ಚೀನಾ-ಭಾರತದ ಸೈನಿಕರ ಘರ್ಷಣೆ ಮೇಲೆ ಅಮೆರಿಕ ಹದ್ದಿನ ಕಣ್ಣು

|

Updated on: Jun 17, 2020 | 2:37 PM

ದೆಹಲಿ: ಲಡಾಖ್​​ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ ನಡೆದಿದೆ. ಈ ವಿಚಾರಕ್ಕೆ ಸಂಬಂಧಿಸಿ ಯುಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ಪ್ರತಿಕ್ರಿಯೆ ನೀಡಿದ್ದಾರೆ. 2 ದೇಶಗಳ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಸದ್ಯದ ಸ್ಥಿತಿಯಲ್ಲಿ ಶಾಂತಿಯುತ ಪರಿಹಾರ ಬೆಂಬಲಿಸುತ್ತೇವೆ. ಘರ್ಷಣೆಯಲ್ಲಿ ಭಾರತದ 20 ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಹುತಾತ್ಮರಾದವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇವೆ. ಭಾರತ ಮತ್ತು ಚೀನಾ ಸೈನಿಕರ ನಡುವಿನ ಕಾದಾಟ ಉಲ್ಬಣಗೊಳ್ಳುತ್ತಿದೆ. ಜೂನ್ 2 ರಂದು ಅಧ್ಯಕ್ಷ ಟ್ರಂಪ್ ಮತ್ತು ಪ್ರಧಾನಿ ಮೋದಿ ಅವರು ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿ […]

ಚೀನಾ-ಭಾರತದ ಸೈನಿಕರ ಘರ್ಷಣೆ ಮೇಲೆ ಅಮೆರಿಕ ಹದ್ದಿನ ಕಣ್ಣು
Follow us on

ದೆಹಲಿ: ಲಡಾಖ್​​ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ ನಡೆದಿದೆ. ಈ ವಿಚಾರಕ್ಕೆ ಸಂಬಂಧಿಸಿ ಯುಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ಪ್ರತಿಕ್ರಿಯೆ ನೀಡಿದ್ದಾರೆ. 2 ದೇಶಗಳ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಸದ್ಯದ ಸ್ಥಿತಿಯಲ್ಲಿ ಶಾಂತಿಯುತ ಪರಿಹಾರ ಬೆಂಬಲಿಸುತ್ತೇವೆ.

ಘರ್ಷಣೆಯಲ್ಲಿ ಭಾರತದ 20 ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಹುತಾತ್ಮರಾದವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇವೆ. ಭಾರತ ಮತ್ತು ಚೀನಾ ಸೈನಿಕರ ನಡುವಿನ ಕಾದಾಟ ಉಲ್ಬಣಗೊಳ್ಳುತ್ತಿದೆ. ಜೂನ್ 2 ರಂದು ಅಧ್ಯಕ್ಷ ಟ್ರಂಪ್ ಮತ್ತು ಪ್ರಧಾನಿ ಮೋದಿ ಅವರು ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಿದ್ದರು ಎಂದು ಯುಸ್ ವಕ್ತಾರ ಘಟನೆಯ ಕುರಿತು ಪ್ರತಿಕ್ರಿಯಿಸಿದ್ದಾರೆ.

ಭಾರತ-ಚೀನಾ ಗಡಿಯಲ್ಲಿ ಅಮೆರಿಕ ನಿಗಾವಹಿಸುತ್ತಿದೆ. ಕೊರೊನಾ ಸಂಕಷ್ಟದ ನಡುವೆಯೇ ಯದ್ಧ ಭೀತಿ ಶುರುವಾಗಿದೆ. ಇಬ್ಬರ ಮಧ್ಯೆ ಸಂಘರ್ಷ ನಡೆದ ಹಿನ್ನೆಲೆಯಲ್ಲಿ ಭಾರತ-ಚೀನಾ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಂಘರ್ಷದ ನಡುವೆ ದೊಡ್ಡಣ್ಣ ಅಮೆರಿಕ ಎಂಟ್ರಿಯಾಗಿದ್ದು, ಪರಿಸ್ಥಿತಿ ಅವಲೋಕನ ನಡೆಸುತ್ತಿದೆ.

Published On - 7:11 am, Wed, 17 June 20