Imran Khan: ಇಂದಲ್ಲ ನಾಳೆ ತಾಲಿಬಾನ್​ ಸರ್ಕಾರವನ್ನು ಅಮೆರಿಕ ಒಪ್ಪಿಕೊಳ್ಳಲೇಬೇಕು ಎಂದ ಪಾಕ್ ಪ್ರಧಾನಿ ಇಮ್ರಾನ್​ ಖಾನ್

ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸುತ್ತಿರುವ ತಾಲಿಬಾನ್ ಸರ್ಕಾರವನ್ನು ಇಂದಲ್ಲ ನಾಳೆ ಅಮೆರಿಕ ಗುರುತಿಸಲೇ ಬೇಕು ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅಭಿಪ್ರಾಯ ಪಟ್ಟಿದ್ದಾರೆ. ಅವರು ಹೇಳಿದ ಇನ್ನಷ್ಟು ಸಂಗತಿ ಈ ವರದಿಯಲ್ಲಿದೆ.

Imran Khan: ಇಂದಲ್ಲ ನಾಳೆ ತಾಲಿಬಾನ್​ ಸರ್ಕಾರವನ್ನು ಅಮೆರಿಕ ಒಪ್ಪಿಕೊಳ್ಳಲೇಬೇಕು ಎಂದ ಪಾಕ್ ಪ್ರಧಾನಿ ಇಮ್ರಾನ್​ ಖಾನ್
ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ (ಸಂಗ್ರಹ ಚಿತ್ರ)
Follow us
TV9 Web
| Updated By: Srinivas Mata

Updated on: Oct 03, 2021 | 12:49 AM

ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸುತ್ತಿರುವ ತಾಲಿಬಾನ್ ಸರ್ಕಾರದ ಪರವಾಗಿ ಮಾತನಾಡುವುದನ್ನು ಪಾಕಿಸ್ತಾನ ಮುಂದುವರಿಸಿದೆ. ತಾಲಿಬಾನ್​ ನೇತೃತ್ವದ ಸರ್ಕಾರವನ್ನು ಈಗಲ್ಲದಿದ್ದರೂ ಮುಂದೆಯಾದರೂ ಅಮೆರಿಕಾ ಒಪ್ಪಿಕೊಳ್ಳಲೇಬೇಕು ಎಂದು ಪಾಕ್​ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಟಿಆರ್​ಟಿ ವರ್ಲ್ಡ್ ಸಂದರ್ಶನದಲ್ಲಿ ಮಾತನಾಡಿದ ಅವರು, ಪಾಕಿಸ್ತಾನವೊಂದು ಏಕಪಕ್ಷೀಯವಾಗಿ ತಾಲಿಬಾನ್​ ಸರ್ಕಾರವನ್ನು ಗುರುತಿಸುವ ಮೂಲಕ ಏನೂ ಬದಲಾವಣೆ ಆಗಲ್ಲ. ಅಮೆರಿಕ, ಯುರೋಪ್, ಚೀನಾ ಮತ್ತು ರಷ್ಯಾ ಕೂಡ ಆದ್ಯತೆಯ ಮೇಲೆ ಗುರುತಿಸಬೇಕಾಗುತ್ತದೆ ಎಂದು ಇಮ್ರಾನ್ ಖಾನ್ ಹೇಳಿರುವುದಾಗಿ ಜಿಯೋ ಟಿವಿ ವರದಿ ಮಾಡಿದೆ. “ನೆರೆ ರಾಷ್ಟ್ರಗಳ ಜತೆ ಪಾಕಿಸ್ತಾನವು ಈ ಸಂಬಂಧವಾಗಿ ಮಾತುಕತೆ ನಡೆಸುತ್ತಿದೆ ಮತ್ತು ಭೇಟಿಯ ನಂತರ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು,” ಎಂದು ಖಾನ್ ಹೇಳಿರುವುದಾಗಿ ವರದಿಯಾಗಿದೆ.

ತಾಲಿಬಾನ್​ನಿಂದ ಅಪ್ಘಾನಿಸ್ತಾನದ ರಾಜಧಾನಿ ಕಾಬೂಲ್ ಅನ್ನು ವಶಪಡಿಸಿಕೊಂಡ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಬೂಲ್ ವಶಕ್ಕೆ ಪಡೆಯುವಾಗ ಹರಿದ ರಕ್ತದಿಂದ ನಾವು ಗಾಬರಿ ಆಗಿದ್ದೆವು ಮತ್ತು ಶಾಂತಿಯುತವಾದ ಅಧಿಕಾರ ಹಸ್ತಾಂತರ ಅನಿರೀಕ್ಷಿತವಾದದ್ದು ಎಂದು ಇಮ್ರಾನ್​ ಖಾನ್ ಹೇಳಿದ್ದಾರೆ. ಅಂತರರಾಷ್ಟ್ರೀಯ ಸಮುದಾಯವು ಅಫ್ಘಾನಿಸ್ತಾನ ಸರ್ಕಾರಕ್ಕೆ ನೆರವು ಒದಗಿಸಬೇಕು. ಏಕೆಂದರೆ ಆ ದೇಶ ಬಹುತೇಕ ವಿದೇಶೀ ಹಣಕಾಸಿನ ನೆರವಿನ ಮೇಲೆ ಅವಲಂಬಿತ ಆಗಿದೆ ಎಂದು ಹೇಳಿದ್ದಾರೆ.

“ಒಂದು ವೇಳೆ ಅಂತರರಾಷ್ಟ್ರೀಯ ಸಮುದಾಯವು ಆಫ್ಘನ್ ಜನರ ನೆರವಿಗೆ ಮುಂದೆ ಬಾರದಿದ್ದಲ್ಲಿ ಮಾನವೀಯ ಬಿಕ್ಕಟ್ಟು ಉದ್ಭವಿಸಲಿದೆ,” ಎಂದು ಇಮ್ರಾನ್ ಖಾನ್ ಅಭಿಪ್ರಾಯ ಪಟ್ಟಿದ್ದಾರೆ. ಪಾಕಿಸ್ತಾನವು ತಾಲಿಬಾನ್ ಅನ್ನು ಬಹಿರಂಗವಾಗಿ ಮತ್ತು ರಹಸ್ಯವಾಗಿ ಬೆಂಬಲಿಸುತ್ತಿದೆ ಎಂದು ಆರೋಪಿಸಲಾಗುತ್ತಿದೆ.

ಇದನ್ನೂ ಓದಿ: Geopolitics: ತಾಲಿಬಾನ್ ಅಧಿಕಾರ ಸ್ವೀಕಾರ ಸಮಾರಂಭಕ್ಕೆ 6 ದೇಶಗಳಿಗೆ ಆಹ್ವಾನ, ಅಫ್ಘಾನಿಸ್ತಾನದ ಭವಿಷ್ಯದ ಮೇಲೆ ಪ್ರಭಾವಿ ದೇಶಗಳ ನೆರಳು

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ