Odisha Train Accident: ಒಡಿಶಾ ರೈಲು ಅಪಘಾತದ ಸುದ್ದಿ ಕೇಳಿ ಮರುಗಿದ ಅಮೆರಿಕ ಅಧ್ಯಕ್ಷ ಜೋ ಬೈಡನ್

ಒಡಿಶಾ ರೈಲು ದುರಂತದ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಬೇಸರ ವ್ಯಕ್ತಪಡಿಸಿದ್ದಾರೆ. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಮೂರು ರೈಲುಗಳು ಅಪಘಾತಕ್ಕೀಡಾಗಿ ಕನಿಷ್ಠ 288 ಜನರು ಸಾವನ್ನಪ್ಪಿದ್ದಾರೆ ಮತ್ತು 1,100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Odisha Train Accident: ಒಡಿಶಾ ರೈಲು ಅಪಘಾತದ ಸುದ್ದಿ ಕೇಳಿ ಮರುಗಿದ ಅಮೆರಿಕ ಅಧ್ಯಕ್ಷ ಜೋ ಬೈಡನ್
ಜೋ ಬೈಡನ್Image Credit source: Free Press Journal
Follow us
ನಯನಾ ರಾಜೀವ್
|

Updated on: Jun 04, 2023 | 10:32 AM

ಒಡಿಶಾ ರೈಲು ದುರಂತದ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್( Joe Biden) ಬೇಸರ ವ್ಯಕ್ತಪಡಿಸಿದ್ದಾರೆ. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಮೂರು ರೈಲುಗಳು ಅಪಘಾತಕ್ಕೀಡಾಗಿ ಕನಿಷ್ಠ 288 ಜನರು ಸಾವನ್ನಪ್ಪಿದ್ದಾರೆ ಮತ್ತು 1,100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭಾರತದಲ್ಲಿ ಸಂಭವಿಸಿದ ಈ ಭೀಕರ ಅಪಘಾತದಿಂದ ತುಂಬಾ ನೋವಾಗಿದೆ, ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನೋವನ್ನು ಮರೆಯುವ ಶಕ್ತಿ ಸಿಗಲಿ, ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಆಶಿಸಿದ್ದಾರೆ.

ಅಪಘಾತದ ಸ್ಥದಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಖುದ್ದಾಗಿ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಹೌರಾ-ಚೆನ್ನೈ ರೈಲು ಮಾರ್ಗದ ದುರಸ್ತಿ ಕಾರ್ಯ ಬುಧವಾರ ಸಂಜೆಯ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಅಶ್ವಿನಿ ವೈಷ್ಣವ್ ಈ ಹಿಂದೆ ತಿಳಿಸಿದ್ದರು. ಬಾಲಸೋರ್‌ನ ಬಹನಾಗಾ ಬಜಾರ್ ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ.

ಈ ರೈಲಿನ ಕೆಲವು ಬೋಗಿಗಳು ಹಾದುಹೋಗುತ್ತಿದ್ದ ಯಶವಂತಪುರ-ಹೌರಾ ಎಕ್ಸ್‌ಪ್ರೆಸ್‌ನ ಹಿಂಭಾಗಕ್ಕೂ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ 288 ಜನರು ಸಾವನ್ನಪ್ಪಿದ್ದಾರೆ. 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡ ಸುಮಾರು 56 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: Odisha Train Accident: ಎಲ್ಲಿದ್ದೀಯೋ ಕಂದ, ಕಣ್ಣಂಚಲ್ಲಿ ನೀರು, ಶವಗಳ ರಾಶಿಯ ನಡುವೆ ಮುಸುಕು ತೆಗೆದು ಮಗನಿಗಾಗಿ ತಂದೆಯ ಹುಡುಕಾಟ

ಬಾಲಸೋರ್ ರೈಲು ಅಪಘಾತದ ಕುರಿತು ಉನ್ನತ ಮಟ್ಟದ ಸಮಿತಿ ತನಿಖೆಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಆದೇಶಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಅಪಘಾತ ಸ್ಥಳಕ್ಕೆ ತೆರಳಿದ್ದರು. ಅಲ್ಲದೆ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ