AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಂಧಿಕರಿಲ್ಲ, ಇಂಗ್ಲಿಷ್ ಬರಲ್ಲ, ಅರೇಂಜ್ಡ್​ ಮ್ಯಾರೇಜ್ ಆಗಿ ಅಮೆರಿಕಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಯಾವುದೇ ಸಂಬಂಧಿಕರಿಲ್ಲ, ಇಂಗ್ಲಿಷ್ ಕೂಡ ಬರೋದಿಲ್ಲ, ಅರೇಂಜ್ಡ್​ ಮ್ಯಾರೇಜ್ ಆಗಿ ಅಮೆರಿಕಕ್ಕೆ ಹೋಗಿದ್ದ ಮಹಿಳೆ ಏಕಾಏಕಿ ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 24 ವರ್ಷದ ಭಾರತೀಯ ಮಹಿಳೆ ಸಿಮ್ರನ್ ಜೂನ್ 20ರಂದು ಭಾರತದಿಂದ ನ್ಯೂಜೆರ್ಸಿಗೆ ಬಂದು ಸ್ವಲ್ಪ ಸಮಯದ ನಂತರ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದಾರೆ. ಲಿಂಡೆನ್ವೋಲ್ಡ್ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ.ವಿಡಿಯೋದಲ್ಲಿ ಅವರು ತಮ್ಮ ಮೊಬೈಲ್ ನೋಡುತ್ತಿರುವುದನ್ನು ಕಾಣಬಹುದು.

ಸಂಬಂಧಿಕರಿಲ್ಲ, ಇಂಗ್ಲಿಷ್ ಬರಲ್ಲ, ಅರೇಂಜ್ಡ್​ ಮ್ಯಾರೇಜ್ ಆಗಿ ಅಮೆರಿಕಕ್ಕೆ ಹೋಗಿದ್ದ ಮಹಿಳೆ ನಾಪತ್ತೆ
ಸಿಮ್ರನ್ Image Credit source: NDTV
ನಯನಾ ರಾಜೀವ್
|

Updated on: Jun 29, 2025 | 2:43 PM

Share

ವಾಷಿಂಗ್ಟನ್, ಜೂನ್ 29: ಯಾವುದೇ ಸಂಬಂಧಿಕರಿಲ್ಲ, ಇಂಗ್ಲಿಷ್ ಕೂಡ ಬರೋದಿಲ್ಲ, ಅರೇಂಜ್ಡ್​ ಮ್ಯಾರೇಜ್ ಆಗಿ ಅಮೆರಿಕಕ್ಕೆ ಹೋಗಿದ್ದ ಮಹಿಳೆ ಏಕಾಏಕಿ ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 24 ವರ್ಷದ ಭಾರತೀಯ ಮಹಿಳೆ ಸಿಮ್ರನ್ ಜೂನ್ 20ರಂದು ಭಾರತದಿಂದ ನ್ಯೂಜೆರ್ಸಿಗೆ ಬಂದು ಸ್ವಲ್ಪ ಸಮಯದ ನಂತರ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದಾರೆ.

ಲಿಂಡೆನ್ವೋಲ್ಡ್ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ.ವಿಡಿಯೋದಲ್ಲಿ ಅವರು ತಮ್ಮ ಮೊಬೈಲ್ ನೋಡುತ್ತಿರುವುದನ್ನು ಕಾಣಬಹುದು. ಹಾಗೆಯೇ ಯಾವುದೇ ಚಿಂತೆಯಾಗಲಿ ಅಥವಾ ಅವರು ತೊಂದರೆಯಲ್ಲಿರುವಂತೆ ಕಾಣಿಸಿರಲಿಲ್ಲ.

ಸಿಮ್ರನ್ ಅಮೆರಿಕಕ್ಕೆ ಬಂದ ಐದು ದಿನಗಳ ಬಳಿಕ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ನಾಪತ್ತೆಯಾಗಿರುವ ಕುರಿತು ತನಿಖೆ ಆರಂಭಿಸಿರುವ ಪೊಲೀಸರಿಗೆ ಅವರನ್ನು ಅರೇಂಜ್ಡ್​ ಮದುವೆ ಎಂಬುದು ತಿಳಿದುಬಂದಿದೆ. ಮದುವೆಯಾದ ಬಳಿಕ ಅವರು ಅಮೆರಿಕಕ್ಕೆ ಹೋಗಿದ್ದಾರೆ. ಅಮೆರಿಕಕ್ಕೆ ಉಚಿತ ವಿಮಾನ ಟಿಕೆಟ್ ಪಡೆಯಲು ಮದುವೆ ಒಂದು ನೆಪವಾಗಿರಬಹುದೇ ಎಂಬ ಸಾಧ್ಯತೆಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ .

ಮತ್ತಷ್ಟು ಓದಿ: ಸಿಕ್ಕಿಂ: ನದಿಗೆ ಉರುಳಿದ ವಾಹನ, ಹನಿಮೂನ್​ಗೆ ಹೋಗಿದ್ದ ದಂಪತಿ ಸೇರಿ 9 ಮಂದಿ ನಾಪತ್ತೆ

ಸಿಮ್ರನ್​ಗೆ ಅಮೆರಿಕದಲ್ಲಿ ಯಾವುದೇ ಸಂಬಂಧಿಕರಿಲ್ಲ, ಅವರಿಗೆ ಇಂಗ್ಲಿಷ್ ಕೂಡ ಬರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವ ಕುಟುಂಬದ ಸದಸ್ಯರನ್ನಯ ಸಂಪರ್ಕಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ.

ಸಿಮ್ರನ್ ಐದು ಅಡಿ, ನಾಲ್ಕು ಇಂಚು ಎತ್ತರವಾಗಿದ್ದು, ಸುಮಾರು 68 ಕೆಜಿ ತೂಕ ಇದ್ದಾರೆ. ಅವರ ಹಣೆಯ ಎಡ ಭಾಗದಲ್ಲಿ ಸಣ್ಣ ಗಾಯದ ಗುರುತಿದೆ. ಕೊನೆಯ ಬಾರಿಗೆ ಬೂದು ಬಣ್ಣದ ಸ್ವೆಟ್​​ಪ್ಯಾಂಟ್ ಹಾಗೂ ಬಿಳಿ ಟಿ ಶರ್ಟ್​ ಧರಿಸಿದ್ದರು. ಆಕೆಯ ಇರುವಿಕೆಯ ಬಗ್ಗೆ ಮಾಹಿತಿ ಇರುವ ಯಾರಾದರೂ ಲಿಂಡೆನ್‌ವೋಲ್ಡ್ ಪೊಲೀಸ್ ಡಿಟೆಕ್ಟಿವ್ ಜೋ ಟೊಮಸೆಟ್ಟಿರನ್ನು ಸಂಪರ್ಕಿಸಲು ತಿಳಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!