ಅಮೆರಿಕದಲ್ಲಿ ಮತ್ತೆ ಸಾರ್ವಜನಿಕರ ಮೇಲೆ ಗುಂಡಿನ ದಾಳಿ, ಓರ್ವ ಸಾವು, ಏಳು ಮಂದಿಗೆ ಗಾಯ

ಗುಂಡಿನ ದಾಳಿಗೆ ಬೆದರಿದ ಜನರು ಎಲ್ಲೆಂದರಲ್ಲಿ ದಿಕ್ಕಾಪಾಲಾಗಿ ಓಡಿದ್ದಾರೆ. ಗುಂಡೇಟು ತಿಂದವರಲ್ಲಿ ಇಬ್ಬರು ಬಾಲಕರೂ ಸೇರಿದ್ದಾರೆ.

ಅಮೆರಿಕದಲ್ಲಿ ಮತ್ತೆ ಸಾರ್ವಜನಿಕರ ಮೇಲೆ ಗುಂಡಿನ ದಾಳಿ, ಓರ್ವ ಸಾವು, ಏಳು ಮಂದಿಗೆ ಗಾಯ
ಅಮೆರಿಕದ ಒಕ್ಲಾಹಾಮದಲ್ಲಿ ಗುಂಡಿನ ದಾಳಿ ನಡೆದಿದೆ (ಸಂಗ್ರಹಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 30, 2022 | 6:59 AM

ವಾಷಿಂಗ್​ಟನ್: ಅಮೆರಿಕದ ಪೂರ್ವ ಒಕ್ಲಾಹಾಮದಲ್ಲಿ (Oklahoma) ಭಾನುವಾರ ಮುಂಜಾನೆ ನಡೆಯುತ್ತಿದ್ದ ಉತ್ಸವದ ಮೇಲೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಗುಂಡಿನ ದಾಳಿಗೆ ಬೆದರಿದ ಜನರು ಎಲ್ಲೆಂದರಲ್ಲಿ ದಿಕ್ಕಾಪಾಲಾಗಿ ಓಡಿದ್ದಾರೆ. ಗುಂಡೇಟು ತಿಂದವರಲ್ಲಿ ಇಬ್ಬರು ಬಾಲಕರೂ ಸೇರಿದ್ದಾರೆ. ಏಳು ಮಂದಿಗೆ ಗಾಯಗಳಾಗಿವೆ. ಒಕ್ಲಾಹಾಮಾದ ತಾರ್​ಫ್ಟ್​ (Tarft) ಎಂಬಲ್ಲಿ ಸ್ಮರಣಾ ದಿನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕೆಲವರ ನಡುವೆ ಮಾತಿನ ಚಕಮಕಿ, ಏರಿದ ದನಿಯ ವಾಗ್ವಾದ ನಡೆದಿದ್ದು ನಂತರ, ಮಧ್ಯರಾತ್ರಿಯ ವೇಳೆಗೆ ಗುಂಡಿನ ದಾಳಿ ನಡೆದಿದೆ. ಘಟನೆ ಸಂಬಂಧ ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಒಕ್ಲಾಹಾಮ ತನಿಖಾ ದಳ ಮಾಹಿತಿ ನೀಡಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಕೆಫೆ ಮಾಲೀಕರು, ‘ನಮಗೆ ಗುಂಡು ಹಾರಾಟದ ಸದ್ದು ಕೇಳಿ ಬಂತು. ನಾವು ಪಟಾಕಿ ಇರಬೇಕು ಎಂದುಕೊಂಡೆವು. ಹೆದರಿದ ಜನರು ಎಲ್ಲೆಂದರಲ್ಲಿ ಓಡಲು ಆರಂಭಿಸಿದರು. ‘ಗೆಟ್ ಡೌನ್, ಗೆಟ್ ಡೌನ್’ ಎಂದು ನಾವು ಕಿರುಚಿಕೊಳ್ಳುತ್ತಿದ್ದೆವು ಎಂದು ಘಟನೆಯನ್ನು ವಿವರಿಸಿದರು. ತಾರ್​ಫ್ಟ್​ನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಸುಮಾರು 1,500 ಮಂದಿ ಪಾಲ್ಗೊಂಡಿದ್ದರು. ತಾರ್​ಫ್ಟ್​ ಸಣ್ಣ ಪಟ್ಟಣ. ಉತ್ಸವದ ಕಾರಣ ಇಲ್ಲದಿದ್ದರೆ ಅಲ್ಲಿ ಹೆಚ್ಚಿನ ಜನರು ಸೇರುವ ಸಾಧ್ಯತೆಯೇ ಇರಲಿಲ್ಲ. ಘಟನೆ ನಡೆದ ಬಳಿಕ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಅಗತ್ಯ ಕ್ರಮಗಳನ್ನು ತೆಗೆದುಕೊಂಡರು.

ಗಾಯಾಳುಗಳ ಮಾಹಿತಿ ಸೇರಿದಂತೆ ಯಾವುದೇ ವಿವರ ಒದಗಿಸಲು ಅಧಿಕಾರಿಗಳು ನಿರಾಕರಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇಶದ ವಿವಿಧೆಡೆ ನಡೆದಿದ್ದ ಗುಂಡಿನ ದಾಳಿಯ ನಂತರ ದೇಶವು ಮತ್ತೆ ಸಹಜ ಸ್ಥಿತಿಯತ್ತ ಮರಳುತ್ತಿದ್ದ ವೇಳೆ ನಡೆದಿರುವ ಈ ಗುಂಡಿನ ದಾಳಿಯಿಂದ ಜನರಲ್ಲಿ ಭೀತಿ ಆವರಿಸಿದೆ.

ಟೆಕ್ಸಾಸ್ ನಗರದಲ್ಲಿ ಗುಂಡಿನ ದಾಳಿ

ಅಮೆರಿಕದ ಟೆಕ್ಸಾಸ್ ನಗರದ ಶಾಲೆಗೆ ಮೇ 25ರಂದು ನುಗ್ಗಿದ್ದ ದುಷ್ಕರ್ಮಿಯೊಬ್ಬ ಯದ್ವಾತದ್ವಾ ಗುಂಡು ಹಾರಿಸಿ, 19 ಮಕ್ಕಳೂ ಸೇರಿ 21 ಮಂದಿಯನ್ನು ಕೊಂದಿದ್ದ. ಗುಂಡಿನ ದಾಳಿ (Texas School Shooting) ನಡೆಸಿದವ ನಂತರ ಪೊಲೀಸರ ಗುಂಡಿಗೆ ಬಲಿಯಾಗಿದ್ದ. ಇನ್ನೂ 18ರ ಹರೆಯದಲ್ಲಿರುವ ಯುವಕ ಸಾಲ್ವಡೋರ್ ರಾಮೊಸ್​ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ. ಬಫೆಲೊ ಸೂಪರ್ ಮಾರ್ಕೆಟ್ ಮೇಲೆ ಗುಂಡಿನ ದಾಳಿ ನಡೆದ ಕೇವಲ 10 ದಿನಗಳಲ್ಲಿ ಮತ್ತೊಂದು ವಿಷಾದಕರ ಬೆಳವಣಿಗೆ ನಡೆದಿದ್ದು, ಅಮೆರಿಕದಲ್ಲಿ ಗನ್ ಲಾಬಿ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಜಪಾನ್ ಸೇರಿದಂತೆ ಏಷ್ಯಾದ ದೇಶಗಳಿಗೆ ಐದು ದಿನಗಳ ಪ್ರವಾಸಕ್ಕೆ ತೆರಳಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ‘ಇಂಥ ಪ್ರಕರಣಗಳು ವಿಶ್ವದ ಇತರ ದೇಶಗಳಲ್ಲಿ ಅಪರೂಪಕ್ಕೊಮ್ಮೆ ಆಗುತ್ತವೆ. ಆದರೆ ಅಮೆರಿಕದಲ್ಲಿ ಪದೇಪದೆ ಆಗುತ್ತಿರುವುದು ವಿಷಾದದ ಸಂಗತಿ. ದೇವರಾಣೆ, ನಾವು ಗನ್ ಲಾಬಿಗೆ ಕಡಿವಾಣ ಹಾಕುತ್ತೇವೆ ಎಂದು ಜೋ ಬೈಡೆನ್ ಭರವಸೆ ನೀಡಿದ್ದರು.

ಸಂತ್ರಸ್ತರ ಮನೆಗೆ ಇಂದು ಬೈಡೆನ್ ಭೇಟಿ

ಟೆಕ್ಸಾಸ್​ನ ಶಾಲೆಯೊಂದರಲ್ಲಿ 18 ವರ್ಷದ ಯುವಕ ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಾಗು ಪ್ರಥಮ ಮಹಿಳೆ ಜಿಲ್ ಬಿಡೆನ್ ಇಂದು (ಮೆ 30) ಭೇಟಿಯಾಗಲಿದ್ದಾರೆ. ಸಾವನ್ನಪ್ಪಿದವರಿಗೆ ಬೈಡನ್ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ. ಟೆಕ್ಸಾಸ್​ನ ಶಾಲೆಯಲ್ಲಿ ಯುವಕ ನಡೆಸಿದ ಗುಂಡಿನ ದಾಳಿಯಲ್ಲಿ 19 ಮಕ್ಕಳು ಸೇರಿದಂತೆ 21 ಮಂದಿ ಸಾವನ್ನಪ್ಪಿದ್ದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:53 am, Mon, 30 May 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್