AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿದರೆ ಅಮೆರಿಕ, ಭಾರತ ಸಂಬಂಧ ಇನ್ನೂ ಉತ್ತಮವಾಗುತ್ತೆ:ಸೆರ್ಗಿಯೊ ಗೋರ್

ಭಾರತದ ಮುಂದಿನ ರಾಯಭಾರಿಯಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೆರ್ಗಿಯೊ ಗೋರ್ ಹೆಸರನ್ನು ಪ್ರಸ್ತಾಪಿಸಿದ್ದಾರೆ.ಟ್ರಂಪ್ ಆಡಳಿತದ ಅತಿದೊಡ್ಡ ಆದ್ಯತೆ ಭಾರತ ರಷ್ಯಾದ ತೈಲ ಖರೀದಿಸುವುದನ್ನು ತಡೆಯುವುದು ಎಂದು ಗೋರ್ ಸ್ಪಷ್ಟವಾಗಿ ಹೇಳಿದರು.ಭಾರತ ಮತ್ತು ಅಮೆರಿಕ ನಡುವಿನ ಸುಂಕ ಒಪ್ಪಂದದ ಕುರಿತಾದ ಮಾತುಕತೆಗಳು ಅಂತಿಮ ಹಂತದಲ್ಲಿವೆ ಮತ್ತು ಶೀಘ್ರದಲ್ಲೇ ಸಕಾರಾತ್ಮಕ ಫಲಿತಾಂಶಗಳು ಹೊರಬರಬಹುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಭಾರತ ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿದರೆ ಅಮೆರಿಕ, ಭಾರತ ಸಂಬಂಧ ಇನ್ನೂ ಉತ್ತಮವಾಗುತ್ತೆ:ಸೆರ್ಗಿಯೊ ಗೋರ್
ಗೋರ್
ನಯನಾ ರಾಜೀವ್
|

Updated on: Sep 12, 2025 | 10:27 AM

Share

ವಾಷಿಂಗ್ಟನ್, ಸೆಪ್ಟೆಂಬರ್ 12: ಇತ್ತೀಚಿನ ಸುಂಕ(Tariff) ವಿವಾದ ಹಾಗೂ ರಷ್ಯಾದ ತೈಲ ಖರೀದಿಯ ಬಗ್ಗೆ ಭಿನ್ನಾಭಿಪ್ರಾಯಗಳ ಹೊರತಾಗಿಯೂ, ಅಮೆರಿಕ ಮತ್ತು ಭಾರತದ ನಡುವಿನ ಸಂಬಂಧಗಳು ಉತ್ತಮವಾಗಿವೆ ಎಂದು ಭಾರತದ ರಾಯಭಾರಿ ಹುದ್ದೆಗೆ ನಾಮನಿರ್ದೇಶನಗೊಂಡಿರುವ ಸೆರ್ಗಿಯೊ ಗೋರ್ ಹೇಳಿದ್ದಾರೆ. ಸುಂಕಗಳಿಗೆ ಸಂಬಂಧಿಸಿದಂತೆ ಅಮೆರಿಕ ಮತ್ತು ಭಾರತದ ನಡುವೆ ಹೆಚ್ಚಿನ ಭಿನ್ನಾಭಿಪ್ರಾಯಗಳಿಲ್ಲ, ಎರಡೂ ದೇಶಗಳ ನಡುವಿನ ವ್ಯಾಪಾರ ಸಂಬಂಧಿತ ಸಮಸ್ಯೆಗಳನ್ನು ಮುಂಬರುವ ದಿನಗಳಲ್ಲಿ ಪರಿಹರಿಸಬಹುದು.

ಆದರೆ ಭಾರತ ರಷ್ಯಾದ ತೈಲ ಖರೀದಿಸುವುದನ್ನು ನಿಲ್ಲಿಸಬೇಕಾಗುತ್ತದೆ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ ಎಂದು ಸೆರ್ಗಿಯೊ ಗೋರ್ ಹೇಳಿದರು. ಬ್ರಿಕ್ಸ್‌ನೊಳಗಿನ ವಿವಿಧ ವಿಷಯಗಳಲ್ಲಿ ಭಾರತ ನಮ್ಮ ಪರವಾಗಿ ನಿಂತಿದೆ ಎಂದರು.

ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರು ಸೆನೆಟ್ ಸಮಿತಿಯ ಮುಂದೆ ಸೆರ್ಗಿಯೊ ಗೋರ್ ಅವರನ್ನು ಪರಿಚಯಿಸಿದರು. ಭಾರತ ಮತ್ತು ಅಮೆರಿಕದ ನಡುವಿನ ಸಂಬಂಧಗಳು ಮುಖ್ಯವಾಗಿವೆ, ಅದು ಭವಿಷ್ಯದಲ್ಲಿ ವಿಶ್ವದ ನಕ್ಷೆಯನ್ನು ನಿರ್ಧರಿಸುತ್ತದೆ ಎಂದು ರೂಬಿಯೊ ಹೇಳಿದರು.

ಸೆರ್ಗಿಯೊ ಗೋರ್ ಅವರನ್ನು ಭಾರತಕ್ಕೆ ಮುಂದಿನ ಅಮೆರಿಕದ ರಾಯಭಾರಿಯಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ರೂಬಿಯೊ ಹೇಳಿದರು.

ಮತ್ತಷ್ಟು ಓದಿ:

ಭಾರತ ಅಮೆರಿಕದ ಕ್ಷಮೆ ಯಾಚಿಸಲಿದೆ ಎಂದ ವಾಣಿಜ್ಯ ಕಾರ್ಯದರ್ಶಿ! ಸುಂಕ ತಪ್ಪಿಸಿಕೊಳ್ಳಲು ಭಾರತಕ್ಕೆ 3 ಷರತ್ತು

ಅಮೆರಿಕ-ಭಾರತ ಸಂಬಂಧಗಳ ಮಹತ್ವದ ಬಗ್ಗೆ ಅವರು ವಿಶೇಷ ಒತ್ತು ನೀಡಿದರು ಮತ್ತು ಇದು ಪ್ರಸ್ತುತ ಅಮೆರಿಕಕ್ಕೆ ಅತ್ಯಂತ ಪ್ರಮುಖವಾದ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದಾಗಿದೆ ಎಂದು ಹೇಳಿದರು.ಅಧ್ಯಕ್ಷ ಟ್ರಂಪ್ ನಾಯಕರ ಶೃಂಗಸಭೆಗಾಗಿ ಭಾರತಕ್ಕೆ ಭೇಟಿ ನೀಡಬಹುದು ಎಂದು ಹೇಳಿದ್ದಾರೆ.

ಬ್ರಿಕ್ಸ್ ಗುಂಪಿನಲ್ಲಿ ಭಾರತ ಯಾವಾಗಲೂ ನಮ್ಮೊಂದಿಗಿದೆ, ಅನೇಕ ಬ್ರಿಕ್ಸ್ ದೇಶಗಳು ದೀರ್ಘಕಾಲದವರೆಗೆ ಯುಎಸ್ ಡಾಲರ್‌ನಿಂದ ದೂರವಿರಲು ಪ್ರಯತ್ನಿಸುತ್ತಿವೆ, ಆದರೆ ಭಾರತ ಇದನ್ನು ತಡೆಯಲು ಕೆಲಸ ಮಾಡಿದೆ. ಬ್ರಿಕ್ಸ್‌ನ ಉಳಿದ ದೇಶಗಳಿಗಿಂತ ಭಾರತ ನಮ್ಮೊಂದಿಗೆ ಮಾತನಾಡಲು ಮತ್ತು ಸಂಪರ್ಕ ಸಾಧಿಸಲು ಹೆಚ್ಚು ಸಿದ್ಧವಾಗಿದೆ ಎಂದು ಗೋರ್ ಹೇಳಿದ್ದಾರೆ.

ವಾಸ್ತವವಾಗಿ ಎರಡೂ ಕಡೆಯವರು ಇದರ ಸೂಕ್ಷ್ಮ ಅಂಶಗಳನ್ನು ಚರ್ಚಿಸುತ್ತಿದ್ದಾರೆ. ಇತರ ದೇಶಗಳಿಗಿಂತ ಭಾರತದಿಂದ ನಮಗೆ ಹೆಚ್ಚಿನ ನಿರೀಕ್ಷೆಗಳಿವೆ. ಮುಂಬರುವ ವಾರಗಳಲ್ಲಿ ಈ ಸಮಸ್ಯೆ ಬಗೆಹರಿಯುತ್ತದೆ ಎಂದು ನಾನು ಭಾವಿಸುತ್ತೇನೆ. ಸೆರ್ಗಿಯೊ ಗೋರ್ ಭಾರತವನ್ನು ಅಮೆರಿಕದ ಕಾರ್ಯತಂತ್ರದ ಪಾಲುದಾರ ಎಂದು ಬಣ್ಣಿಸಿದರು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬಲವಾದ ನಾಯಕತ್ವದಲ್ಲಿ, ಅವರು ಭಾರತದೊಂದಿಗೆ ಸಂಬಂಧವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಬದ್ಧರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಭಾರತದ ಮೇಲೆ ಅಮೆರಿಕ ಒಟ್ಟು ಶೇ.50 ರಷ್ಟು ಸುಂಕ ವಿಧಿಸಿದೆ. ಟ್ರಂಪ್ ಆಡಳಿತ ಮೊದಲು ಶೇ.25 ರಷ್ಟು ಸುಂಕವನ್ನು ಘೋಷಿಸಿದ್ದರೂ, ನಂತರ ಅದನ್ನು ಶೇ.50 ಕ್ಕೆ ಹೆಚ್ಚಿಸಿತು, ಇದು ಆಗಸ್ಟ್ 27 ರಿಂದ ಜಾರಿಗೆ ಬಂದಿತು. ಭಾರತವು ರಷ್ಯಾದ ತೈಲವನ್ನು ಖರೀದಿಸಿರುವುದನ್ನು ಹೆಚ್ಚುವರಿ ಶೇ.25 ರಷ್ಟು ಸುಂಕ ವಿಧಿಸಲು ಕಾರಣವೆಂದು ಅಮೆರಿಕ ಉಲ್ಲೇಖಿಸಿತ್ತು.

ಸೆನೆಟ್ ಭಾರತದ ರಾಯಭಾರಿಯಾಗಿ ಸೆರ್ಗಿಯೊ ಗೋರ್ ಅವರ ನೇಮಕವನ್ನು ಅನುಮೋದಿಸಿದರೆ, ಅವರು ಅಮೆರಿಕದ ಅತ್ಯಂತ ಕಿರಿಯ ರಾಯಭಾರಿಯಾಗಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಟ್ರಂಪ್ ನಡುವಿನ ಸಂಬಂಧವನ್ನು ಅದ್ಭುತ ಎಂದು ಗೋರ್ ಬಣ್ಣಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ