಸ್ (Hamas) ಭಯೋತ್ಪಾದಕ ಗುಂಪು ಶನಿವಾರ ಬೆಳಿಗ್ಗೆ ಇಸ್ರೇಲ್ (Israel) ಮೇಲೆ ದಾಳಿ ಮಾಡಿದ ನಂತರ ಏರ್ ಇಂಡಿಯಾ ಅಕ್ಟೋಬರ್ 7 ರಂದು ದೆಹಲಿಯಿಂದ ಟೆಲ್ ಅವೀವ್​​ಗೆ (Tel Aviv) ಹೋಗುವ ಮತ್ತು ಅಲ್ಲಿಂದ ಬರುವ ವಿಮಾನವನ್ನು ರದ್ದುಗೊಳಿಸಿದೆ. ಅತಿಥಿಗಳು ಮತ್ತು ಸಿಬ್ಬಂದಿಯ ಹಿತಾಸಕ್ತಿ ಮತ್ತು ಸುರಕ್ಷತೆಯ ದೃಷ್ಟಿಯಿಂದ ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ. ಪ್ರಯಾಣಿಕರಿಗೆ ಅವರ ಅವಶ್ಯಕತೆಗಳಿಗೆ ಅನುಗುಣವಾಗಿ ಎಲ್ಲಾ ಬೆಂಬಲವನ್ನು ನೀಡಲಾಗುತ್ತಿದೆ ಎಂದು ಹೇಳಿಕೆ ತಿಳಿಸಿದೆ.

AI 139 ನವದೆಹಲಿಯಿಂದ ಮಧ್ಯಾಹ್ನ 3.35 ಕ್ಕೆ ಹೊರಟು 7.05 ಕ್ಕೆ ಟೆಲ್ ಅವೀವ್ ತಲುಪಲು ನಿಗದಿ ಆಗಿತ್ತು . ಹಿಂದಿರುಗುವ ವಿಮಾನ AI140 ರಾತ್ರಿ 10.10 ಕ್ಕೆ ಟೆಲ್ ಅವಿವ್‌ನಿಂದ ಹೊರಟು ಭಾನುವಾರ ಬೆಳಿಗ್ಗೆ 7 ಗಂಟೆಗೆ ನವದೆಹಲಿಯನ್ನು ತಲುಪಬೇಕಿತ್ತು. ಪ್ಯಾಲೇಸ್ಟಿನಿಯನ್ ಇಸ್ಲಾಮಿಸ್ಟ್ ಗುಂಪು ಹಮಾಸ್ ಶನಿವಾರ ಇಸ್ರೇಲ್ ಮೇಲೆ ಹಠಾತ್ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಕನಿಷ್ಠ 40 ಜನರು ಸಾವಿಗೀಡಾಗಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ. ಗಾಜಾ ಪಟ್ಟಿಯಿಂದ ಗಾಳಿ, ಭೂಮಿ ಮತ್ತು ಸಮುದ್ರದ ಮೂಲಕ ಭಯೋತ್ಪಾದಕರು ನುಸುಳಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರತೀಕಾರವಾಗಿ ಹಮಾಸ್ ವಿರುದ್ಧ ಯುದ್ಧ ಘೋಷಿಸಿತ್ತು. ಹಮಾಸ್ ಇದಕ್ಕೆ ಬೆಲೆ ತೆರಬೇಕಾಗುತ್ತದೆ.

ಇಸ್ರೇಲ್ ಯುದ್ಧಕ್ಕೆ ಭಾರತದ ಪ್ರತಿಕ್ರಿಯೆ

ಇಸ್ರೇಲ್‌ಗೆ ನೀಡಿದ ಸಂದೇಶದಲ್ಲಿ ಭಾರತ ಇಸ್ರೇಲ್‌ನೊಂದಿಗೆ ನಿಂತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಭಾರತದಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಯು ನಿಸ್ಸಂದಿಗ್ಧವಾಗಿ ಬೆಂಬಲ ನೀಡಿದ ಭಾರತ ಮತ್ತು ಪ್ರಧಾನಿ ಮೋದಿಗೆ ಧನ್ಯವಾದಗಳನ್ನು ಅರ್ಪಿಸಿದೆ. ಅಮೆರಿಕ ದಾಳಿಯನ್ನು ಖಂಡಿಸಿದೆ. ಏತನ್ಮಧ್ಯೆ, ಯುಕೆ ಪಿಎಂ ರಿಷಿ ಸುನಕ್ ಇಸ್ರೇಲ್ ತನ್ನನ್ನು ರಕ್ಷಿಸಿಕೊಳ್ಳುವ ಸಂಪೂರ್ಣ ಹಕ್ಕು ಹೊಂದಿದೆ ಎಂದು ಹೇಳಿದರು. “ಇಸ್ರೇಲ್ ವಿರುದ್ಧ ಹಮಾಸ್ ಭಯೋತ್ಪಾದಕರು ನಡೆಸುತ್ತಿರುವ ಭೀಕರ ದಾಳಿಯನ್ನು ನಾವು ನಿಸ್ಸಂದಿಗ್ಧವಾಗಿ ಖಂಡಿಸುತ್ತೇವೆ. ನಾವು ಇಸ್ರೇಲ್ ಸರ್ಕಾರ ಮತ್ತು ಜನರೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ. ಈ ದಾಳಿಯಲ್ಲಿ ಕಳೆದುಹೋದ ಇಸ್ರೇಲಿ ಜೀವಗಳಿಗೆ ನಮ್ಮ ಸಂತಾಪವನ್ನು ವ್ಯಕ್ತಪಡಿಸುತ್ತೇವೆ ಎಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಟ್ವೀಟ್ ಮಾಡಿದ್ದಾರೆ. ಭಯಾನಕ ಸುದ್ದಿ ಇಂದು ಇಸ್ರೇಲ್‌ನಿಂದ ನಮ್ಮನ್ನು ತಲುಪಿದೆ. ಗಾಜಾದಿಂದ ರಾಕೆಟ್ ಬೆಂಕಿ ಮತ್ತು ಹೆಚ್ಚುತ್ತಿರುವ ಹಿಂಸಾಚಾರವು ನಮ್ಮನ್ನು ಆಳವಾಗಿ ಬೆಚ್ಚಿಬೀಳಿಸಿದೆ. ಜರ್ಮನಿ ಈ ಹಮಾಸ್ ದಾಳಿಗಳನ್ನು ಖಂಡಿಸುತ್ತದೆ ಮತ್ತು ಇಸ್ರೇಲ್‌ನ ಪರವಾಗಿ ನಿಂತಿದೆ ಎಂದು ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ಜತೆ ದೃಢವಾಗಿ ನಿಂತಿದ್ದೇವೆ ಎಂದ ಅಮೆರಿಕ

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಎಚ್ಚರಿಕೆಯನ್ನು ನೀಡಿದ್ದು, ಜಾಗರೂಕರಾಗಿರಲು ಕೇಳಿಕೊಂಡಿದೆ. ಇಸ್ರೇಲ್‌ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳ ಸಲಹೆಯಂತೆ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ವೀಕ್ಷಿಸಲು ವಿನಂತಿಸಲಾಗಿದೆ. ದಯವಿಟ್ಟು ಜಾಗರೂಕರಾಗಿರಿ, ಅನಗತ್ಯ ಚಲನೆಯನ್ನು ತಪ್ಪಿಸಿ ಮತ್ತು ಸುರಕ್ಷತಾ ಆಶ್ರಯಗಳ ಹತ್ತಿರ ಇರಿ ಎಂದು ಸಲಹೆ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:23 pm, Sat, 7 October 23

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ