ವಿದೇಶಗಳಲ್ಲಿಯೂ ಭಾರತದ ಪವರ್! ಆಂಧ್ರದ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿಕೊಡಲು ಅಖಾಡಕ್ಕಿಳಿದ ರಾಯಭಾರ ಕಚೇರಿ
ವಿದೇಶಗಳಲ್ಲಿ ಸಿಲುಕಿ ಹಾಕಿಕೊಂಡಿರುವ ಭಾರತೀಯರನ್ನು ವಾಪಸ್ ಕರೆತರುವುದು, ಬೇರೆ ದೇಶಗಳಲ್ಲಿ ಕಾನೂನಾತ್ಮಕವಾಗಿ ಸಮಸ್ಯೆಯಲ್ಲಿ ಸಿಲುಕಿಹಾಕಿಕೊಂಡವರಿಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಭಾರತೀಯ ವಿದೇಶಾಂಗ ಇಲಾಖೆ ಕಳೆದ ಕೆಲವು ವರ್ಷಗಳಿಂದ ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರಿಂದ ಅನೇಕ ಸಂತ್ರಸ್ತರಿಗೆ ಪ್ರಯೋಜನಗಳಾಗಿವೆ. ಅದೇ ರೀತಿ ಇದೀಗ ಆಂಧ್ರ ಮೂಲದ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿಕೊಡಲು ಭಾರತ ಮುಂದಾಗಿದೆ.
ವಾಷಿಂಗ್ಟನ್, ಫೆಬ್ರವರಿ 24: ಅಮೆರಿಕದಲ್ಲಿ (United States) ಪೊಲೀಸ್ ಅಧಿಕಾರಿಯೊಬ್ಬರ ಕಾರು ಡಿಕ್ಕಿಯಾಗಿ ಮೃತಪಟ್ಟ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂಡುಲಾ (Jaahnavi Kandula) ಕುಟುಂಬದವರಿಗೆ ನ್ಯಾಯ ಒದಗಿಸಲು ಎಲ್ಲ ರೀತಿಯ ಪ್ರಯತ್ನ ಮಾಡುವುದಾಗಿ ಭಾರತೀಯ ರಾಯಭಾರಿ (Indian Consulate) ಕಚೇರಿ ಭರವಸೆ ನೀಡಿದೆ. ಆಂಧ್ರಪ್ರದೇಶ ಮೂಲದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ, 23 ವರ್ಷ ವಯಸ್ಸಿನ ಜಾಹ್ನವಿ, ಸಿಯಾಟಲ್ ಪೊಲೀಸ್ ಅಧಿಕಾರಿಯ ಕಾರು ಡಿಕ್ಕಿಯಾಗಿ ಕಳೆದ ವರ್ಷ ಜನವರಿಯಲ್ಲಿ ಮೃತಪಟ್ಟಿದ್ದರು. ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಅಮೆರಿಕ ನ್ಯಾಯಾಲಯ ಇತ್ತೀಚೆಗೆ ವಜಾಗೊಳಿಸಿದೆ.
ಕಳೆದ ವರ್ಷ ಜನವರಿ 23ರಂದು ಅಪಘಾತ ಸಂಭವಿಸಿತ್ತು. ಸುಮಾರು 120 ಕಿಲೋಮೀಟರ್ ವೇಗದಲ್ಲಿ ಸಂಚರಿಸುತ್ತಿದ್ದ ಪೊಲೀಸ್ ಅಧಿಕಾರಿಯ ಕಾರು ಜಾಹ್ನವಿ ಅವರಿಗೆ ಡಿಕ್ಕಿ ಹೊಡೆದು ಅವರನ್ನು ಸುಮಾರು ನೂರು ಅಡಿ ದೂರ ಎಸೆದಿತ್ತು. ಭೀಕರ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯ ಸಹೋದ್ಯೋಗಿ ಕಾರಿನಲ್ಲಿ ನಗಾಡುತ್ತಿದ್ದುದು ಬಾಡಿಕ್ಯಾಮ್ ಫೂಟೇಜ್ನಿಂದ ತಿಳಿದು ಬಂದಿತ್ತು.
ಜಾಹ್ನವಿ ಕುಟುಂಬದವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಪೊಲೀಸರು ತನಿಖೆಯನ್ನು ಪೂರ್ತಿಯಾಗಿ ಮುಕ್ತಾಯಗೊಳಿಸುವುದನ್ನು ಕಾಯಲಾಗುತ್ತಿದೆ ಎಂದು ಭಾರತೀಯ ರಾಯಭಾರಿ ಕಚೇರಿ ತಿಳಿಸಿದೆ.
‘ಜಾಹ್ನವಿ ಕಂಡುಲಾ ಅವರ ದುರದೃಷ್ಟಕರ ಸಾವಿನ ಕುರಿತು ಕಿಂಗ್ ಕೌಂಟಿ ಪ್ರಾಸಿಕ್ಯೂಷನ್ ಅಟಾರ್ನಿ ಇತ್ತೀಚೆಗೆ ಬಿಡುಗಡೆ ಮಾಡಿದ ತನಿಖಾ ವರದಿ ದುರದೃಷ್ಟಕರ. ಕಾನ್ಸುಲೇಟ್ ಕಚೇರಿಯು ಜಾಹ್ನವಿ ಕುಟುಂಬದ ಪ್ರತಿನಿಧಿಗಳೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದೆ ಮತ್ತು ಅವರ ಕುಟುಂಬಕ್ಕೆ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವುದನ್ನು ಮುಂದುವರಿಸುತ್ತದೆ. ಸೂಕ್ತ ಪರಿಹಾರಕ್ಕಾಗಿ ಸಿಯಾಟಲ್ ಪೊಲೀಸ್ ಸೇರಿದಂತೆ ಸ್ಥಳೀಯ ಅಧಿಕಾರಿಗಳೊಂದಿಗೆ ನಾವು ವಿಷಯವನ್ನು ಬಲವಾಗಿ ಪ್ರತಿಪಾದಿಸಿದ್ದೇವೆ. ಪ್ರಕರಣದ ವಿವರವನ್ನು ಈಗ ಪರಿಶೀಲನೆಗಾಗಿ ಸಿಯಾಟಲ್ ಸಿಟಿ ಅಟಾರ್ನಿ ಕಚೇರಿಗೆ ಕಳುಹಿಸಿಕೊಡಲಾಗಿದೆ. ನಾವು ಸಿಯಾಟಲ್ ಪೋಲೀಸರು ತನಿಖೆಯನ್ನು ಪೂರ್ಣಗೊಳಿಸಲು ಕಾಯುತ್ತಿದ್ದೇವೆ ಮತ್ತು ಪ್ರಕರಣದ ಪ್ರಗತಿಯನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತೇವೆ’ ಎಂದು ರಾಯಭಾರ ಕಚೇರಿ ಸಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹೇಳಿಕೆ ಬಿಡುಗಡೆ ಮಾಡಿದೆ.
On the recently released investigation report of the King County Prosecution Attorney on the unfortunate death of Jaahnavi Kandula, Consulate has been in regular touch with the designated family representatives and will continue to extend all possible support in ensuring justice…
— India In Seattle (@IndiainSeattle) February 23, 2024
ವಿದೇಶಗಳಲ್ಲಿ ಭಾರತದ ಪವರ್!
ವಿದೇಶಗಳಲ್ಲಿ ಸಿಲುಕಿ ಹಾಕಿಕೊಂಡಿರುವ ಭಾರತೀಯರನ್ನು ವಾಪಸ್ ಕರೆತರುವುದು, ಬೇರೆ ದೇಶಗಳಲ್ಲಿ ಕಾನೂನಾತ್ಮಕವಾಗಿ ಸಮಸ್ಯೆಯಲ್ಲಿ ಸಿಲುಕಿಹಾಕಿಕೊಂಡವರಿಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಭಾರತೀಯ ವಿದೇಶಾಂಗ ಇಲಾಖೆ ಕಳೆದ ಕೆಲವು ವರ್ಷಗಳಿಂದ ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರಿಂದ ಅನೇಕ ಸಂತ್ರಸ್ತರಿಗೆ ಪ್ರಯೋಜನಗಳಾಗಿವೆ. ಅದೇ ರೀತಿ ಇದೀಗ ಆಂಧ್ರ ಮೂಲದ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿಕೊಡಲು ಭಾರತ ಮುಂದಾಗಿದೆ.
ಇದನ್ನೂ ಓದಿ: ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಇಬ್ಬರು ಅಪರಾಧಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿದ ತಾಲಿಬಾನ್
ಬೇಹುಗಾರಿಕೆ ಪ್ರಕರಣದ ಆರೋಪದಲ್ಲಿ ಕತಾರ್ನಲ್ಲಿ ಬಂಧನಕ್ಕೆ ಒಳಗಾಗಿದ್ದ ಭಾರತೀಯ ನೌಕಾಪಡೆಯ ಎಂಟು ಮಂದಿ ಸಿಬ್ಬಂದಿಯನ್ನು ಇತ್ತೀಚೆಗೆ ಬಿಡುಗಡೆಗೊಳಿಸಿ ಭಾರತಕ್ಕೆ ಕರೆತರಲಾಗಿತ್ತು. ಈ ನಿಟ್ಟಿನಲ್ಲಿ ವಿದೇಶಾಂಗ ಇಲಾಖೆ ಮಹತ್ವದ ಪಾತ್ರ ವಹಿಸಿತ್ತು. ಇದೀಗ ಅಮೆರಿಕದಲ್ಲಿ ಮೃತಪಟ್ಟ ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿನಿಯ ಕುಟುಂಬದವರಿಗೆ ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ಇಲಾಖೆ ಕ್ರಮಕ್ಕೆ ಮುಂದಾಗಿದೆ.
ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ