AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ: ಫ್ರೀ ಪ್ಯಾಲೆಸ್ತೀನ್ ಘೋಷಣೆ, ಗುಂಡಿನ ದಾಳಿ, ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ

ವಾಷಿಂಗ್ಟನ್ ಡಿಸಿಯ ಯಹೂದಿ ವಸ್ತು ಸಂಗ್ರಹಾಲಯದ ಬಳಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಇಸ್ರೇಲಿ ರಾಯಭಾರ ಕಚೇರಿಯ ನೌಕರರು ಸಾವನ್ನಪ್ಪಿದ್ದಾರೆ ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಉಲ್ಲೇಖಿಸಿ ಎಪಿ ವರದಿ ಮಾಡಿದೆ. ಅಧಿಕಾರಿಗಳು ಮತ್ತು ಮಾಧ್ಯಮ ವರದಿಗಳ ಪ್ರಕಾರ, ಬುಧವಾರ ರಾತ್ರಿ ವಾಷಿಂಗ್ಟನ್ ಡಿಸಿಯ ಯಹೂದಿ ವಸ್ತುಸಂಗ್ರಹಾಲಯದಲ್ಲಿ ಕಾರ್ಯಕ್ರಮವೊಂದು ನಡೆಯುತ್ತಿತ್ತು. ನಂತರ ಕೆಲವು ಅಪರಿಚಿತ ದುಷ್ಕರ್ಮಿಗಳು ಹೊರಗೆ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಇಸ್ರೇಲಿ ರಾಯಭಾರ ಕಚೇರಿಯ ಇಬ್ಬರು ನೌಕರರು ಸಾವನ್ನಪ್ಪಿದ್ದಾರೆ.

ಅಮೆರಿಕ: ಫ್ರೀ ಪ್ಯಾಲೆಸ್ತೀನ್ ಘೋಷಣೆ, ಗುಂಡಿನ ದಾಳಿ, ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ
ವಾಷಿಂಗ್ಟನ್ Image Credit source: TSD
ನಯನಾ ರಾಜೀವ್
|

Updated on:May 22, 2025 | 9:58 AM

Share

ವಾಷಿಂಗ್ಟನ್, ಮೇ 22: ವಾಷಿಂಗ್ಟನ್ ಡಿಸಿಯ ಯಹೂದಿ ವಸ್ತು ಸಂಗ್ರಹಾಲಯದ ಬಳಿ ನಡೆದ ಗುಂಡಿನ ದಾಳಿ(Firing) ಯಲ್ಲಿ ಇಬ್ಬರು ಇಸ್ರೇಲಿ ರಾಯಭಾರ ಕಚೇರಿಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಉಲ್ಲೇಖಿಸಿ ಎಪಿ ವರದಿ ಮಾಡಿದೆ.  ‘ಫ್ರೀ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗುತ್ತಾ ಇಬ್ಬರು ಇಸ್ರೇಲಿ ರಾಯಭಾರ ಸಿಬ್ಬಂದಿ ಮೇಲೆ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಉಗ್ರರು ಇದೀಗ ಅಮೆರಿಕಕ್ಕೂ ದಾಳಿ ಇಟ್ಟಿದ್ದು, ಜನರಲ್ಲಿ ಭೀತಿ ಹೆಚ್ಚಿದೆ. ಅಷ್ಟೇ ಅಲ್ಲದೆ ಗುಂಡು ಹಾರಿಸಿದ ಬಳಿಕ ಒಬ್ಬ ವ್ಯಕ್ತಿ ಒಳಗಡೆ ಬಂದು ತನಗೆ ನೀರು ಮತ್ತೆ ಸುರಕ್ಷಿತ ಸ್ಥಳಬೇಕು ಎಂದು ಕೇಳಿದ್ದ. ನಂತರ ಪೊಲೀಸರು ಎಳೆದೊಯ್ಯುವಾಗ ಫ್ರೀ ಪ್ಯಾಲೆಸ್ತೀನ್ ಎಂದು ಕೂಗಿದ್ದಾನೆ. ಅಮೇರಿಕನ್ ಯಹೂದಿ ಸಮಿತಿಯ ಡಿಸಿ ಯಂಗ್ ಪ್ರೊಫೆಷನಲ್ ಬೋರ್ಡ್ ಆಯೋಜಿಸುವ ವಾರ್ಷಿಕ ಕಾರ್ಯಕ್ರಮ ಅದಾಗಿತ್ತು.

ಅಧಿಕಾರಿಗಳು ಮತ್ತು ಮಾಧ್ಯಮ ವರದಿಗಳ ಪ್ರಕಾರ, ಬುಧವಾರ ರಾತ್ರಿ ವಾಷಿಂಗ್ಟನ್ ಡಿಸಿಯ ಯಹೂದಿ ವಸ್ತುಸಂಗ್ರಹಾಲಯದಲ್ಲಿ ಕಾರ್ಯಕ್ರಮವೊಂದು ನಡೆಯುತ್ತಿತ್ತು. ನಂತರ ಕೆಲವು ಅಪರಿಚಿತ ದುಷ್ಕರ್ಮಿಗಳು ಹೊರಗೆ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಇಸ್ರೇಲಿ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ವಿಶ್ವಸಂಸ್ಥೆಯ ಇಸ್ರೇಲ್ ರಾಯಭಾರಿ ಡ್ಯಾನಿ ಡ್ಯಾನನ್  ಪೋಸ್ಟ್ ಮಾಡಿದ್ದು, ಇಸ್ರೇಲ್ ರಾಯಭಾರ ಕಚೇರಿಯ ನೌಕರರು ಮಾರಕ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಮಾರಕ ಗುಂಡಿನ ದಾಳಿಯು ಯೆಹೂದಿಗಳ ವಿರೋಧಿ ಭಯೋತ್ಪಾದನೆಯ ದುಷ್ಕೃತ್ಯವಾಗಿದೆ. ಯಹೂದಿ ಸಮುದಾಯಕ್ಕೆ ಹಾನಿ ಮಾಡಲು ಆಲೋಚಿಸಿರಬಹುದು ಎಂದು ಅಂದಾಜಿಸಲಾಗಿದೆ. ಅಧಿಕಾರಿಗಳು ಇನ್ನೂ ವಿವರಗಳನ್ನು ದೃಢೀಕರಿಸಿಲ್ಲ. ಮೃತರು ಮತ್ತು ಶಂಕಿತನ ಗುರುತು ಇನ್ನೂ ತಿಳಿದುಬಂದಿಲ್ಲ ಎಂದಿದ್ದಾರೆ.

ಮತ್ತಷ್ಟು ಓದಿ: ಟರ್ಕಿಶ್ ಡ್ರೋನ್​ಗಳಿಂದ ಭಾರತದ ಮೇಲೆ ಪಾಕ್ ದಾಳಿ, ಜಮ್ಮು ಸೇರಿ ಹಲವೆಡೆ ಗುಂಡಿನ ಆರ್ಭಟ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಪಾಕಿಸ್ತಾನ; ಇಂದು ಏನೇನಾಯ್ತು?

ಕ್ಯಾಪಿಟಲ್ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ಗುಂಡಿನ ದಾಳಿ ನಡೆದ ಸ್ಥಳಕ್ಕೆ ತಾನು ಮತ್ತು  ಯುಎಸ್ ಅಟಾರ್ನಿ ಜೀನೈನ್ ಪಿರೋ ಆಗಮಿಸಿದ್ದೇವೆ ಎಂದು ಯುಎಸ್ ಅಟಾರ್ನಿ ಜನರಲ್ ಪ್ಯಾಮ್ ಬೋಂಡಿ  ಪೋಸ್ಟ್ ಮಾಡಿದ್ದಾರೆ. ಬುಧವಾರ ಸಂಜೆ ವಾಷಿಂಗ್ಟನ್‌ನಲ್ಲಿರುವ ಇಬ್ಬರು ಇಸ್ರೇಲಿ ರಾಯಭಾರ ಕಚೇರಿಯ ನೌಕರರನ್ನು ಯಹೂದಿ ವಸ್ತುಸಂಗ್ರಹಾಲಯದ ಬಳಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ತಿಳಿಸಿದ್ದಾರೆ.

ರಾಜಧಾನಿಯಲ್ಲಿರುವ ಎಫ್‌ಬಿಐ ಕ್ಷೇತ್ರ ಕಚೇರಿಯಿಂದ ಸ್ವಲ್ಪವೇ ದೂರದಲ್ಲಿರುವ ಕ್ಯಾಪಿಟಲ್ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ಗುಂಡಿನ ದಾಳಿ ನಡೆದಿದ್ದು, ಎಕ್ಸ್​ನಲ್ಲಿ ಪೋಸ್ಟ್‌ನಲ್ಲಿ ನೋಯೆಮ್ ಸಾವನ್ನು ದೃಢಪಡಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  

Published On - 9:39 am, Thu, 22 May 25