ಅಫ್ಘಾನಿಸ್ತಾನ ಬೆಳವಣಿಗೆಗಳ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಇಂದು ರಾತ್ರಿ 1.15ಕ್ಕೆ ಭಾಷಣ

ಅಫ್ಘಾನಿಸ್ತಾನದಿಂದ ಅಮೆರಿಕ ಸೇನೆಯನ್ನು ಹಿಂದಕ್ಕೆ ಕರೆಸಿಕೊಂಡ ರೀತಿಯ ಬಗ್ಗೆ ಅಲ್ಲಿನ ಜನರು ಆಕ್ಷೇಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜೋ ಬೈಡೆನ್ ಏನು ಮಾತನಾಡುತ್ತಾರೆ ಎಂಬ ಬಗ್ಗೆ ಕುತೂಹಲ ವ್ಯಕ್ತವಾಗಿದೆ.

ಅಫ್ಘಾನಿಸ್ತಾನ ಬೆಳವಣಿಗೆಗಳ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಇಂದು ರಾತ್ರಿ 1.15ಕ್ಕೆ ಭಾಷಣ
ಅಮೆರಿಕ ಅಧ್ಯಕ್ಷ ಜೋ ಬೈಡೆನ್ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Aug 16, 2021 | 10:31 PM

ಷಿಂಗ್​ಟನ್: ಅಫ್ಘಾನಿಸ್ತಾನದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಸೋಮವಾರ ಮಧ್ಯಾಹ್ನ 3.45ಕ್ಕೆ (ಭಾರತೀಯ ಕಾಲಮಾನ ಮಂಗಳವಾರ ನಸುಕಿನ 1.15ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಫ್ಘಾನಿಸ್ತಾನವನ್ನು ತಾಲಿಬಾನ್ ತನ್ನ ಸುಪರ್ದಿಗೆ ತೆಗೆದುಕೊಂಡ ನಂತರ ಅಮೆರಿಕದಲ್ಲಿ ಡೆಮಾಕ್ರಟ್ ಪಕ್ಷದ ಜನಪ್ರಿಯತೆ ವ್ಯಾಪಕವಾಗಿ ಕಡಿಮೆಯಾಗಿದೆ. ಸೇನೆಯನ್ನು ಹಿಂದಕ್ಕೆ ಕರೆಸಿಕೊಂಡ ರೀತಿಯ ಬಗ್ಗೆಯೂ ಸಮಾಜದ ಹಲವು ವರ್ಗಗಳಿಂದ ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಜೋ ಬೈಡೆನ್ ಏನು ಮಾತನಾಡುತ್ತಾರೆ ಎಂಬ ಬಗ್ಗೆ ಕುತೂಹಲ ವ್ಯಕ್ತವಾಗಿದೆ.

ವಿಶ್ರಾಂತಿಗಾಗಿ ಕೇಂಪ್​ ಡೇವಿಡ್​ ಅಧ್ಯಕ್ಷರ ನಿವಾಸಕ್ಕೆ ತೆರಳಿರುವ ಜೋ ಬೈಡೆನ್ ಯೋಜಿತ ವಿರಾಮವನ್ನು ಕಡಿತಗೊಳಿಸಿ ವಾಷಿಂಗ್​ಟನ್​ಗೆ ಹಿಂದಿರುಗುತ್ತಿದ್ದಾರೆ. ಅವರು ಇಂದು ಶ್ವೇತಭವನದಲ್ಲಿ ಅಫ್ಘಾನಿಸ್ತಾನದ ಬೆಳವಣಿಗೆಗಳ ಬಗ್ಗೆ ಹೇಳಿಕೆ ನೀಡಲಿದ್ದಾರೆ ಎಂದು ಅಧ್ಯಕ್ಷರ ಕಚೇರಿ ಪ್ರಕಟಣೆ ತಿಳಿಸಿದೆ.

ದೇಶದ ಜನರಿಗೆ ಅಧ್ಯಕ್ಷರು ಅಫ್ಘಾನಿಸ್ತಾನದ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ರಾಷ್ಟ್ರೀಯ ಭದ್ರತಾ ತಂಡದೊಂದಿಗೆ ಬೈಡೆನ್ ಸುದೀರ್ಘ ಸಮಾಲೋಚನೆಗಳನ್ನು ನಡೆಸುತ್ತಿದ್ದಾರೆ ಎಂದು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವನ್ ಎಬಿಸಿ ಸುದ್ದಿವಾಹಿನಿಗೆ ತಿಳಿಸಿದ್ದರು.

ಅಮೆರಿಕದಲ್ಲಿ ಈವರೆಗೆ ಅಧಿಕಾರಕ್ಕೆ ಬಂದ ಅಧ್ಯಕ್ಷರ ಪೈಕಿ ವಿದೇಶಾಂಗ ವ್ಯವಹಾರಗಳಲ್ಲಿ ಪರಿಣಿತರು ಎನಿಸಿಕೊಂಡಿದ್ದ ಜೋ ಬೈಡೆನ್ ವಿರುದ್ಧ ಅಮೆರಿಕದಲ್ಲಿಯೇ ಇದೀಗ ಜನಾಕ್ರೋಶ ಹೆಪ್ಪುಗಟ್ಟುತ್ತಿದೆ. ಅಮೆರಿಕದಲ್ಲಿರುವ ಅಫ್ಘಾನ್ ಪ್ರಜೆಗಳು ಶ್ವೇತಭವನದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. 1975ರಲ್ಲಿ ವಿಯೆಟ್ನಾಂನಿಂದ ಹಿಂದಕ್ಕೆ ಹೋದ ಮಾದರಿಯಲ್ಲಿಯೇ ಇದೀಗ ಅಮೆರಿಕ ಅಫ್ಘಾನಿಸ್ತಾನದಿಂದ ಹಿಂದಕ್ಕೆ ಹೊರಟಿದೆ ಎಂದು ಹಲವು ಮಾಧ್ಯಮಗಳು ವರದಿ ಪ್ರಕಟಿಸಿವೆ.

ಏನಾಗ್ತಿದೆ ಅಮೆರಿಕದಲ್ಲಿ? ಅಫ್ಘಾನಿಸ್ತಾನ ಬೆಳವಣಿಗೆ ಬಗ್ಗೆ ಕಳೆದ ಶನಿವಾರ ಲಿಖಿತ ಹೇಳಿಕೆ ನೀಡಿದ್ದ ಜೋ ಬೈಡೆನ್, ಅಮೆರಿಕ ಅಫ್ಘಾನಿಸ್ತಾನದಿಂದ ಸಂಪೂರ್ಣವಾಗಿ ಹಿಂದೆ ಸರಿಯಲಿದೆ ಎಂದು ಹೇಳಿದ್ದರು. ಜನಾಭಿಪ್ರಾಯಕ್ಕೆ ಮಣಿದಿದ್ದ ಶ್ವೇತಭವನವು ಭಾನುವಾರ ಅಧ್ಯಕ್ಷರು ಸಲಹೆಗಾರರೊಂದಿಗೆ ಸಮಾಲೋಚನೆ ನಡೆಸುತ್ತಿದ್ದ ಛಾಯಾಚಿತ್ರ ಬಿಡುಗಡೆ ಮಾಡಿತ್ತು.

ಡೊನಾಲ್ಡ್​ ಟ್ರಂಪ್ ಅವಧಿಯಲ್ಲಿ ಆಗಿದ್ದ ಅನಾಹುತಗಳನ್ನು ಸರಿಪಡಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದವರು ಜೋ ಬೈಡೆನ್. ಆದರೆ ಅಫ್ಘಾನಿಸ್ತಾನದ ವಿಚಾರದಲ್ಲಿ ಅವರು ತೆಗೆದುಕೊಂಡ ತೀರ್ಮಾನಗಳು ಅಧ್ಯಕ್ಷರಾಗಿ ದೇಶವನ್ನು ಮುನ್ನಡೆಸುವ ಅವರ ಸಾಮರ್ಥ್ಯದ ಬಗ್ಗೆಯೇ ಜನರಲ್ಲಿ ಪ್ರಶ್ನೆಗಳನ್ನು ಹುಟ್ಟುಹಾಕಿವೆ.

80 ಶತಕೋಟಿ ಡಾಲರ್ ವ್ಯಯಿಸಿ, 20 ವರ್ಷಗಳ ಕಾಲ ತರಬೇತಿ ನೀಡಿ ಸಜ್ಜುಗೊಳಿಸಿದ್ದ 3 ಲಕ್ಷ ಅಫ್ಘಾನ್ ಯೋಧರು ಹೇಗೆ ಸರಿಯಾದ ಪ್ರತಿರೋಧವನ್ನೇ ತೋರದೆ ತಾಲಿಬಾನ್​ಗೆ ಅಷ್ಟುಬೇಗನೆ ಶರಣಾದರು ಎಂದು ಅಮೆರಿಕದ ಜನರು ಪ್ರಶ್ನಿಸುತ್ತಿದ್ದಾರೆ. 75 ಸಾವಿರದಷ್ಟಿರುವ ತಾಲಿಬಾನಿಗಳನ್ನು 3 ಲಕ್ಷ ವೃತ್ತಿಪರ ಸೈನಿಕರಿರುವ ಅಫ್ಘಾನ್ ಸೇನೆ ಸುಲಭವಾಗಿ ಮಣಿಸಲಿದೆ ಎಂದು ಬೈಡೆನ್ ಈ ಹಿಂದೆ ಪ್ರತಿಪಾದಿಸಿದ್ದರು.

(America President Joe Biden Address Nation on Afghanistan Developments)

ಇದನ್ನೂ ಓದಿ: Impact on India: ತಾಲಿಬಾನ್ ವಶಕ್ಕೆ ಅಫ್ಘಾನಿಸ್ತಾನ, ಭಾರತದ ಭದ್ರತೆಗೆ ಹಲವು ಆತಂಕ

ಇದನ್ನೂ ಓದಿ: Afghanistan: ಅಫ್ಘಾನಿಸ್ತಾನದ ಪತನ; ಆತುರಗೆಟ್ಟ ದೊಡ್ಡಣ್ಣ ಜೋ ಬೈಡನ್​ ಯಾಮಾರಿದ್ದು ಎಲ್ಲಿ? ಮುಂದೇನು?

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ