America: ಗೆಳತಿ ಗರ್ಭಪಾತ ಮಾಡಿಸಿಕೊಂಡಿದ್ದಕ್ಕೆ ಹತ್ಯೆ ಮಾಡಿದ ಪ್ರಿಯಕರ

ಗೆಳತಿ ಗರ್ಭಪಾತ ಮಾಡಿಸಿಕೊಂಡಿದ್ದಕ್ಕೆ ಕೋಪಗೊಂಡ ಪ್ರಿಯಕರನೊಬ್ಬ ಆಕೆಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.

America: ಗೆಳತಿ ಗರ್ಭಪಾತ ಮಾಡಿಸಿಕೊಂಡಿದ್ದಕ್ಕೆ ಹತ್ಯೆ ಮಾಡಿದ ಪ್ರಿಯಕರ
ಶೂಟಿಂಗ್

Updated on: May 15, 2023 | 9:28 AM

ಗೆಳತಿ ಗರ್ಭಪಾತ ಮಾಡಿಸಿಕೊಂಡಿದ್ದಕ್ಕೆ ಕೋಪಗೊಂಡ ಪ್ರಿಯಕರನೊಬ್ಬ ಆಕೆಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.
22 ವರ್ಷದ ಹೆರಾಲ್ಡ್​ ಥಾಂಪ್ಸನ್, 26 ವರ್ಷದ ಗೇಬ್ರಿಯೆಲಾ ಎಂಬಾಕೆಯನ್ನು ಪ್ರೀತಿಸುತ್ತಿದ್ದ, ಆಕೆಯನ್ನು ಸ್ಟ್ರಿಪ್ ಮಾಲ್ ಪಾರ್ಕಿಂಗ್ ಸ್ಥಳದಲ್ಲಿ ಗುಂಡಿಕ್ಕಿ ಕೊಲೆ ಮಾಡಿದ್ದಾನೆ ಎಂದು ಡಲ್ಲಾಸ್ ಪೊಲೀಸರು ತಿಳಿಸಿದ್ದಾರೆ. ಕೊಲೊರಾಡೊಗೆ ಸುಮಾರು 800 ಕಿ.ಮೀ ಪ್ರಯಾಣ ಬೆಳೆಸಿ ಹಿಂದಿನ ದಿನ ರಾತ್ರಿ ಬಂದಿದ್ದರು, ಅಲ್ಲಿ ಗರ್ಭಾವಸ್ಥೆಯ ಯಾವ ಹಂತದಲ್ಲಾದರೂ ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿಸಲಾಗಿದೆ.

ಟೆಕ್ಸಾಸ್‌ನಲ್ಲಿ, ವೈದ್ಯಕೀಯ ತುರ್ತುಸ್ಥಿತಿ ಸಂಭವಿಸದ ಹೊರತು ಸುಮಾರು ಆರು ವಾರಗಳ ನಂತರ ಗರ್ಭಪಾತವು ಕಾನೂನುಬಾಹಿರವಾಗಿದೆ.
ಪ್ರಿಯಕರನಿಗೆ ಆಕೆ ಗರ್ಭಪಾತ ಮಾಡಿಸಿಕೊಳ್ಳುವುದು ಇಷ್ಟವಿರಲಿಲ್ಲ ಎಂದು ತಿಳಿದುಬಂದಿದೆ. ಪಾರ್ಕಿಂಗ್ ಸ್ಥಳದಲ್ಲಿದ್ದ ಸಿಸಿಟಿವಿ ಗಮನಿಸಿದಾಗ ಬೆಳಗ್ಗೆ 7.30ರ ಸುಮಾರಿಗೆ ಅವರಿಬ್ಬರು ಜಗಳವಾಡುತ್ತಿದ್ದುದು ಕಂಡುಬಂದಿದೆ.

ಮತ್ತಷ್ಟು ಓದಿ: ತರಗತಿಯಲ್ಲಿ ಗರ್ಭಪಾತ: ಕೊಠಡಿಯೊಳಕ್ಕೆ ನುಗ್ಗಿ ಬಾಗಿಲು ಹಾಕಿಕೊಂಡ ಬಿ ಟೆಕ್ ವಿದ್ಯಾರ್ಥಿನಿ, ತೀವ್ರ ರಕ್ತಸ್ರಾವದಿಂದ ಸಾವು

ಪ್ರಿಯಕರ ಆ ಸಮಯದಲ್ಲಿ ಜೇಬಿನಿಂದ ಬಂದೂಕು ತೆಗೆದು ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ, ಆಕೆ ಕುಸಿದು ಕೆಳಗೆ ಬಿದ್ದಿದ್ದಾಳೆ ಅಷ್ಟಾದ ಮೇಲೂ ಆತ ಗುಂಡಿನ ದಾಳಿ ಮುಂದುವರೆಸಿದ್ದ ಎನ್ನಲಾಗಿದೆ. ನ್ಯೂಯಾರ್ಕ್​ ಪೋಸ್ಟ್​ನ ವರದಿ ಪ್ರಕಾರ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us