Nepal Annapurna Mountain: ನೇಪಾಳದ ಅನ್ನಪೂರ್ಣ ಪರ್ವತದಿಂದ ಭಾರತೀಯ ಪರ್ವತಾರೋಹಿ ಅನುರಾಗ್ ನಾಪತ್ತೆ
ಭಾರತದ ಭರವಸೆಯ ಪರ್ವತಾರೋಹಿ ಅನುರಾಗ್ ಮಾಲು ನೇಪಾಳದ ಅನ್ನಪೂರ್ಣ ಪರ್ವತದಿಂದ ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಭಾರತದ ಭರವಸೆಯ ಪರ್ವತಾರೋಹಿ ಅನುರಾಗ್ ಮಾಲು ನೇಪಾಳದ ಅನ್ನಪೂರ್ಣ ಪರ್ವತದಿಂದ ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜಸ್ಥಾನದ ಕಿಶನ್‌ಗಢ್‌ನ ನಿವಾಸಿ ಅನುರಾಗ್ ಮಾಲು ಅವರು ಮೌಂಟ್ ಅನ್ನಪೂರ್ಣ ಕ್ಯಾಂಪ್ III ನಿಂದ ಇಳಿಯುವಾಗ ನಾಪತ್ತೆಯಾಗಿದ್ದಾರೆ. ಟ್ರೆಕ್ಕಿಂಗ್ ಕಾರ್ಯಾಚರಣೆಯನ್ನು ನಡೆಸಿದ ಸೆವೆನ್ ಸಮ್ಮಿಟ್ ಟ್ರೆಕ್ಸ್‌ನ ಅಧ್ಯಕ್ಷ ಮಿಂಗ್ಮಾ ಶೆರ್ಪಾ ಪಿಟಿಐಗೆ ತಿಳಿಸಿದ್ದಾರೆ.
ಅನ್ನಪೂರ್ಣ ವಿಶ್ವದ ಹತ್ತನೇ ಅತಿ ಎತ್ತರದ ಪರ್ವತವಾಗಿದ್ದು, ಸಮುದ್ರ ಮಟ್ಟದಿಂದ 8,091 ಮೀಟರ್ ಎತ್ತರದಲ್ಲಿದೆ. ಸುಮಾರು 6,000 ಮೀಟರ್ ಕೆಳಗೆ ಬಿದ್ದು ನಾಪತ್ತೆಯಾಗಿದ್ದಾರೆ ಎಂದು ಸೆವೆನ್ ಸಮ್ಮಿಟ್ ಟ್ರೆಕ್ಸ್‌ನ ಅಧ್ಯಕ್ಷ ಮಿಂಗ್ಮಾ ಶೆರ್ಪಾ ಹಿಮಾಲಯನ್ ಟೈಮ್ಸ್‌ಗೆ ತಿಳಿಸಿದ್ದಾರೆ.
ಮತ್ತಷ್ಟು ಓದಿ: Uttarakhand Snowfall: ಹಿಮಾಲಯದ ಸುತ್ತ ಭಾರೀ ಹಿಮಪಾತ; ಹಿಮದ ಮಳೆಗೆ ಸಿಕ್ಕ ಪ್ರವಾಸಿಗರು
ಮಾಲು ಪರ್ವತಾರೋಹಣಕ್ಕಾಗಿ ಖ್ಯಾತ ಪರ್ವತಾರೋಹಿ ಬಚೇಂದ್ರಿ ಪಾಲ್ ಅವರ ಮಾರ್ಗದರ್ಶನ ಮತ್ತು ಸಲಹೆಯನ್ನು ಪಡೆದಿದ್ದರು. ಕಾಣೆಯಾದ ಆರೋಹಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಶೆರ್ಪಾ ಹೇಳಿದರು, ಆದರೆ ಅವರ ಸ್ಥಿತಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ಪರ್ವತದಲ್ಲಿ ಇಂತಹ ಹಲವು ಅವಘಡಗಳು ಸಂಭವಿಸಿವೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ