AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Turkey Earthquake: ಟರ್ಕಿಯಲ್ಲಿ 6.0 ತೀವ್ರತೆಯ ಮತ್ತೊಂದು ಭೂಕಂಪ

ಟರ್ಕಿಯಲ್ಲಿ 6.0 ರ ತೀವ್ರತೆಯ ಮತ್ತೊಂದು ಭೂಕಂಪವು ಮಧ್ಯ ಟರ್ಕಿಯಲ್ಲಿ ನಡೆದಿದೆ ಎಂದು USGS ಹೇಳಿದೆ ಎಂದು ಎಎನ್​ಐ ವರದಿ ಮಾಡಿದೆ, ಇದು 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಎರಡು ಪ್ರಬಲ ಭೂಕಂಪಗಳ ನಂತರ ಟರ್ಕಿಯಲ್ಲಿ ಮೂರನೇ ಭೂಕಂಪವಾಗಿದೆ .

Turkey Earthquake: ಟರ್ಕಿಯಲ್ಲಿ 6.0 ತೀವ್ರತೆಯ ಮತ್ತೊಂದು ಭೂಕಂಪ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
| Edited By: ರಶ್ಮಿ ಕಲ್ಲಕಟ್ಟ|

Updated on:Feb 06, 2023 | 7:44 PM

Share

ಇಸ್ತಾಂಬುಲ್: 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಎರಡು ಪ್ರಬಲ ಭೂಕಂಪಗಳ ನಂತರ, ಸೋಮವಾರ ಮಧ್ಯ ಟರ್ಕಿಯಲ್ಲಿ (Turkey) 6.0 ತೀವ್ರತೆಯ ಮತ್ತೊಂದು ಭೂಕಂಪ (Earthquake) ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (USGS) ತಿಳಿಸಿದೆ. ವರದಿಗಳ ಪ್ರಕಾರ, ಎರಡು ಬೃಹತ್ ಭೂಕಂಪಗಳು ಆಗ್ನೇಯ ಟರ್ಕಿ ಮತ್ತು ಸಿರಿಯಾದಲ್ಲಿ ಹಲವಾರು ಕಟ್ಟಡಗಳನ್ನು ನೆಲಸಮ ಮಾಡಿದ್ದು ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಸಿರಿಯಾದ ರಾಜ್ಯ ದೂರದರ್ಶನದ ಪ್ರಕಾರ, ಉತ್ತರ ನಗರ ಅಲೆಪ್ಪೊ ಮತ್ತು ಕೇಂದ್ರ ನಗರವಾದ ಹಮಾದಲ್ಲಿ ಕಟ್ಟಡಗಳು ಕುಸಿದಿವೆ.ಇದಲ್ಲದೆ, ಸಿರಿಯಾದ ರಾಜ್ಯ ಸುದ್ದಿ ಸಂಸ್ಥೆ 320 ಕ್ಕೂ ಹೆಚ್ಚು ಸಾವುಗಳು ಮತ್ತು 1,000 ಕ್ಕೂ ಹೆಚ್ಚು ಗಾಯಗಳನ್ನು ವರದಿ ಮಾಡಿದೆ.

ವೈಟ್ ಹೆಲ್ಮೆಟ್ಸ್ ರಕ್ಷಣಾ ಸಂಸ್ಥೆಯು ಸಿರಿಯಾದಲ್ಲಿ ಕಾರ್ಯನಿರ್ವಹಿಸುವ ಪ್ರದೇಶಗಳಲ್ಲಿ 147 ಜನರು ಸಾವನ್ನಪ್ಪಿದ್ದಾರೆ ಮತ್ತು 340 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಹೇಳಿದೆ. ಅದೇ ವೇಳೆ ನೂರಾರು ಜನರು ಇನ್ನೂ ಅವಶೇಷಗಳ ಅಡಿಯಲ್ಲಿ ಹೂತಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ದುರಂತದ ನಡುವೆ ಪ್ರಧಾನಿ ನರೇಂದ್ರ ಮೋದಿ “ಭಾರತವು ಟರ್ಕಿಯ ಜನರ ಜತೆ ನಿಲ್ಲುತ್ತದೆ. ಈ ದುರಂತವನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲ ನೆರವು ನೀಡಲು ಸಿದ್ಧವಾಗಿದೆ” ಎಂದು ಹೇಳಿದ್ದಾರೆ. ರಕ್ಷಣಾ ತಂಡಗಳು, ವೈದ್ಯಕೀಯ ತಂಡಗಳು ಮತ್ತು ಪರಿಹಾರ ಸಾಮಗ್ರಿಗಳನ್ನು ಕಳುಹಿಸಲು ಸರ್ಕಾರ ನಿರ್ಧರಿಸಿದೆ.

7.8 ತೀವ್ರತೆಯ ಭೂಕಂಪವು ಸಿರಿಯನ್ ಗಡಿಯಿಂದ 90 ಕಿಲೋಮೀಟರ್ ದೂರದಲ್ಲಿರುವ ಗಾಜಿಯಾಂಟೆಪ್‌ನಲ್ಲಿ ಕೇಂದ್ರಬಿಂದುವನ್ನು ಹೊಂದಿತ್ತು. ಈ ಪ್ರದೇಶದಲ್ಲಿ ಸಿರಿಯನ್ ಅಂತರ್ಯುದ್ಧದಿಂದ ಲಕ್ಷಾಂತರ ನಿರಾಶ್ರಿತರು ನೆಲೆಸಿದ್ದಾರೆ. ದೂರದ ಕೈರೋದವರೆಗೂ ಭೂಕಂಪದ ಅನುಭವವಾಗಿದೆ.

ಇದನ್ನೂ ಓದಿ: Turkey Earthquake: ಟರ್ಕಿ ಭೂಕಂಪದಲ್ಲಿ 912 ಮಂದಿ ಸಾವು; ರಕ್ಷಣಾ ಕಾರ್ಯ, ವೈದ್ಯಕೀಯ ಸಹಾಯ ನೀಡಲಿದೆ ಭಾರತ

ನ್ಯೂಯಾರ್ಕ್‌ನ ಬಫಲೋದಲ್ಲಿ  3.8 ತೀವ್ರತೆಯ ಭೂಕಂಪನ

ಸೋಮವಾರ ಬೆಳಿಗ್ಗೆ ನ್ಯೂಯಾರ್ಕ್‌ನ ಉಪನಗರವಾದ ಬಫಲೋದಲ್ಲಿ ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ. ಯುಎಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಯುನೈಟೆಡ್ ಸ್ಟೇಟ್ಸ್ನಲ್ಲಿ ಸಣ್ಣ ಭೂಕಂಪನದ ಕೇಂದ್ರಬಿಂದು ಪಶ್ಚಿಮ ಸೆನೆಕಾ ಆಗಿತ್ತು. ಆದಾಗ್ಯೂ, ನಯಾಗರಾ ಜಲಪಾತ ಮತ್ತು ಆರ್ಚರ್ಡ್ ಪಾರ್ಕ್ ಪಟ್ಟಣದ ಬಳಿ ಕಂಪನದ ಅನುಭವಕ್ಕೆ ಬಂದಿದೆ. ಬಫಲೋದಲ್ಲಿರುವ ನನ್ನ ಮನೆಗೆ ಕಾರು ಡಿಕ್ಕಿ ಹೊಡೆದಂತೆ ಭಾಸವಾಯಿತು. ನಾನು ಹಾಸಿಗೆಯಿಂದ ಜಿಗಿದಿದ್ದೇನೆ ಎಂದು ಎರಿ ಕೌಂಟಿ ಕಾರ್ಯನಿರ್ವಾಹಕ ಮಾರ್ಕ್ ಪೊಲೊನ್ಕಾರ್ಜ್ ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:01 pm, Mon, 6 February 23

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು