ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿ ಶ್ರೇಯಸ್ ಸಾವು, ವರ್ಷದಲ್ಲಿ ನಾಲ್ಕನೇ ಘಟನೆ

|

Updated on: Feb 02, 2024 | 8:34 AM

ಅಮೆರಿಕದ ಓಹಿಯೋ ರಾಜ್ಯದ ಸಿನ್ಸಿನಾಟಿಯಲ್ಲಿ ಗುರುವಾರ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ. ವಿದ್ಯಾರ್ಥಿಯನ್ನು ಶ್ರೇಯಸ್ ರೆಡ್ಡಿ ಬೆನಿಗೇರಿ ಎಂದು ಗುರುತಿಸಲಾಗಿದೆ. ಸಿಕ್ಕಿರುವ ಮಾಹಿತಿಯ ಪ್ರಕಾರ, ಭಾರತ ಮೂಲದ ವಿದ್ಯಾರ್ಥಿಯ ಸಾವಿನ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಹೇಳಿದ್ದಾರೆ.

ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿ ಶ್ರೇಯಸ್ ಸಾವು, ವರ್ಷದಲ್ಲಿ ನಾಲ್ಕನೇ ಘಟನೆ
ಪೊಲೀಸ್
Image Credit source: NDTV
Follow us on

ಅಮೆರಿಕದ ಓಹಿಯೋ ರಾಜ್ಯದ ಸಿನ್ಸಿನಾಟಿಯಲ್ಲಿ ಗುರುವಾರ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ. ವಿದ್ಯಾರ್ಥಿಯನ್ನು ಶ್ರೇಯಸ್ ರೆಡ್ಡಿ ಬೆನಿಗೇರಿ ಎಂದು ಗುರುತಿಸಲಾಗಿದೆ. ಸಿಕ್ಕಿರುವ ಮಾಹಿತಿಯ ಪ್ರಕಾರ, ಭಾರತ ಮೂಲದ ವಿದ್ಯಾರ್ಥಿಯ ಸಾವಿನ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಹೇಳಿದ್ದಾರೆ.

ರಾಯಭಾರ ಕಚೇರಿಯು ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿದೆ ಮತ್ತು ಅವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುತ್ತಿದೆ. ಭಾರತೀಯ ಮೂಲದ ವಿದ್ಯಾರ್ಥಿಯನ್ನು ಶ್ರೇಯಸ್ ರೆಡ್ಡಿ ಬೆನಿಗೇರಿ ಎಂದು ಗುರುತಿಸಲಾಗಿದೆ. ಓಹಿಯೋದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಶ್ರೇಯಸ್ ರೆಡ್ಡಿ ಬೆನಿಗೇರಿ ಅವರ ದುರದೃಷ್ಟಕರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ‘X’ ನಲ್ಲಿ ಬರೆದಿದ್ದಾರೆ.

ಬೆನ್ನಿಗೇರಿಯ ಸಾವಿಗೆ ಕಾರಣ ತಿಳಿದಿಲ್ಲ ಆದರೆ ಒಂದು ವಾರದೊಳಗೆ ನಡೆದ ನಾಲ್ಕನೇ ಸಾವು ಇದಾಗಿದ್ದು, ಅಮೆರಿಕದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರನ್ನು ಕಳವಳಗೊಳಿಸಿದೆ.

ಮತ್ತಷ್ಟು ಓದಿ: ಭಾರತೀಯ ವಿದ್ಯಾರ್ಥಿಯಿಂದ ಅಮೆರಿಕದಲ್ಲಿ ಮೂವರ ಬರ್ಬರ ಹತ್ಯೆ

ಪರ್ಡ್ಯೂ ವಿಶ್ವವಿದ್ಯಾನಿಲಯದಲ್ಲಿ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ನೀಲ್ ಆಚಾರ್ಯ ಕಾಣೆಯಾದ ಒಂದು ದಿನದ ನಂತರ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದ. ಸಾವಿಗೆ ಕಾರಣವೇನು ಎಂಬುದು ಅಸ್ಪಷ್ಟವಾಗಿಯೇ ಉಳಿದಿದೆ. ಜಾರ್ಜಿಯಾದ ಲಿಥೋನಿಯಾದ ಅಂಗಡಿಯೊಂದರಲ್ಲಿ ವಿವೇಕ್ ಸೈನಿ ಎಂಬ ಇನ್ನೊಬ್ಬ ಭಾರತೀಯ ವಿದ್ಯಾರ್ಥಿಯನ್ನು ಮಾದಕ ವ್ಯಸನಿಯೊಬ್ಬ ಸುತ್ತಿಗೆಯಿಂದ ಬರ್ಬರವಾಗಿ ಹತ್ಯೆ ಮಾಡಿದ್ದ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ