AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾಯಕಾರಿ ಮಟ್ಟಕ್ಕೆ ವಾಯುಮಾಲಿನ್ಯ; ನೇಪಾಳದಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಶೀಘ್ರವಾಗಿ ಬೆಳವಣಿಗೆ ಹೊಂದುತ್ತಿರುವ ನೇಪಾಳ ರಾಷ್ಟ್ರ ರಾಜಧಾನಿ ಕಠ್ಮಂಡುವಿನಲ್ಲಿ ವಾಯುಮಾಲಿನ್ಯ ಕೂಡ ದೀರ್ಘಕಾಲದ ಸಮಸ್ಯೆಯಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ವಾಯುಮಾಲಿನ್ಯವನ್ನು ನಿಯಂತ್ರಣಕ್ಕೆ ತರುವುದು ಸರ್ಕಾರಕ್ಕೆ ಈಗ ಸವಾಲಾಗಿ ಪರಿಣಮಿಸಿದೆ.

ಅಪಾಯಕಾರಿ ಮಟ್ಟಕ್ಕೆ ವಾಯುಮಾಲಿನ್ಯ; ನೇಪಾಳದಲ್ಲಿ ಶಾಲೆಗಳಿಗೆ ರಜೆ ಘೋಷಣೆ
ವಾಯುಮಾಲಿನ್ಯ
TV9 Web
| Edited By: |

Updated on:Apr 05, 2022 | 1:02 PM

Share

ಕಠ್ಮಂಡು: ವಾಯುಮಾಲಿನ್ಯ ಅಪಾಯಕಾರಿ ಮಟ್ಟವನ್ನು ತಲುಪಿದ ಕಾರಣ ನೇಪಾಳದಲ್ಲಿ ನಾಲ್ಕು ದಿನಗಳ ಕಾಲ ಶಾಲೆಯನ್ನು ಮುಚ್ಚಲಾಗಿದೆ. ಇದರಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ಮನೆಯಲ್ಲೇ ಉಳಿಯುವಂತಾಗಿದೆ. ಸುಮಾರು 30 ಲಕ್ಷ ಜನಸಂಖ್ಯೆ ಇರುವ ನೇಪಾಳವು ಹಿಮಾಲಯ ಪರ್ವತ ಶ್ರೇಣಿ, ಚೀನಾ ಹಾಗೂ ಭಾರತದ ನಡುವೆ ಇದೆ. ಚೀನಾ ಮತ್ತು ಭಾರತ ಕೂಡ ವಾಯುಮಾಲಿನ್ಯ ಮಟ್ಟದಲ್ಲಿ ವಿಶ್ವದಲ್ಲಿ ಮುಂಚೂಣಿಯಲ್ಲಿದೆ.

ಶೀಘ್ರವಾಗಿ ಬೆಳವಣಿಗೆ ಹೊಂದುತ್ತಿರುವ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ವಾಯುಮಾಲಿನ್ಯ ಕೂಡ ದೀರ್ಘಕಾಲದ ಸಮಸ್ಯೆಯಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ವಾಯುಮಾಲಿನ್ಯವನ್ನು ನಿಯಂತ್ರಣಕ್ಕೆ ತರುವುದು ಸರ್ಕಾರಕ್ಕೆ ಈಗ ಸವಾಲಾಗಿ ಪರಿಣಮಿಸಿದೆ.

2016ರಿಂದಲೂ ವಾಯು ಗುಣಮಟ್ಟ ಕಳಪೆಯಾಗುತ್ತಿತ್ತು. ವಾರಾಂತ್ಯದ ಬಳಿಕ ವಾಯುಮಾಲಿನ್ಯ ಅತ್ಯಂತ ಗರಿಷ್ಠ ಮಟ್ಟವನ್ನು ತಲುಪಿದೆ ಎಂದು ಸರ್ಕಾರಿ ಅಧಿಕಾರಿ ಶಂಕರ್ ಪೌಡೆಲ್ ಮಾಹಿತಿ ನೀಡಿದ್ದಾರೆ. ಈ ಪರಿಸ್ಥಿತಿಯಿಂದ ಸುಮಾರು 8 ಲಕ್ಷ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ ಎಂದು ಶಿಕ್ಷಣ ಇಲಾಖೆ ವಕ್ತಾರ ದೀಪಕ್ ಶರ್ಮಾ ಹೇಳಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಪಿಎಂ2.5 ಮಟ್ಟ ಹೆಚ್ಚಾಗಿದೆ. ಗಾಳಿಯಲ್ಲಿ ತೇಲುವ ಅತಿಸೂಕ್ಷ್ಮ ಘನ ಮತ್ತು ದ್ರವಕಣಗಳನ್ನು ಪರ್ಟಿಕ್ಯುಲೇಟ್ ಮ್ಯಾಟರ್ (ಪಿಎಂ) ಎಂದು ಕರೆಯುತ್ತಾರೆ. ಶ್ವಾಸಕೋಶದ ಆಳಕ್ಕೆ ತಲುಪಬಲ್ಲ ಈ ಕಣಗಳು ವ್ಯಾಪಕ ಹಾನಿಯುಂಟು ಮಾಡಬಲ್ಲವು. ಕಠ್ಮಂಡು ನಗರದ ಭೈಸೆಪತಿ ಪ್ರದೇಶದಲ್ಲಿ ಪ್ರತಿ ಕ್ಯೂಬಿಕ್ ಮೀಟರ್ ಪ್ರದೇಶದಲ್ಲಿ 214 ಮೈಕ್ರೊಗ್ರಾಂಗಳಷ್ಟು ಇತ್ತು. ಸರ್ಕಾರದ ನಿಯಮಗಳ ಪ್ರಕಾರ ಪ್ರತಿ ಕ್ಯೂಬಿಕ್ ಮೀಟರ್​ಗೆ 40 ಮೈಕ್ರೊಗ್ರಾಂಗಳಷ್ಟಿರಬೇಕು.

ನೇಪಾಳ ರಾಜಧಾನಿ ಕಠ್ಮಂಡುವಿನ ವಾಯು ಗುಣಮಟ್ಟ ಹದಗೆಟ್ಟಿದೆ. ಆದರೆ, ಇತ್ತೀಚೆಗಿನ ಸರಾಸರಿ ವಾಯುಮಾಲಿನ್ಯ ಪ್ರಮಾಣ ತಿಳಿದುಬಂದಿಲ್ಲ. ಕಟ್ಟಡ ಕಾಮಗಾರಿಯಿಂದ ಉಂಟಾಗುವ ಧೂಳು, ಹಳೆಯ ಮತ್ತು ಸರಿಯಾಗಿ ನಿರ್ವಹಣೆ ಕಾಣದ ವಾಹನಗಳು, ಅದರ ಹೊಗೆ ಇತ್ಯಾದಿಗಳಿಂದ ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ಇದರಿಂದ ಕ್ಯಾನ್ಸರ್, ಪಾರ್ಶ್ವವಾಯು, ಅಸ್ತಮಾ ಮತ್ತು ಅತಿಯಾದ ರಕ್ತದೊತ್ತಡ ಮುಂತಾದ ಸಮಸ್ಯೆಗಳ ಅಪಾಯ ಹೆಚ್ಚುತ್ತಿದೆ. ಕೊವಿಡ್-19 ಆತಂಕವೂ ಹೆಚ್ಚಿದೆ ಎಂದು ಟ್ರಾಪಿಕಲ್ ಮತ್ತು ಇನ್ಫೆಕ್ಷಿಯಸ್ ಆಸ್ಪತ್ರೆ ವೈದ್ಯ ಶೇರ್ ಬಹದೂರ್ ಪನ್ ಹೇಳಿಕೆ ನೀಡಿದ್ದಾರೆ.

ಕಠ್ಮಂಡುವಿನಲ್ಲಿ ದಿನಸಿ ಅಂಗಡಿ ಇಟ್ಟುಕೊಂಡಿರುವ 65 ವರ್ಷ ವಯಸ್ಸಿನ ಅರ್ಜುನ್ ಖಾಡ್ಕ, ತಮಗೆ ಕಣ್ಣು ಹಾಗೂ ಮೂಗಿನಲ್ಲಿ ಸುಡುವ ಅನುಭವ ಆಗಿರುವ ಬಗ್ಗೆ ಹೇಳಿಕೊಂಡಿದ್ದಾರೆ. ಈ ಮಟ್ಟದ ವಾಯು ಮಾಲಿನ್ಯವನ್ನು ನಾನು ಕಠ್ಮಂಡುವಿನಲ್ಲಿ ಕಂಡಿರಲಿಲ್ಲ ಎಂದೂ ಅವರು ತಿಳಿಸಿದ್ದಾರೆ. ಜನರು ಸಾಧ್ಯವಾದಷ್ಟು ಮನೆಯೊಳಗೆ ಉಳಿದುಕೊಳ್ಳಬೇಕು. ಅಗತ್ಯ ಕೆಲಸಕಾರ್ಯಗಳಿಗೆ ಮಾತ್ರ ಮನೆಯಿಂದ ಹೊರಬರಬೇಕು ಎಂದು ಆರೋಗ್ಯ ಸಚಿವಾಲಯ ಸೂಚಿಸಿದೆ.

ಇದನ್ನೂ ಓದಿ: ಅಮೆರಿಕ ಅಧ್ಯಕ್ಷ ಜೋ ಬೈಡನ್​ ಸಾಕು ನಾಯಿ ವೈಟ್​ ಹೌಸ್​ ಕೆಲಸಗಾರನಿಗೆ ಕಚ್ಚಿದ್ದು ಈಗ ಅಂತರಾಷ್ಟ್ರೀಯ ಸುದ್ದಿ!

ಇದನ್ನೂ ಓದಿ: ಸೂಯೆಜ್ ಕಾಲುವೆಯಲ್ಲಿ ದೈತ್ಯ ಹಡಗು ಮತ್ತೆ ತೇಲಲು ಹುಣ್ಣಿಮೆ ಚಂದ್ರನೇ ಕಾರಣ!

Published On - 4:23 pm, Wed, 31 March 21

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ