ಸರ್ವಪಕ್ಷ ಸರ್ಕಾರ ರಚನೆಗೆ ಒಪ್ಪಿಗೆ ದೊರೆತ ತಕ್ಷಣವೇ ತಮ್ಮ ಜವಾಬ್ದಾರಿಯನ್ನು ಹಸ್ತಾಂತರಿಸಲು ಸಿದ್ಧ

ಸರ್ವಪಕ್ಷ ಸರ್ಕಾರ ರಚನೆಗೆ ಒಪ್ಪಿಗೆ ದೊರೆತ ತಕ್ಷಣ ಆ ಸರ್ಕಾರಕ್ಕೆ ತಮ್ಮ ಜವಾಬ್ದಾರಿಯನ್ನು ಹಸ್ತಾಂತರಿಸಲು ಸಿದ್ಧ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಸಚಿವರು ಅಭಿಪ್ರಾಯಪಟ್ಟಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ತಿಳಿಸಿದೆ. 

ಸರ್ವಪಕ್ಷ ಸರ್ಕಾರ ರಚನೆಗೆ ಒಪ್ಪಿಗೆ ದೊರೆತ ತಕ್ಷಣವೇ ತಮ್ಮ ಜವಾಬ್ದಾರಿಯನ್ನು ಹಸ್ತಾಂತರಿಸಲು ಸಿದ್ಧ
Ranil Wickremesinghe
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 11, 2022 | 1:41 PM

ಶ್ರೀಲಂಕಾ:  ಪ್ರಧಾನಿ ರನಿಲ್ ವಿಕ್ರಮಸಿಂಘೆ (Ranil Wickremesinghe) ಅವರು ಇಂದು ಬೆಳಗ್ಗೆ ಸಂಪುಟ ಸಚಿವರೊಂದಿಗೆ ಚರ್ಚೆ ನಡೆಸಿದರು. ಸರ್ವಪಕ್ಷ ಸರ್ಕಾರ ರಚನೆಗೆ ಒಪ್ಪಿಗೆ ದೊರೆತ ತಕ್ಷಣ ಆ ಸರ್ಕಾರಕ್ಕೆ ತಮ್ಮ ಜವಾಬ್ದಾರಿಯನ್ನು ಹಸ್ತಾಂತರಿಸಲು ಸಿದ್ಧ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಸಚಿವರು ಅಭಿಪ್ರಾಯಪಟ್ಟಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ತಿಳಿಸಿದೆ. ಶ್ರೀಲಂಕಾ (Sri Lanka) ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಸೋಮವಾರ ತಮ್ಮ ಕಚೇರಿಯಲ್ಲಿ ಎಲ್ಲ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ (Gotabaya Rajapaksa) ಅವರು ಬುಧವಾರ ರಾಜೀನಾಮೆ ನೀಡುವುದಾಗಿ ಪ್ರಧಾನಿಯವರಿಗೆ ತಿಳಿಸಿದ ನಂತರ ವಿಕ್ರಮಸಿಂಘೆ ಎಲ್ಲ ಸಚಿವರ ಸಭೆ ಕರೆದಿದ್ದಾರೆ. ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಸೋಮವಾರ ಬೆಳಗ್ಗೆ 11 ಗಂಟೆಗೆ ಪ್ರಧಾನಿ ಕಚೇರಿಯಲ್ಲಿ ಸಚಿವ ಸಂಪುಟ ಸಭೆ ಕರೆದು ಚರ್ಚೆ ನಡೆಸಿದ್ದಾರೆ ಎಂದು ಪ್ರಧಾನಿಯವರ ಮಾಧ್ಯಮ ಘಟಕ ಹೇಳಿಕೆಯಲ್ಲಿ ತಿಳಿಸಿದೆ. ಸರ್ವ ಪಕ್ಷ ಸರ್ಕಾರ ರಚನೆ ಆಗುವ ತೀರ್ಮಾನ ಕೈಗೊಂಡ ಕೂಡಲೇ ತಮ್ಮ ಜವಾಬ್ದಾರಿಯನ್ನು ಹಸ್ತಾಂತರಿಸಲು ಸಿದ್ಧವಾಗಿದ್ದೇವೆ ಎಂದು ಸಭೆಯಲ್ಲಿ ಪಾಲ್ಗೊಂಡ ಎಲ್ಲ ಸಚಿವರು ಒಪ್ಪಿಕೊಂಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಪ್ರತಿಭಟನೆ ತೀವ್ರವಾದ ಹಿನ್ನಲೆಯಲ್ಲಿ ತಾನು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಗೊಟಬಯ ರಾಜಪಕ್ಸೆ ಪ್ರಧಾನಿ ರನಿಲ್ ವಿಕ್ರಮಸಂಘೆ ಅವರಿಗೆ ತಿಳಿಸಿದ್ದಾರೆ.

ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ನಡುವೆಯೇ ಪ್ರತಿಭಟನಾಕಾರರು ಶನಿವಾರ ದೇಶದ ನಾಯಕರ ಮನೆಗೆ ನುಗ್ಗಿ ಅಲ್ಲಿ ರಾಜಾರೋಷವಾಗಿ ಸಂಭ್ರಮಿಸಿದ್ದಾರೆ. ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸಲು ಸಾಧ್ಯವಾಗದೇ ಇರುವ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ ದೇಶದ ಜನರು ಶನಿವಾರ ರಾಜಪಕ್ಸೆ ಅವರ ಅಧಿಕೃತ ನಿವಾಸಕ್ಕೆ ನುಗ್ಗಿದ್ದರು. ಇದಾದ ನಂತರ ತಾನು ಬುಧವಾರ ರಾಜೀನಾಮೆ ನೀಡುವುದಾಗಿ ರಾಜಪಕ್ಸೆ ಘೋಷಿಸಿದ್ದಾರೆ. ತಾನು ಕೂಡಾ ರಾಜೀನಾಮೆಗೆ ಸಿದ್ಧ ಎಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ಹೇಳಿದ್ದಾರೆ. ಪ್ರತಿಭಟನಾಕಾರರು ರನಿಲ್ ಅವರ ಖಾಸಗಿ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದಾರೆ ಎಂದು ಪ್ರಧಾನಿಯವರ ಕಚೇರಿ ತಿಳಿಸಿದೆ.

ಇದನ್ನೂ ಓದಿ
Image
Indian book of Record: ಚಂದ್ರಹಾಸ ಅವರ ಕೃತಿಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗೌರವ
Image
Gallstone: ಶಸ್ತ್ರಚಿಕಿತ್ಸೆಯಿಲ್ಲದೆ ಪಿತ್ತಕೋಶದ ಕಲ್ಲುಗಳನ್ನು ತೆಗೆಯಲು ಸಾಧ್ಯವೆ! ಇಲ್ಲಿದೆ ಮನೆಮದ್ದು

ಶನಿವಾರ ಅಜ್ಞಾತ ಸ್ಥಳದಿಂದ ಮಾತನಾಡಿದ ರಾಜಪಕ್ಸೆ ಸ್ಪೀಕರ್ ಮಹಿಂದಾ ಯಾಪ ಅಬೇವರ್ದೆನಾ ಅವರಿಗೆ ರಾಜೀನಾಮೆ ನೀಡುವ ವಿಚಾರ ತಿಳಿಸಿದ್ದಾರೆ.

Published On - 1:22 pm, Mon, 11 July 22